ಶೀಘ್ರದಲ್ಲಿಯೇ ಕಾಂಗ್ರೆಸ್ ಗೆ ರಾಜೀನಾಮೆ: ವಿಶ್ವನಾಥ್

ಮೈಸೂರು, ಜೂನ್ 09 : ರಾಜ್ಯ ಕಾಂಗ್ರೆಸ್ ನಾಯಕರ ವರ್ತನೆಯಿಂದ ಬೇಸತ್ತಿರುವ ಮಾಜಿ ಸಂಸದ ಎಚ್ ವಿಶ್ವನಾಥ್ ಅವರು ಶೀಘ್ರದಲ್ಲೇ ಕಾಂಗ್ರೆಸ್ ಗೆ ರಾಜೀನಾಮೆ ನೀಡುವುದಾಗಿ ಶುಕ್ರವಾರ ಹೇಳಿದರು.

ಕೆ ಆರ್ ನಗರದಲ್ಲಿ ಅವರ ಅಭಿಮಾನಿಗಳು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, "ಅತ್ಯಂತ ನೋವಿನಿಂದ ನಾನು ಪಕ್ಷ ತೊರೆಯಬೇಕಾದ ಪರಿಸ್ಥಿತಿ ಬಂದಿದೆ. ರಾಜೀನಾಮೆ ನೀಡುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಮಯ ಈಗ ಬಂದಿದೆ ಎಂದು ನೋವಿನಿಂದ ಹೇಳಿದರು".

[ವಿಶ್ವನಾಥ್ ಸಂದರ್ಶನ : ಇರುವುದೋ ಬಿಡುವುದೋ ನೀವೇ ಹೇಳಿ!]

I will resign soon from congress says H Vishwanath

ಕಾಂಗ್ರೆಸ್ ಗೆ ರಾಜಿನಾಮೆ ನೀಡಿದ ನಂತರ ಮುಂದೆ ಯಾವ ಪಕ್ಷ ಸೇರಬೇಕು ಎಂಬುದರ ಬಗ್ಗೆ ಇನ್ನು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಈ ಕುರಿತು ಸ್ನೇಹಿತರು, ಹಿತೈಷಿಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು.

ಇತ್ತೀಚಿಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಚರ್ಚಿಸಿದ ವಿಶ್ವನಾಥ್, ಜೆಡಿಎಸ್ ಸೇರ್ಪಡೆಯತ್ತ ಒಲವು ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+