ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುನಿಸಿಕೊಂಡ ಕುಮಾರಸ್ವಾಮಿ: ಸಂತೈಸುತ್ತೇನೆಂದ ಸಿದ್ದರಾಮಯ್ಯ!

|
Google Oneindia Kannada News

ಮೈಸೂರು, ಜನವರಿ 28: "ಸಮಸ್ಯೆ ನಮ್ಮಲ್ಲಿಲ್ಲ, ಅದನ್ನು ಸೃಷ್ಟಿ ಮಾಡುತ್ತಿರುವವರು ನೀವು(ಮಾಧ್ಯಮ). ನಾನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಳಿ ಮಾತನಾಡುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

"ಸಿದ್ದರಾಮಯ್ಯ ಅವರೇ ನಮ್ಮ ನಾಯಕರು" ಎಂದು ಕೆಲವು ಕಾಂಗ್ರೆಸ್ ಶಾಸಕರು ಹೇಳಿರುವುದು ಹಾಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಇರಿಸುಮುರಿಸು ಉಂಟು ಮಾಡಿರುವುದನ್ನು ಮನಗಂಡ ಸಿದ್ದರಾಮಯ್ಯ ಈ ರೀತಿ ಪ್ರತಿಕ್ರಿಯೆ ನೀಡಿದರು.

ರಾಜೀನಾಮೆಗೆ ಸಿದ್ಧ: ಎಚ್ಡಿಕೆ ಶಾಕಿಂಗ್ ಹೇಳಿಕೆಗೆ ಕಾರಣವೇನು?ರಾಜೀನಾಮೆಗೆ ಸಿದ್ಧ: ಎಚ್ಡಿಕೆ ಶಾಕಿಂಗ್ ಹೇಳಿಕೆಗೆ ಕಾರಣವೇನು?

"ಸಮಸ್ಯೆಯನ್ನು ಸೃಷ್ಟಿಸುತ್ತಿರುವವರು ನೀವೇ(ಮಾಧ್ಯಮ). ನೀವೇ ಒಬ್ಬೊಬ್ಬರೇ ಶಾಸಕರ ಬಳಿ ಹೋಗಿ ಪ್ರಶ್ನೆ ಕೇಳುತ್ತಿರುವುದು. ನಮ್ಮಲ್ಲಿ ಯಾವುದೇ ಸಮಸ್ಯೆಯಿಲ್ಲ. ನಾನು ಎಚ್ ಡಿ ಕುಮಾರಸ್ವಾಮಿ ಅವರ ಬಳಿ ಮಾತನಾಡುತ್ತೇನೆ" ಎಂದು ಅವರು ಹೇಳಿದರು.

I will speak to HD Kumaraswamy says Siddaramaiah

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ ಪುಟ್ಟರಂಗ ಶೆಟ್ಟಿ, 'ಕನಕ ಸಮುದಾಯ ಭವನ'ದ ಉದ್ಘಾಟನೆಯ ಸಮಯದಲ್ಲಿ ಮಾತನಾಡುತ್ತಾ, 'ಸಿದ್ದರಾಮಯ್ಯ ಅವರೇ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬುದು ನನ್ನಾಸೆ' ಎಂದಿದ್ದರು.

ಆಡಳಿತ ನನ್ನ ಕೈಯಲಿಲ್ಲ, ಕಾಂಗ್ರೆಸ್‌ ಕೈಯಲ್ಲಿದೆ: ಕುಮಾರಸ್ವಾಮಿ ಅಸಮಾಧಾನಆಡಳಿತ ನನ್ನ ಕೈಯಲಿಲ್ಲ, ಕಾಂಗ್ರೆಸ್‌ ಕೈಯಲ್ಲಿದೆ: ಕುಮಾರಸ್ವಾಮಿ ಅಸಮಾಧಾನ

ಅವರ ಈ ಹೇಳಿಕೆಗೆ ಕೆಂಡಾಮಂಡಲವಾಗಿರುವ ಎಚ್ ಡಿ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರು, ಅವರ ಪಕ್ಷದ ಶಾಸಕರು ಅಸಂಬದ್ಧ ಹೇಳಿಕೆಗಳನ್ನು ನೀಡುವುದನ್ನು ನಿಯಂತ್ರಿಸದೆ ಇದ್ದರೆ, ನಾನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ಸಿದ್ಧ ಎಂದರು

English summary
Former Karnataka CM and Congress leader Siddaramaiah on 'Congress MLAs say Siddaramaiah is their leader': You (media) are the people who create trouble. You ask one person, then second person and then third person. There is no trouble, I will speak to HD Kumaraswamy
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X