• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

"ಎಲ್ಲದರಲ್ಲೂ ಮೂಗು ತೂರಿಸಲು ನಾನು ಸಾ.ರಾ.ಮಹೇಶ್ ಅಲ್ಲ"

By ಮೈಸೂರು ಪ್ರತಿನಿಧಿ
|

ಮೈಸೂರು, ಮೇ 21: ಮೈಮುಲ್ ಹುದ್ದೆಗಳ ನೇಮಕಾತಿಯಲ್ಲಿ ಅವ್ಯವಹಾರ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ ಜಿ.ಟಿ.ದೇವೇಗೌಡ, "ಸಾ.ರಾ.ಮಹೇಶ್ ಗೆ ಎಲ್ಲವೂ ಗೊತ್ತು. ಅವನಿಗೆ ಇರುವಷ್ಟು ಬುದ್ಧಿವಂತಿಕೆ ನನಗೆ ಇಲ್ಲ" ಎಂದು ವ್ಯಂಗ್ಯದ ಮಾತನ್ನಾಡಿದ್ದಾರೆ.

ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, "ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸದಸ್ಯರು ಅವರವರ ಕೆಲಸ ಮಾಡುವುದಕ್ಕೆ ನಾನು ಬಿಡುತ್ತೀನಿ. ಶಾಸಕನಾಗಿ ನಾನೇ ಎಲ್ಲವನ್ನು ಮಾಡಬೇಕು ಎನ್ನುವುದು ಸಾ.ರಾ.ಮಹೇಶ್ ಬುದ್ಧಿ. ಅವನಿಗೆ ಗೊತ್ತು ಎಲ್ಲಿ, ಏನಾಗಿದೆ ಅಂತ. ಸಾ.ರಾ.ಮಹೇಶ್ ಏನ್ ಕೆಲಸ ಮಾಡುತ್ತಾನೆ ಅಂತ ಎಲ್ಲರಿಗೂ ಗೊತ್ತು" ಎಂದು ಸ್ವಪಕ್ಷದ ಶಾಸಕನ ವಿರುದ್ಧ ತಿರುಗೇಟು ನೀಡಿದ್ದಾರೆ.

"ಮೈಮುಲ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಾ.ರಾ ಮಹೇಶ್ ಅವರೇ ಪ್ರಯತ್ನಿಸಿದ್ದರು"

ಮೈಮುಲ್, ಡಿಸಿಸಿ ಬ್ಯಾಂಕ್ ಮುಂತಾದವು ಸ್ವಾಯತ್ತ ಸಂಸ್ಥೆಗಳು. ಅವುಗಳ ನಿರ್ವಹಣೆ ಮಾಡುವುದು ಸರ್ಕಾರದ ಜವಾಬ್ದಾರಿ. ಎಲ್ಲವನ್ನೂ ನಾನೇಕೆ ಮಾಡಲಿ.

ನನಗೆ ಮಾಡೋದಕ್ಕೆ ಬೇರೆ ಕೆಲಸ ಇಲ್ವ? ಎಲ್ಲಾ ವಿಚಾರದಲ್ಲೂ ಮೂಗು ತೂರಿಸುವುದಕ್ಕೆ ನಾನು ಸಾ.ರಾ. ಮಹೇಶ್ ಅಲ್ಲ ಎಂದು ಖಾರವಾಗೇ ಮಾತನಾಡಿದರು.

English summary
''I wont interfear in every matter of government, I am not sa ra mahesh to do that" said GT Devegowda in mysuru regarding allegation on mymul,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X