ಐಎಎಸ್ ಅಧಿಕಾರಿ ರಶ್ಮಿ ಮಹೇಶ್ ಪತ್ರಿಕಾಗೋಷ್ಠಿ

ಮೈಸೂರು, ಅ. 16 : 'ನನ್ನ ಮೇಲೆ ಹಲ್ಲೆ ನಡೆಸಲು ನಿಖರವಾದ ಕಾರಣವಿರಲಿಲ್ಲ, ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದೆ'ಮೈಸೂರಿನ ಆಡಳಿತ ಮತ್ತು ತರಬೇತಿ ಸಂಸ್ಥೆ ಮಹಾನಿರ್ದೇಶಕಿ ರಶ್ಮಿ ಮಹೇಶ್‌ ಹೇಳಿದ್ದಾರೆ. ಸಂಸ್ಥೆಯ ಸಿಬ್ಬಂದಿ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದ್ದು, ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮೈಸೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ರಶ್ಮಿ ಮಹೇಶ್ ಅವರು, ಆಡಳಿತ ಮತ್ತು ತರಬೇತಿ ಸಂಸ್ಥೆಯಲ್ಲಿ ಹಲವು ಅವ್ಯವಹಾರ ನಡೆದಿದೆ. ಸಿಬ್ಬಂದಿ ನೇಮಕಾತಿ ಪಾರದರ್ಶಕವಾಗಿ ನಡೆದಿಲ್ಲ, ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಇದರಲ್ಲಿ ಭಾಗಿಯಾದ ಕೆಲವು ಅಧಿಕಾರಿಗಳ ಹೆಸರನ್ನು ಅದರಲ್ಲಿ ಸೇರಿಸಲಾಗಿದೆ ಎಂದು ಹೇಳಿದರು. [ಐಎಎಸ್ ಅಧಿಕಾರಿ ರಶ್ಮಿ ಮಹೇಶ್ ಮೇಲೆ ಹಲ್ಲೆ]

Rashmi V Mahesh

ಬುಧವಾರ ಮೃತಪಟ್ಟ ವೆಂಕಟೇಶ್ ನಮ್ಮ ಸಂಸ್ಥೆಯ ಸಿಬ್ಬಂದಿಯಲ್ಲಿ ಅವರು, ಗುತ್ತಿಗೆ ಆಧಾರದಲ್ಲಿ ಇಲ್ಲಿ ಕೆಲಸ ನಿರ್ವಹಿಸುತ್ತಿದ್ದರು. 2011ಕ್ಕೆ ಅವರ ಗುತ್ತಿಗೆ ಅವಧಿ ಪೂರ್ಣಗೊಂಡಿತ್ತು. ಹಿಂದಿನ ಆಡಳಿತಾಧಿಕಾರಿ ಅವರ ಸೇವೆಯನ್ನು ವಿಸ್ತರಣೆ ಮಾಡಿದ್ದರು ಎಂದರು.

ಸಿಬ್ಬಂದಿ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಸರ್ಕಾರಕ್ಕೆ ನಾನು ಸಲ್ಲಿಸಿರುವ ವರದಿಯಲ್ಲಿ ವೆಂಕಟೇಶ್ ಅವರ ಹೆಸರು ಇರಲಿಲ್ಲ. ಆದ್ದರಿಂದ ಅವರ ಸಂಬಂಧಿಕರು ನನ್ನ ಮೇಲೆ ಹಲ್ಲೆ ನಡೆಸಲು ಯಾವುದೇ ಕಾರಣವಿರಲಿಲ್ಲ. ಇದೊಂದು ಪೂರ್ವ ನಿಯೋಜಿತವಾದ ಕೃತ್ಯ ಎಂದು ಹೇಳಿದರು.

ಆಡಳಿತ ಮತ್ತು ತರಬೇತಿ ಸಂಸ್ಥೆಯಲ್ಲಿ 150 ರಿಂದ 170 ನೌಕರರಿದ್ದಾರೆ. ಆದರೆ, ಅವ್ಯಹಾರಕ್ಕೆ ಸಂಬಂಧಿಸಿದಂತೆ ಯಾರನ್ನೂ ಅಮಾನತುಗೊಳಿಸಿಲ್ಲ. ಈ ಕುರಿತು ಸರ್ಕಾರಕ್ಕೆ ವರದಿ ಮಾತ್ರ ಸಲ್ಲಿಸಲಾಗಿದೆ ಎಂದು ರಶ್ಮಿ ಮಹೇಶ್ ಸ್ಪಷ್ಟಪಡಿಸಿದರು. ಹಲ್ಲೆಯ ಕುರಿತು ರಶ್ಮಿ ಅವರು ವೆಂಕಟೇಶ್ ಸಂಬಂಧಿಕರ ವಿರುದ್ಧ ನಜಾರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ತನಿಖೆಗೆ ಸಿಎಂ ಆದೇಶ : ಐಎಎಸ್ ಅಧಿಕಾರಿ ರಶ್ಮಿ ಮಹೇಶ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಆದೇಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಹೇಳಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪ್ರಸಾದ್ ಅವರು ಶುಕ್ರವಾರ ಮೈಸೂರಿಗೆ ತೆರಳಲಿದ್ದು, ಜಿಲ್ಲಾಧಿಕಾರಿ, ಎಸ್ಪಿ ಜೊತೆ ಘಟನೆ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ, ನಂತರ ತನಿಖೆಯ ಸ್ವರೂಪದ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.

ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 19 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಠಾಣೆಯ ಎಸ್‌ಐ ನರೇಂದ್ರ ಅವರನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಮೃತ ವೆಂಕಟೇಶ್ ಮೃತದೇಹವನ್ನು ಅಂತಿಮ ದರ್ಶನಕ್ಕಾಗಿ ಸಂಸ್ಥೆಗೆ ತಂದಿರುವುದು ತಪ್ಪು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+