ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ

|
Google Oneindia Kannada News

ಮೈಸೂರು, ಸೆ. 28: ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ 2009 ಬ್ಯಾಚಿನ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರನ್ನು ಮತ್ತೊಮ್ಮೆ ವರ್ಗಾವಣೆ ಮಾಡಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುವಂತೆ ಕರ್ನಾಟಕ ಸರ್ಕಾರವು ಸೋಮವಾರ ಸಂಜೆ ಹೊರಡಿಸಿರುವ ಆದೇಶದಲ್ಲಿ ಹೇಳಲಾಗಿದೆ.

ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಾಗಿದ್ದ ರೋಹಿಣಿ ಅವರು ಅದಕ್ಕೂ ಮೊದಲು ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದ ಆಯುಕ್ತರಾಗಿದ್ದರು.

IAS officer Rohini Sindhuri is now Mysuru DC

ಕಟ್ಟಡ ಹಾಗೂ ನಿರ್ಮಾಣ ಕೆಲಸಗಾರರ ಕಲ್ಯಾಣ ಮಂಡಳಿ ಕಾರ್ಯದರ್ಶಿ, ಹಾಸನ ಜಿಲ್ಲಾಧಿಕಾರಿಯಾಗಿದ್ದರು.ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ರೋಹಣಿಯವರನ್ನು ವರ್ಗಾವಣೆ ಮಾಡಿ, ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರಕಾರದ ಆದೇಶ ನೀಡಿತ್ತು.

ವರ್ಗಾವಣೆ ಆದೇಶವನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ರಾಜ್ಯ ಹೈಕೋರ್ಟ್ ಸೋಮವಾರ ಇತ್ಯರ್ಥಪಡಿಸಿ, ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯುವಂತೆ ಆದೇಶಿಸಿದೆ. ಕೋರ್ಟ್ ಆದೇಶದಂತೆ, ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರೆಯುವಂತೆ ಆದೇಶ ಹೊರಡಿಸಿದೆ.

ಇ ಆಡಳಿತ ಅಸ್ತ್ರ ಪ್ರಯೋಗಿಸಿದ ಡಿಸಿ ರೋಹಿಣಿಇ ಆಡಳಿತ ಅಸ್ತ್ರ ಪ್ರಯೋಗಿಸಿದ ಡಿಸಿ ರೋಹಿಣಿ

ಕೇಂದ್ರಿಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ. ವರ್ಗಾವಣೆ ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.

ತಿರುಮಲದಲ್ಲಿ ಕರ್ನಾಟಕ ಭವನ ನಿರ್ಮಾಣ; ವಿಶೇಷತೆಗಳುತಿರುಮಲದಲ್ಲಿ ಕರ್ನಾಟಕ ಭವನ ನಿರ್ಮಾಣ; ವಿಶೇಷತೆಗಳು

ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿದ್ದ ರೋಹಿಣಿ ಸಿಂಧೂರಿ ದಾಸರಿ ಅವರು ಕಳೆದ ಫೆಬ್ರವರಿಯಿಂದ ಇಲ್ಲಿ ತನಕ ನಾಲ್ಕನೇ ಇಲಾಖೆ ನೋಡುತ್ತಿದ್ದಾರೆ.

ಮೈಸೂರು ದಸರಾಕ್ಕೂ ಮುನ್ನ ಹಾಲಿ ಜಿಲ್ಲಾಧಿಕಾರಿ ಬಿ ಶರತ್ ಅವರನ್ನು ವರ್ಗಾವಣೆ ಮಾಡದಂತೆ ಸರ್ಕಾರದ ಮೇಲೆ ಅವರ ಸಮುದಾಯದವರು ಒತ್ತಡ ಹೇರಿದ್ದರು.

English summary
Karnataka government transferred IAS officer Rohini Sindhuri from religious & charitable endowment department with immediate effect. She will now serve as Mysuru DC
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X