ಮೈಸೂರಲ್ಲಿ ಕಾಂಗ್ರೆಸ್ ಸೋತರೆ ನಾವು ಜವಾಬ್ದಾರರಲ್ಲ: ಜಿ.ಟಿ.ದೇವೇಗೌಡ
ಮೈಸೂರು, ಏಪ್ರಿಲ್ 05: ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಕಾಂಗ್ರೆಸ್‌ನ ವಿಜಯಶಂಕರ್ ಸೋತರೆ ನಾವು ಜವಾಬ್ದಾರರಲ್ಲ ಎಂದು ಜೆಡಿಎಸ್ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಮೈಸೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ಹೊಂದಾಣಿಕೆ ಕೊರತೆ ಎದ್ದು ಕಾಣುತ್ತಿದ್ದು, ಇಂದು ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನವನ್ನು ಜೆಡಿಎಸ್ ಕಾರ್ಯಕರ್ತರು ಹೊರಹಾಕಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡ ಮೇಲಿನಂತೆ ಹೇಳಿಕೆ ನೀಡಿದ್ದು, ಕಾಂಗ್ರೆಸ್‌ಗೆ ಆತಂಕ ಉಂಟುಮಾಡಿದೆ.

ಮಂಡ್ಯದ ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತರೆ ನಾವು ಜವಾಬ್ದಾರರಲ್ಲ ಎಂದಿದ್ದರು. ಅದಕ್ಕೆ ವಿರುದ್ಧವಾಗಿ ಜಿ.ಟಿ.ದೇವೇಗೌಡ ಅವರು ಸಹ ಇಂದು ಇಂತಹುದ್ದೇ ಹೇಳಿಕೆ ನೀಡಿದ್ದಾರೆ.
ಮೈಸೂರು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹಾಗೂ ಜಿ.ಟಿ.ದೇವೇಗೌಡರು ಇಂದು ಸಭೆ ನಡೆಸಿದ್ದರು, ಸಭೆಯ ನಂತರ ಎಲ್ಲವೂ ಸರಿ ಹೋಗಬಹುದು ಎಂದೇ ನಿರೀಕ್ಷಿಸಲಾಗಿತ್ತು. ಆದರೆ ಹಾಗೇನೂ ಆದಂತೆ ಕಾಣುತ್ತಿಲ್ಲ.
ಮೈಸೂರಿನಲ್ಲಿ ಎರಡು ದಿನಗಳ ನಂತರ ಕಾಂಗ್ರೆಸ್-ಜೆಡಿಎಸ್ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಇರುವ ಅಸಮಾಧಾನ ಹೋಗಲಾಡಿಸುವ ಯತ್ನ ಮಾಡಲಿದ್ದಾರೆ.












Click it and Unblock the Notifications