ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಲ್ಲಿ ಕಾಂಗ್ರೆಸ್ ಸೋತರೆ ನಾವು ಜವಾಬ್ದಾರರಲ್ಲ: ಜಿ.ಟಿ.ದೇವೇಗೌಡ

|
Google Oneindia Kannada News

ಮೈಸೂರು, ಏಪ್ರಿಲ್ 05: ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಕಾಂಗ್ರೆಸ್‌ನ ವಿಜಯಶಂಕರ್ ಸೋತರೆ ನಾವು ಜವಾಬ್ದಾರರಲ್ಲ ಎಂದು ಜೆಡಿಎಸ್ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಮೈಸೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ಹೊಂದಾಣಿಕೆ ಕೊರತೆ ಎದ್ದು ಕಾಣುತ್ತಿದ್ದು, ಇಂದು ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್‌ ವಿರುದ್ಧ ತೀವ್ರ ಅಸಮಾಧಾನವನ್ನು ಜೆಡಿಎಸ್ ಕಾರ್ಯಕರ್ತರು ಹೊರಹಾಕಿದ್ದಾರೆ.

ಮಂಡ್ಯದಲ್ಲಿ ಚೆಲುರಾಯಸ್ವಾಮಿ ಆಟ, ದಳಪತಿಗಳಿಗೆ ಸಂಕಟ...ಮಂಡ್ಯದಲ್ಲಿ ಚೆಲುರಾಯಸ್ವಾಮಿ ಆಟ, ದಳಪತಿಗಳಿಗೆ ಸಂಕಟ...

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡ ಮೇಲಿನಂತೆ ಹೇಳಿಕೆ ನೀಡಿದ್ದು, ಕಾಂಗ್ರೆಸ್‌ಗೆ ಆತಂಕ ಉಂಟುಮಾಡಿದೆ.

If Congress candidate loose in Mysuru, we are not responsible: GT Devegowda

ಮಂಡ್ಯದ ಕಾಂಗ್ರೆಸ್‌ ಮುಖಂಡ ಚೆಲುವರಾಯಸ್ವಾಮಿ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತರೆ ನಾವು ಜವಾಬ್ದಾರರಲ್ಲ ಎಂದಿದ್ದರು. ಅದಕ್ಕೆ ವಿರುದ್ಧವಾಗಿ ಜಿ.ಟಿ.ದೇವೇಗೌಡ ಅವರು ಸಹ ಇಂದು ಇಂತಹುದ್ದೇ ಹೇಳಿಕೆ ನೀಡಿದ್ದಾರೆ.

ನಿಖಿಲ್ ಅನ್ನು ಸೋಲಿಸಲು ಷಡ್ಯಂತ್ರ ರಚಿಸಲಾಗಿದೆ: ಕುಮಾರಸ್ವಾಮಿನಿಖಿಲ್ ಅನ್ನು ಸೋಲಿಸಲು ಷಡ್ಯಂತ್ರ ರಚಿಸಲಾಗಿದೆ: ಕುಮಾರಸ್ವಾಮಿ

ಮೈಸೂರು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹಾಗೂ ಜಿ.ಟಿ.ದೇವೇಗೌಡರು ಇಂದು ಸಭೆ ನಡೆಸಿದ್ದರು, ಸಭೆಯ ನಂತರ ಎಲ್ಲವೂ ಸರಿ ಹೋಗಬಹುದು ಎಂದೇ ನಿರೀಕ್ಷಿಸಲಾಗಿತ್ತು. ಆದರೆ ಹಾಗೇನೂ ಆದಂತೆ ಕಾಣುತ್ತಿಲ್ಲ.

ಪುಲ್ವಾಮಾ ದಾಳಿ ಬಗ್ಗೆ 2 ವರ್ಷದ ಹಿಂದೆಯೇ ಎಚ್‌ಡಿಕೆಗೆ ಗೊತ್ತಿತ್ತು ಪುಲ್ವಾಮಾ ದಾಳಿ ಬಗ್ಗೆ 2 ವರ್ಷದ ಹಿಂದೆಯೇ ಎಚ್‌ಡಿಕೆಗೆ ಗೊತ್ತಿತ್ತು

ಮೈಸೂರಿನಲ್ಲಿ ಎರಡು ದಿನಗಳ ನಂತರ ಕಾಂಗ್ರೆಸ್-ಜೆಡಿಎಸ್ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಇರುವ ಅಸಮಾಧಾನ ಹೋಗಲಾಡಿಸುವ ಯತ್ನ ಮಾಡಲಿದ್ದಾರೆ.

English summary
JDS minister GT Devegowda said, if coalition candidate congress's Vijayashankar lost in Mysuru then JDS will not be responsible for that.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X