MUDA Site: ನಿವೇಶನ ಪಡೆದದ್ದು ಸಾಬೀತಾದರೆ ರಾಜೀನಾಮೆ ನೀಡುವೆ: ಶಾಸಕ ಸವಾಲ್

ಮೈಸೂರು, ಆಗಸ್ಟ್ 23: ನಾನು ಜಿ.ಕೆಟಗರಿ ನಿವೇಶನ ಪಡೆದಿದ್ದೇನೆ ಎಂದು ಕೆಪಿಸಿಸಿ ವಕ್ತಾ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ. ನನ್ನ ಮೇಲಿನ ಆರೋಪ ಸಾಬೀತಾದರೆ 24 ಗಂಟೆಗಳಲ್ಲಿ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಒಂದು ವೇಳೆ ಆರೋಪ ಸುಳ್ಳಾದರೆ ಅವರು ರಾಜಕೀಯ ನಿವೃತ್ತಿ ಪಡೆಯುತ್ತಾರಾ? ಎಂದು ಶಾಸಕ ಶ್ರೀವತ್ಸ ಅವರು ಸವಾಲು ಹಾಕಿದ್ದಾರೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ವ್ಯಾಪ್ತಿಯ ಜಿ ವರ್ಗದ ಸೈಟ್ ಪಡೆದಿರುವುದನ್ನು ಒಂದು ವೇಳೆ ಅವರು ಸಾಬೀತುಪಡಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿದರು. ಜವಾಬ್ದಾರಿಯುತವಾಗಿ ಮಾತನಾಡದೇ, ಎಲುಬಿಲ್ಲದ ನಾಲಿಗೆ ಇದೆ ಎಂದು ಮನಸ್ಸಿಗೆ ತೋಸಿದಂತೆ ಮಾತನಾಡಬಾರದು. ನನ್ನ ಹಾಗೂ ಕುಟುಂಬದ ಹೆಸರಿನಲ್ಲಿ ಮುಡಾ ಸಂಬಂಧಿಸಿದ ಒಂದು ತುಂಡು ಜಾಗವೂ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

If Proved I took The MUDA Site Within 24 hours I Will Resign Say MLA Srivatsa

ಇಲ್ಲ ಸಲ್ಲದ ಆರೋಪ ಮಾಡಿ ಮಾತನಾಡಿರುವುದಕ್ಕೆ ಬೇಸರತ್ ಕ್ಷಮೆ ಕೇಳುವಂತೆ ನೋಟಿಸ್ ಕಳುಹಿಸಿದ್ದೇನೆ. ಕ್ಷಮೆಯಾಚಿಸದಿದ್ದರೆ ಕಾನೂನು ಸಂಕಷ್ಟ ಎದುರಿಸಬೇಕಾಗುತ್ತದೆ. ನನ್ನ ಬಗ್ಗೆ ಹಗುರವಾಗಿ ಮಾತನಾಡುವ ಲಕ್ಷ್ಮಣ್ ಅವರು ಸಂಸದ ಪ್ರತಾಪ್ ಸಿಂಹ ಅವರ ಬಗ್ಗೆ ಮಾತನಾಡಲಿ ನೋಡೋಣ. ಏಕೆಂದರೆ ಪ್ರತಾಪ್ ಸಿಂಹ ವಿರುದ್ಧ ಮಾತನಾಡಲು ಹೆದರುತ್ತಾರೆ. ರಾಜಕೀಯದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಅವರು ಲೇವಡಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮಾತನಾಡಿ, ವೀರೇಂದ್ರ ಪಾಟೀಲರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ರಾಜ್ಯಪಾಲರು ಈ ನಿಯಮ ಅನುಸರಿಸಿದ್ದರು. ಆ ನಂತರ ಚುನಾವಣೆ ನಡೆದು ಬಂಗಾರಪ್ಪ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. ಹೀಗಾಗಿ ತನಿಖೆ ಮುಗಿಯುವವರೆಗೆ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದು ಬೇಡ. ಬದಲಿಗೆ ರಾಜ್ಯಪಾಲರೇ ಸರಕಾರವನ್ನು ಅಮಾನತ್ತಿನಲ್ಲಿಡಲಿ ಎಂದು ಅವರು ಒತ್ತಾಯಿಸಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿದ್ದಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಶಾಸಕರು ರಾಜ್ಯಪಾಲರನ್ನು ಹೀಗಳೆಯುವುದು ಈ ನಾಡಿಗೆ ಗೌರವ ತರುವಂತದ್ದಲ್ಲ. ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ಮಾನ ಹರಾಜಾಗುತ್ತಿದೆ. ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರ ಮಧ್ಯೆ ಪರಸ್ಪರ ನಿಂದನೆ ಮೆಚ್ಚುವಂತದಲ್ಲ. ತನಿಖಾ ವರದಿ ಬಂದಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ ಅವರ ವಿರುದ್ಧದ ಪ್ರಕರಣದಲ್ಲಿಯೂ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ಅವರು ತಿಳಿಸಿದರು.

ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣದ ಕಿಚ್ಚು

ರಾಜ್ಯದಲ್ಲಿ ಸದ್ಯ ಮುಡಾ ಹಗರಣ ದೊಡ್ಡ ಮಟ್ಟಲ್ಲಿ ಸುದ್ದಿಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ, ದಾಖಲೆ ತಿದ್ದು ನಿವೇಶನ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದೆ. ಈ ಸಂಬಂಧ ಬಿಜೆಪಿ ಮೈಸೂರು ವರೆಗೆ ಪಾದಯಾತ್ರೆ ಮಾಡಿತ್ತು. ವಿಪಕ್ಷ ನಾಯಕರು ದಾಖಲೆ ಸಹ ಬಿಡುಗಡೆ ಮಾಡಿದ್ದರು. ಅಲ್ಲದೇ ಈ ಪ್ರಕಟಣೆ, ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮಧ್ಯೆ ನೇರ ಹಣಾಹಣಿಗೆ ಕಾರಣವಾಗಿದೆ.

ಈ ಮಧ್ಯೆ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡ ಮಧ್ಯೆ ಸೈಟ್ ಹಂಚಿಕೆ ವಿಚಾರವಾಗಿ ಕಿತ್ತಾಟ, ಆರೋಪ ಪ್ರತ್ಯಾರೋಪಗಳು ಕೇಳಿ ಬರುತ್ತಿವೆ. ಇದೀಗ ಆರೋಪ ಸಾಬೀತಾದರು ರಾಜೀನಾಮೆ ನೀಡುವುದಾಗಿ ಶಾಕಸರು ಸವಾಲು ಹಾಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+