ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಪಿಎಸ್ಸಿ ಗೆಜೆಟೆಡ್ ಅಧಿಕಾರಿಗಳ ನೇಮಕದಲ್ಲಿ ಅಕ್ರಮ: ಕೆಪಿಸಿಸಿ ಆರೋಪ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 17: ಕೆಪಿಎಸ್ಸಿಯ ಮೂಲಕ 2015 ರಲ್ಲಿ 428 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಡಿಜಿಟಲ್‌ ಮೌಲ್ಯಮಾಪನದಲ್ಲಿ ಅಕ್ರಮ ನಡೆದಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.

ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಲಕ್ಷ್ಮಣ್, ಕೆಪಿಎಸ್ಸಿ ಮೇಲೆ ಗುರುತರ ಆರೋಪ ಮಾಡಿದ್ದಾರೆ. ಕೆಲ ವಿದ್ಯಾರ್ಥಿಗಳು ಮೌಲ್ಯಮಾಪನದ ಉತ್ತರ ಪತ್ರಿಕೆಯನ್ನು ಆರ್ ಟಿಐ ಮೂಲಕ ಪಡೆದು ಹೈಕೋರ್ಟ್ ಗೆ ಸಲ್ಲಿಸಿದ್ದಾರೆ. ಕೆಲ ವಿದ್ಯಾರ್ಥಿಗಳು ಡಿಜಿಟಲ್ ಮೌಲ್ಯಮಾಪನದಲ್ಲಿ ಅಂಕಗಳನ್ನು ಬದಲಾವಣೆ ಮಾಡಿದ್ದಾರೆ ಎಂದು ದೂರಿದ್ದಾರೆ.

ಕೆಪಿಎಸ್‌ಸಿ ನೇಮಕಾತಿ 2020: 523 ಹುದ್ದೆಗಳಿಗೆ ಅರ್ಜಿ ಹಾಕಿಕೆಪಿಎಸ್‌ಸಿ ನೇಮಕಾತಿ 2020: 523 ಹುದ್ದೆಗಳಿಗೆ ಅರ್ಜಿ ಹಾಕಿ

ಇದಕ್ಕೆ ಪೂರಕವೆಂಬಂತೆ ಮಹಾರಾಷ್ಟ್ರ ಮೂಲದ ಇಂಡಿಯನ್ ಸೈಬರ್ ಇನ್ಸ್ಟಿಟ್ಯೂಟ್ ನವರು ಮೌಲ್ಯಮಾಪನದಲ್ಲಿ ಅಕ್ರಮ ನಡೆದಿದೆ ಎಂಬ ವರದಿ ನೀಡಿದ್ದಾರೆ. ಉತ್ತರ ಪತ್ರಿಕೆಯ ಪ್ರತಿಗಳನ್ನು ಅಭ್ಯರ್ಥಿಗಳಿಗೆ ನೀಡಬೇಕೆಂದು ಕೋರ್ಟ್ ಆದೇಶಿಸಿದ್ದರೂ, ಕೆಪಿಎಸ್ಸಿ ಉತ್ತರ ಪತ್ರಿಕೆ ನೀಡುತ್ತಿಲ್ಲ. ಅಭ್ಯರ್ಥಿಗಳ ಅಂಕಗಳನ್ನು ತಿದ್ದಿದ್ದಾರೆ ಎಂದು ದೂರಿದರು.

Mysuru: Illegal Recruitment Of KPSC Gazetted Officers: KPCC Allegation

ಮೌಲ್ಯಮಾಪಕರ ಸಹಿಯನ್ನು ಡಿಜಿಟಲ್ ರೂಪದಲ್ಲಿ ಮಾಡಬೇಕು. ಆದರೆ ಯಾವ ಮೌಲ್ಯಮಾಪಕರ ಸಹಿ ಇಲ್ಲದಿರುವುದು ಆರೋಪಕ್ಕೆ ಪುಷ್ಠಿ ನೀಡುವಂತಿದೆ. ಜೊತೆಗೆ ಅಭ್ಯರ್ಥಿಗಳಿಗೆ ಕಳುಹಿಸಿರುವ ಅಂಕಪಟ್ಟಿಯಲ್ಲಿ ಕೆಪಿಎಸ್ಸಿ ಲೋಗೋ ಮತ್ತು ಕಾರ್ಯದರ್ಶಿಯವರ ಸಹಿ ಇಲ್ಲ.

ಈ ಲೋಪಗಳಿಗೆ ನಾವು ಕೆಪಿಎಸ್ಸಿ ಅಧ್ಯಕ್ಷರನ್ನು ದೂಷಣೆ ಮಾಡುತ್ತಿಲ್ಲ. ಇದರಲ್ಲಿ ಯಾವುದೋ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದರು.

English summary
KPCC spokesperson M Lakshman has alleged that in 2015, a Illegal digital assessment of 428 gazetted probationary posts was carried out by KPSC.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X