ವಿದ್ಯಾರ್ಥಿನಿಯೊಂದಿಗೆ ಅಕ್ರಮ ಸಂಬಂಧ ಕೇಸ್ : ಶಿಕ್ಷಕ ಅಮಾನತು, ಜೈಲು
ಮೈಸೂರು, ಮಾರ್ಚ್ 3: ಹಳೆಯ ವಿದ್ಯಾರ್ಥಿನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮೈಸೂರಿನ ಶಿಕ್ಷಕ ಕೆ. ಸಿದ್ದರಾಜು ಅವರನ್ನು ಅಮಾನತುಗೊಳಿಸಲಾಗಿದೆ.
ನಂಜನಗೂಡು ತಾಲೂಕಿನ ರಾಂಪುರ ಸರ್ಕಾರಿ ಶಾಲೆ ಶಿಕ್ಷಕ ಸಿದ್ದರಾಜು ಹಳೆಯ ವಿದ್ಯಾರ್ಥಿನಿ ಜತೆಗಿದ್ದ ಅಶ್ಲೀಲ ಚಿತ್ರಗಳು ವೈರಲ್ ಆಗಿದ್ದವು.
ಇದರ ಬೆನ್ನಲ್ಲೇ ಶಿಕ್ಷಕನನ್ನು ವಜಾ ಮಾಡುವಂತೆ ರಾಂಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಶಿಕ್ಷಕ ಸಿದ್ದರಾಜು ಅವರನ್ನು ಅಮಾನತುಗೊಳಿಸಿ, ಆದೇಶ ಹೊರಡಿಸಿದ್ದಾರೆ.

ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಸಂಗೀತ ಶಿಕ್ಷಕನಿಗೆ ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 10 ಸಾವಿರ ದಂಡ, 5 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಎನ್.ಆರ್.ಮೊಹಲ್ಲಾದ ಸರ್ಕಾರಿ ಶಾಲೆಯಲ್ಲಿ ಸಂಗೀತ ಶಿಕ್ಷಕನಾಗಿದ್ದ ಸಿದ್ದರಾಜು ಶಿಕ್ಷೆಗೊಳಗಾದ ಅಪರಾಧಿ. ಶಾಲೆಯ ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ಮತ್ತು ಶಾಲಾ ಆವರಣದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಶಾಲೆಯ ಮುಖ್ಯಶಿಕ್ಷಕ ಮಂಡಿ ಠಾಣೆಗೆ ದೂರು ನೀಡಿದ್ದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ವಿದ್ಯಾರ್ಥಿನಿಯರ ವಿಚಾರಣೆ ನಡೆಸಿ, ಹೇಳಿಕೆಗಳನ್ನು ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಸಾಕ್ಷ್ಯಾಧಾರಗಳನ್ನು ಅವಲೋಕಿಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ಅವರು ಅಪರಾಧಿಗೆ 10 ಸಾವಿರದೊಂದಿಗೆ ೫ ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಬಿ.ಸಿ.ಶಿವರುದ್ರಸ್ವಾಮಿ ಅವರು ವಾದ ಮಂಡಿಸಿದ್ದರು.












Click it and Unblock the Notifications