ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಜೈಲು ಶಿಕ್ಷೆ
ಮೈಸೂರು, ಮಾರ್ಚ್ 18: ಬುದ್ಧಿಮಾಂದ್ಯ ಬಾಲಕನ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯವೆಸಗಿದ್ದ ವ್ಯಕ್ತಿಯೋರ್ವನಿಗೆ ಪೋಕ್ಸೋ ವಿಶೇಷ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪ್ರಸನ್ನ ಎಂಬಾತನೇ ಶಿಕ್ಷೆಗೊಳಗಾದ ವ್ಯಕ್ತಿಯಾಗಿದ್ದು, ಈತ 2016 ರಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಬಿದ್ಧಿಮಾಂದ್ಯ ಬಾಲಕನಿಗೆ ತಿಂಡಿ ಕೊಡಿಸುತ್ತೇನೆಂದು ಹೇಳಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅಸ್ವಾಭಾವಿಕವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದ.
ಈ ಕುರಿತು ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ಅವರು ಹತ್ತು ವರ್ಷಗಳ ಕಾಲ ಕಠಿಣ ಶಿಕ್ಷೆ ವಿಧಿಸಿದ್ದಾರೆ.

ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಸಿ.ಶಿವರುದ್ರಸ್ವಾಮಿ ವಾದ ಮಂಡಿಸಿದ್ದರು.












Click it and Unblock the Notifications