ಚಿತ್ರಗಳು : ಚಾಮುಂಡಿ ಬೆಟ್ಟದಲ್ಲಿ ಪಲ್ಲಕ್ಕಿ ಉತ್ಸವ

ಮೈಸೂರು, ಜುಲೈ 27 : ನಾಡ ದೇವತೆ ತಾಯಿ ಚಾಮುಂಡೇಶ್ವರಿಯ ವರ್ಧಂತಿ ಹಿನ್ನಲೆಯಲ್ಲಿ ಚಿನ್ನದ ಪಲ್ಲಕ್ಕಿ ಉತ್ಸವ ಮೈಸೂರಿನಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಪವಿತ್ರ ಕ್ಷಣಗಳಿಗೆ ರಾಜಮಾತೆ ಪ್ರಮೋದಾದೇವಿ, ಯುವರಾಜ ಯದುವೀರ್, ತ್ರಿಷಿಕಾ ಯದುವೀರ್ ಸೇರಿದಂತೆ ಸಾವಿರಾರು ಭಕ್ತವೃಂದ ಸಾಕ್ಷಿಯಾಯಿತು.

ವರ್ಧಂತಿ ಪ್ರಯುಕ್ತ ಮಂಗಳವಾರ ಮುಂಜಾನೆಯಿಂದ ರಾತ್ರಿವರೆಗೂ ಮೈಸೂರಿನ ಚಾಮಂಡಿ ಬೆಟ್ಟದಲ್ಲಿರುವ ದೇವಾಲಯದಲ್ಲಿ ವಿವಿಧ ಪೂಜಾ ಕೈಕಂಕರ್ಯಗಳು ನಡೆದವು. ಆಷಾಢ ಮಾಸ ಕೃಷ್ಣಪಕ್ಷ ರೇವತಿ ನಕ್ಷತ್ರದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಚಿನ್ನಾಭರಣಗಳಿಂದ ಅಲಂಕರಿಸಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತು.[ಭಕ್ತಿ ಭಾವದಲ್ಲಿ ತೊಯ್ದು ತೊಪ್ಪೆಯಾದ ಚಾಮುಂಡಿ ಭಕ್ತರು]

ಮುಂಜಾನೆ 3 ಗಂಟೆಯಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿದ್ದವು. ದೇವಿ ಕೆರೆಯಿಂದ ಹೊರಡುವ ಅಘ್ರೋತಹರಣ ಮೆರವಣಿಗೆ, ಎಣ್ಣೆ, ಅರಿಸಿನದೊಂದಿಗೆ ದೇವಸ್ಥಾನದ ಸುತ್ತಲೂ ಪ್ರದಕ್ಷಿಣೆ ಹಾಕಿ ಪ್ರಾಂಗಣ ಪ್ರವೇಶಿಸಿತು.[ಚಾಮುಂಡಿ ಬೆಟ್ಟದಲ್ಲಿ 'ಆಪರೇಷನ್ ಚಾಮುಂಡಿ' ಯಾಕೆ?]

9.30ಕ್ಕೆ ಸರಿಯಾಗಿ ಮಹಾಮಂಗಳಾರತಿ ನಡೆಯಿತು. 10.30ಕ್ಕೆ ಸರಿಯಾಗಿ ಶುಭ ಲಗ್ನದಲ್ಲಿ ದೇವಿಯ ಚಿನ್ನದ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಇಟ್ಟು ಬೆಟ್ಟದ ಪ್ರಮುಖ ಬೀದಿಗಳಲ್ಲಿ ಮಂಗಳವಾಧ್ಯ ಹಾಗೂ ಪೊಲೀಸ್ ಬ್ಯಾಂಡ್‍ನೊಂದಿಗೆ ಮೆರವಣಿಗೆ ಮಾಡಲಾಯಿತು. ಪಲ್ಲಕ್ಕಿ ಉತ್ಸವದ ಚಿತ್ರಗಳು ಇಲ್ಲಿವೆ ನೋಡಿ.......

ಚಾಮುಂಡೇಶ್ವರಿ ದರ್ಶನ ಪಡೆದ ಸಾವಿರಾರು ಭಕ್ತರು

ಚಾಮುಂಡೇಶ್ವರಿ ದರ್ಶನ ಪಡೆದ ಸಾವಿರಾರು ಭಕ್ತರು

ಮಂಗಳವಾರ ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿಯ ವರ್ಧಂತಿ ಹಿನ್ನಲೆಯಲ್ಲಿ ಚಿನ್ನದ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಭಕ್ತರು ಈ ಸಂಭ್ರಮದಲ್ಲಿ ಪಾಲ್ಗೊಂಡು ನಾಡದೇವತೆಯ ದರ್ಶನ ಪಡೆದು ಪುನೀತರಾದರು.

ಚಾಮುಂಡಿ ದರ್ಶನ ಪಡೆದ ಯುವರಾಜ

ಚಾಮುಂಡಿ ದರ್ಶನ ಪಡೆದ ಯುವರಾಜ

ರಾಜಮಾತೆ ಪ್ರಮೋದಾದೇವಿ, ಯುವರಾಜ ಯದುವೀರ್, ತ್ರಿಷಿಕಾ ಯದುವೀರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದರು.

ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡರು

ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡರು

ರಾಜಮಾತೆ ಪ್ರಮೋದಾದೇವಿ ಒಡೆಯರ್, ಯದುವೀರ್, ತ್ರಿಷಿಕಾ ಯದುವೀರ್ ಚಾಮುಂಡಿಬೆಟ್ಟಕ್ಕೆ ಆಗಮಿಸಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿ ಮೆರವಣಿಗೆಯಲ್ಲಿ ಪಾಲ್ಗೊಂಡರು.

ನಾಡದೇವತೆಗೆ ಹೂವಿನ ಅಲಂಕಾರ

ನಾಡದೇವತೆಗೆ ಹೂವಿನ ಅಲಂಕಾರ

ವರ್ಧಂತಿ ಹಿನ್ನಲೆಯಲ್ಲಿ ಉತ್ಸವ ಮೂರ್ತಿಯನ್ನು ವಿವಿಧ ಬಣ್ಣದ ಹೂಗಳಿಂದ ಅಲಂಕರಿಸಲಾಗಿತ್ತು.

ಮುಂಜಾನೆಯಿಂದಲೇ ಪೂಜಾ ಕೈಂಕರ್ಯ

ಮುಂಜಾನೆಯಿಂದಲೇ ಪೂಜಾ ಕೈಂಕರ್ಯ

ವರ್ಧಂತಿ ಪ್ರಯುಕ್ತ ಮಂಗಳವಾರ ಮುಂಜಾನೆಯಿಂದ ರಾತ್ರಿವರೆಗೂ ಮೈಸೂರಿನ ಚಾಮಂಡಿ ಬೆಟ್ಟದಲ್ಲಿರುವ ದೇವಾಲಯದಲ್ಲಿ ವಿವಿಧ ಪೂಜಾ ಕೈಕಂಕರ್ಯಗಳು ನಡೆದವು.

ಸಾರ್ವಜನಿಕರ ದರ್ಶನಕ್ಕೆ ಅವಕಾಶ

ಸಾರ್ವಜನಿಕರ ದರ್ಶನಕ್ಕೆ ಅವಕಾಶ

ಆಷಾಢ ಮಾಸ ಕೃಷ್ಣಪಕ್ಷ ರೇವತಿ ನಕ್ಷತ್ರದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಚಿನ್ನಾಭರಣಗಳಿಂದ ಅಲಂಕರಿಸಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತು. 9.30ಕ್ಕೆ ಸರಿಯಾಗಿ ಮಹಾಮಂಗಳಾರತಿ ನಡೆಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+