ಕೆಎಸ್ಆರ್ಟಿಸಿ ಬಸ್ ಹರಿದು ಮೈಸೂರಿನಲ್ಲಿ ಎರಡು ಬಲಿ
ನಿಂತಿದ್ದ ದ್ವಿಚಕ್ರ ವಾಹನದಲ್ಲಿ ಕುಳಿತು ಮಾತನಾಡುತ್ತಿದ್ದ ಈರ್ವರ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು, ಏಪ್ರಿಲ್ 24: ನಿಂತಿದ್ದ ದ್ವಿಚಕ್ರ ವಾಹನದಲ್ಲಿ ಕುಳಿತು ಮಾತನಾಡುತ್ತಿದ್ದ ಈರ್ವರ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾದ ಘಟನೆ ಮೈಸೂರಿನ ಬನ್ನೂರು ರಿಂಗ್ ರಸ್ತೆಯಲ್ಲಿ ನಡೆದಿದೆ.
ಸಾತಗಳ್ಳಿ ಕಡೆಯಿಂದ ಕೊಲಂಬಿಯಾ ಏಷ್ಯಾ ಕಡೆಗೆ ಚಲಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿಯಾಗಿತ್ತು. ಲಾರಿಗೆ ತಾಕಿ ಅನಾಹುತವಾಗದಂತೆ ತಪ್ಪಿಸುವ ಧಾವಂತದಲ್ಲಿ ಚಾಲಕ ಬಸ್ಸನ್ನು ಎಡಕ್ಕೆ ತಿರುಗಿಸಿದ್ದಾನೆ.[ನಿರ್ದೇಶಕ ಪುಟ್ಟಣ್ಣ ಕಣಗಾಲ್ ಮನೆಯಲ್ಲಿ ಕಳ್ಳತನ]

ಆದರೆ ಅಷ್ಟರಲ್ಲಾಗಲೇ ಲಾರಿ ಬಂದು ಬಸ್ಸಿಗೆ ಗುದ್ದಿದ ಪರಿಣಾಮ, ಬಸ್ಸು ಹತ್ತಿರದ ಪೆಟ್ಟಿಗೆ ಅಂಗಡಿ, ವಿದ್ಯುತ್ ಕಂಬಗಳಿಗೆ ಗುದ್ದಿದ್ದಲ್ಲದೆ, ರಸ್ತೆ ಬದಿಯಲ್ಲಿ ಮಾತನಾಡುತ್ತ ನಿಂತಿದ್ದ ಇಬ್ಬರು ಸವಾರರ ಮೇಲೆ ನುಗ್ಗಿದೆ. ಬಸ್ ಹರಿದ ಪರಿಣಾಮ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ ಸಿದ್ದಾರ್ಥ ನಗರ ಸಂಚಾರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ












Click it and Unblock the Notifications