ಮೊದಲ ಹಂತದಲ್ಲಿ ಕೋವಿಡ್ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಿ: ಮೈಸೂರು ಜಿಲ್ಲಾಧಿಕಾರಿ ಸೂಚನೆ
ಮೈಸೂರು, ಡಿಸೆಂಬರ್, 25: ಪಾಶ್ಚಾತ್ಯ ದೇಶಗಳಲ್ಲಿ ಮತ್ತೆ ಕೊರೊನಾ ಆರ್ಭಟ ಮುಂದುವರಿದಿದ್ದು, ಜಿಲ್ಲೆಯಲ್ಲಿ ಸಾರಿ (ಸಿವಿಯರ್ ಅಕ್ಯೂಟ್ ರೆಸ್ಪೆರೇಟರಿ ಇನ್ಸ್‌ಪೆಕ್ಷನ್), ಐಎಲ್‌ಐನಿಂದ ಬಳಲುತ್ತಿರುವವರನ್ನು ಮೊದಲಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸುವಂತೆ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ್ದು, ಜಿಲ್ಲೆಯಲ್ಲಿ ಕೋವಿಡ್ ಪರಿಸ್ಧಿತಿಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ಮೊದಲ ಹಂತದಲ್ಲಿ ಕೋವಿಡ್ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಬೇಕಿದೆ. ಅದರಲ್ಲಿಯೂ ಶೀತ, ನೆಗಡಿ, ಜ್ವರದಿಂದ ಬಳಲುತ್ತಿರುವವರು ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಆಸ್ಪತ್ರೆಗೆ ಬರುವವರನ್ನು ಮೊದಲು ಕೊರೊನಾ ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ಕೊಡಿಸಲಾಗುವುದು. ಕೆಆರ್‌ಎಚ್, ಜಿಲ್ಲಾ ಆಸ್ಪತ್ರೆಗಳಲ್ಲಿ ನಿತ್ಯ 200 ಹಾಗೂ ತಾಲೂಕು ಆಸ್ಪತ್ರೆಯಲ್ಲಿಯೂ 200 ಮಂದಿಗೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣ
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣ ಏರಿಕೆಯಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಹೊರಡಿಸಿರುವ ಮಾರ್ಗ ಸೂಚಿಗಳನ್ನು ಸಾರ್ವಜನಿಕರು ಪಾಲಿಸಬೇಕು ಎಂದು ಮನವಿ ಮಾಡಿದರು. ಎಲ್ಲರಿಗೂ ಬೂಸ್ಟರ್ ಡೋಸ್ ಕಡ್ಡಾಯಗೊಳಿಸಲಾಗುವುದು. ಹೀಗಾಗಿ ಸಾರ್ವಜನಿಕರು ಯಾವುದೇ ಅನುಮಾನಕ್ಕೆ ಒಳಗಾಗದೇ ಲಸಿಕೆ ಪಡೆದುಕೊಳ್ಳಬೇಕು ಎಂದು ಸೂಚಿಸಿದರು.

ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚನೆ
ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್‌ಗಳು, ಶಾಪಿಂಗ್ ಮಾಲ್ ಕಚೇರಿಗಳು ಸೇರಿದಂತೆ ಬಸ್, ರೈಲು, ವಿಮಾನದಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ. ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿ ಕಡ್ಡಾಯವಾಗಿದೆ. ವಿಮಾನ ನಿಲ್ದಾಣಗಳಲ್ಲಿ ವಿದೇಶದಿಂದ ಆಗಮಿಸುವ ಶೇಕಾಡಾ 2ರಷ್ಟು ಪ್ರಯಾಣಿಕರಿಗೆ ರ‍್ಯಾಂಡಮ್ ಟೆಸ್ಟ್, ತಾಲೂಕು, ಜಿಲ್ಲಾ ಆಸ್ಪತ್ರೆಗಳಲ್ಲಿ, ಖಾಸಗಿ ಆಸ್ಪತ್ರೆಗಳಲ್ಲಿ ಕೆಲ ಹಾಸಿಗೆಗಳನ್ನು ಕೊರೊನಾ ಚಿಕಿತ್ಸೆಗೆ ಮೀಸಲಿಡಬೇಕು ಎಂದರು.

ಈ ಸಂದರ್ಭದಲ್ಲಿ ಸಿಇಒ ಡಾ.ಬಿ.ಆರ್.ಪೂರ್ಣಿಮಾ, ಪಾಲಿಕೆ ಆಯುಕ್ತ ಲಕ್ಷ್ಮೀಕಾಂತರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ.ಮಂಜುನಾಥಸ್ವಾಮಿ, ಡಿಎಚ್‌ಒ ಡಾ.ಕೆ.ಎಚ್.ಪ್ರಸಾದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications