• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

75ನೇ ಸ್ವಾತಂತ್ರ್ಯೋತ್ಸವ: ರೈತ, ವಿದ್ಯಾರ್ಥಿ, ಯುವ ಸಮೂಹಕ್ಕೆ ಸರಕಾರದಿಂದ ಯೋಜನೆ ಜಾರಿ: ಸೋಮಶೇಖರ್‌

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್‌ 15: ''ನಮ್ಮ ದೇಶಪ್ರೇಮ ಸ್ವಾತಂತ್ರ್ಯ ದಿನಾಚರಣೆಗಷ್ಟೇ ಸೀಮಿತಗೊಳ್ಳಬಾರದು. ದೇಶಪ್ರೇಮ ನಮ್ಮಲ್ಲಿ ಪ್ರತಿದಿನವೂ, ಪ್ರತಿಕ್ಷಣವೂ ಇರಬೇಕು'' ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ನಗರದ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತಾಡಿದರು.

"ನಮಗೆ ಸ್ವಾತಂತ್ರ್ಯ ಬಂದು ಇಂದಿಗೆ 75 ವರ್ಷಗಳು ಆಗಿವೆ. ಈ ಹಿನ್ನೆಲೆಯಲ್ಲಿ ನಾವು ದೇಶಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದೇವೆ. ಈ ಅಮೃತ ಘಳಿಗೆಗೆ ನಾವೆಲ್ಲಾ ಸಾಕ್ಷಿಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ದೇಶದ ಸ್ವಾತಂತ್ರಕ್ಕಾಗಿ ಹೋರಾಟ, ತ್ಯಾಗ, ಬಲಿದಾನಗಳನ್ನು ಮಾಡಿದ ಹಿರಿಯರನ್ನು ನಾವು ನೆನಪು ಮಾಡಿಕೊಳ್ಳಬೇಕು.‌ ಸ್ವಾತಂತ್ರ್ಯ ಹೋರಾಟಗಾರರ ಆಶಯದಂತೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ" ಎಂದರು.

ದೇಶದ ಅಭಿವೃದ್ಧಿಗಾಗಿ ಮುಂದಿನ 25 ವರ್ಷಗಳನ್ನು ಮೀಸಲಿಡಿ: ಪ್ರಧಾನಿ ಮೋದಿದೇಶದ ಅಭಿವೃದ್ಧಿಗಾಗಿ ಮುಂದಿನ 25 ವರ್ಷಗಳನ್ನು ಮೀಸಲಿಡಿ: ಪ್ರಧಾನಿ ಮೋದಿ

ನಮ್ಮದು ಜನಪರ ಸರ್ಕಾರ. ನಾಡಿನ ಜನತೆಯ ಶ್ರೇಯೋಭಿವೃದ್ಧಿಯೇ ನಮ್ಮ ಆದ್ಯ ಕರ್ತವ್ಯ. ಚುನಾವಣಾ ಪ್ರಣಾಳಿಕೆಯಲ್ಲಿ ನಾಡಿನ ಜನತೆಗೆ ನೀಡಿರುವ ಭರವಸೆಯಂತೆ ಸಮೃದ್ಧ ಕರ್ನಾಟಕವನ್ನು ನಿರ್ಮಿಸಲು ಹಲವಾರು ಯೋಜನೆಗಳನ್ನು ರೂಪಿಸಿ, ಅನುಷ್ಠಾನಕ್ಕೆ ತಂದಿದ್ದೇವೆ. ಬಾಬು ಜಗಜೀವನ್ ರಾಮ್ ಅವರ ಹೆಸರಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 100 ಯುವಕರಿಗೆ ಸ್ವಯಂ ಉದ್ಯೋಗ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ. ಶೈಕ್ಷಣಿಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, 'ವಿವೇಕ' ಯೋಜನೆಯಡಿ ಮೊದಲ ಬಾರಿಗೆ 8000 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ ಎಂದರು.

ಅದ್ದೂರಿ ದಸರಾಗೆ ಸಿದ್ಧತೆ

ಅದ್ದೂರಿ ದಸರಾಗೆ ಸಿದ್ಧತೆ

ಕೋವಿಡ್ ಸಂಕಷ್ಟದಿಂದ ಕಳೆದ ಎರಡು ವರ್ಷ ಸರಳವಾಗಿ ದಸರಾ ಆಚರಣೆ ಮಾಡಲಾಗಿತ್ತು. ಈ ಬಾರಿ ಚಾಮುಂಡೇಶ್ವರಿ ದೇವಿಯ ಕೃಪೆಯಿಂದ ಆ ಭೀತಿ ದೂರವಾಗಿದ್ದು, ಈ ಬಾರಿ ನಾಡಹಬ್ಬ ದಸರಾ ಮಹೋತ್ಸವವನ್ನು ಸಾಂಪ್ರದಾಯಿಕವಾಗಿ, ಅದ್ಧೂರಿಯಾಗಿ ಆಚರಣೆ ಮಾಡಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಭಾಗವಾಗಿ ಹಮ್ಮಿಕೊಂಡಿದ್ದ 'ಹರ್ ಘರ್ ತಿರಂಗ' ಅಭಿಯಾನ ಮೈಸೂರು ಜಿಲ್ಲೆಯಲ್ಲಿ ಯಶಸ್ವಿಯಾಗಿದೆ ಎಂದರು.

'ಸ್ವಾತಂತ್ರ್ಯ ನಡಿಗೆ' ಕರೆಗೆ 1 ಲಕ್ಷ ಮಂದಿ ಸ್ಪಂದನೆ: ಡಿಕೆ ಶಿವಕುಮಾರ್'ಸ್ವಾತಂತ್ರ್ಯ ನಡಿಗೆ' ಕರೆಗೆ 1 ಲಕ್ಷ ಮಂದಿ ಸ್ಪಂದನೆ: ಡಿಕೆ ಶಿವಕುಮಾರ್

ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ

ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ

ನಮ್ಮ ದೇಶಪ್ರೇಮ ಸ್ವಾತಂತ್ರ‍್ಯ ದಿನಾಚರಣೆಗಷ್ಟೇ ಸೀಮಿತಗೊಳ್ಳಬಾರದು. ದೇಶಪ್ರೇಮ ನಮ್ಮಲ್ಲಿ ಪ್ರತಿದಿನವೂ, ಪ್ರತಿಕ್ಷಣವೂ ಇರಬೇಕು. ವೈವಿಧ್ಯತೆಯಲ್ಲಿ ಏಕತೆ ನಮ್ಮ ದೇಶದ ಸೌಂದರ್ಯವಾಗಿದೆ. ನಾವೆಲ್ಲರೂ ಒಂದೇ ಎಂಬ ಭಾವನೆ ನಮ್ಮನ್ನು ಬೆಸೆಯಬೇಕು. ರಾಜ್ಯದ ಸುಮಾರು 28 ಸಾವಿರ ಗ್ರಾಮಗಳಲ್ಲಿ ತಲಾ ಒಂದು ವಿವೇಕಾನಂದ ಸ್ವಸಹಾಯ ಸಂಘಗಳನ್ನು ರಚಿಸಿ, ಯುವಕರಿಗೂ ಆರ್ಥಿಕ ನೆರವು, ಬ್ಯಾಂಕ್ ವ್ಯವಸ್ಥೆ, ತರಬೇತಿ ಹಾಗೂ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಮಾಹಿತಿ ನೀಡಿದರು.

ಯಶಸ್ವಿನಿ ಯೋಜನೆಗೆ 300 ಕೋಟಿ ಮೀಸಲು

ಯಶಸ್ವಿನಿ ಯೋಜನೆಗೆ 300 ಕೋಟಿ ಮೀಸಲು

ವಿದ್ಯಾನಿಧಿ ಯೋಜನೆಯನ್ನು ನೇಕಾರರ ಮಕ್ಕಳಿಗೆ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಹಾಗೂ ಮೀನುಗಾರರ ಮಕ್ಕಳಿಗೂ ವಿಸ್ತರಿಸಲಾಗಿದೆ. 10 ರಿಂದ 12 ಸಾವಿರ ನೇಕಾರರ ಮಕ್ಕಳಿಗೆ, 50 ಸಾವಿರ ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಹಾಗೂ ಮೀನುಗಾರರ ಮಕ್ಕಳಿಗೆ ಇದರ ಲಾಭ ದೊರೆಯಲಿದೆ. ಈ ವರ್ಷದ ಬಜೆಟ್‌ನಲ್ಲಿ ಯಶಸ್ವಿನಿ ಯೋಜನೆಯನ್ನು ಪುನರ್ ಆರಂಭಿಸಲು ಮಹತ್ವದ ಘೋಷಣೆ ಮಾಡಿದ್ದು, ಅದಕ್ಕಾಗಿ 300 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಈಗಾಗಲೇ 100 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ. ಯಶಸ್ವಿನಿ ಯೋಜನೆಯು ರೈತರ ಆರೋಗ್ಯದ ಆಶಾಕಿರಣವಾಗಿದೆ. ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಅಕ್ಟೋಬರ್ 2ರಂದು ಯೋಜನೆಗೆ ಚಾಲನೆ ನೀಡಲು ಉದ್ದೇಶಿಸಲಾಗಿದೆ ಎಂದರು‌.

ಮೈಸೂರು-ಬೆಂಗಳೂರು ಹೆದ್ದಾರಿ ವರ್ಷಾಂತ್ಯಕ್ಕೆ ಪೂರ್ಣ

ಮೈಸೂರು-ಬೆಂಗಳೂರು ಹೆದ್ದಾರಿ ವರ್ಷಾಂತ್ಯಕ್ಕೆ ಪೂರ್ಣ

ಮೈಸೂರು ಜಿಲ್ಲೆಗೆ ನಮ್ಮ ಸರ್ಕಾರ ವಿಶೇಷ ಗಮನ ಹರಿಸಿದೆ. ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಮೈಸೂರಿಗೆ ಬಂದು, ಇಲ್ಲಿನ ಯೋಗಪಟುಗಳ ಜೊತೆಗೂಡಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದರು. ಆ ಮೂಲಕ ನಮ್ಮ ಮೈಸೂರಿಗೆ ಅಂತಾರಾಷ್ಟ್ರೀಯ ಗಮನ ಸೆಳೆಯುವಂತೆ ಮಾಡಿದರು. ಆ ಕಾರ್ಯಕ್ರಮ ಪ್ರವಾಸೋದ್ಯಮದ ಬೆಳವಣಿಗೆಯ ದೃಷ್ಟಿಯಿಂದ ಅತ್ಯಂತ ಮಹತ್ತರವಾಗಿತ್ತು. ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ದಶಪಥ ಕಾಮಗಾರಿಯು ತ್ವರತಿಗತಿಯಲ್ಲಿ ಸಾಗಿದ್ದು, ಈ ವರ್ಷದ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರಿಂದ ಬೆಂಗಳೂರು ಮತ್ತು ಮೈಸೂರು ನಡುವೆ ಸಂಚಾರ ಅತ್ಯಂತ ಸುಗಮವಾಗಲಿದ್ದು, ಪ್ರಯಾಣ ಅವಧಿ ತುಂಬಾ ಕಡಿಮೆಯಾಗಲಿದೆ. ಇದರಿಂದ ನಾಗರಿಕರಿಗೆ ತುಂಬಾ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಡಿಸಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಸೇರಿದಂತೆ ಇತರರು ಇದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

English summary
BJP Government launched Vidhyanidi program for students, Yashaswini relaunched for farmers, Vivekananda co-operative sangh impelmented for youths, says minister ST Somashekar in Mysuru independence day program.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X