ಮೈಸೂರಿನಲ್ಲಿ ಎಂಬಿಎ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ಮೈಸೂರು, ಆಗಸ್ಟ್, 13 :ಭಾರತಾದ್ಯಂತ ಸ್ಥಾಪಿಸಿರುವ 19 ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ (I I M) ಎಂ.ಬಿ.ಎ. ಕೋರ್ಸ್ ಗಾಗಿ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 50%, ಪ.ಜಾ./ಪ.ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು 45% ಅಂಕ ಗಳೊಂದಿಗೆ ಪದವಿ ತೇರ್ಗಡೆ ಹೊಂದಿರಬೇಕು.[ಚಿತ್ರದುರ್ಗದಲ್ಲಿ 75 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ ಇವೆ]

ಅರ್ಜಿಯನ್ನು ಆನ್ ಲೈನ್ ಮೂಲಕ ಕೋರಲಾಗಿದ್ದು, www.iimcat.ac.in ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-09-2015.
ಸಾಮಾನ್ಯ ಅರ್ಹತಾ ಪರೀಕ್ಷೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಪ್ರವೇಶ ಪತ್ರಗಳನ್ನು ಅಕ್ಟೋಬರ್ 15 ರಿಂದ ಪರೀಕ್ಷಾ ದಿನಾಂಕದವರೆಗೆ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
ಹೆಚ್ಚಿನ ಮಾಹಿತಿಗೆ ಉಪ ಮುಖ್ಯಸ್ಥರು, ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಗ್ರಂಥಾಲಯ ಕಟ್ಟಡ, ಮಾನಸಗಂಗೋತ್ರಿ, ಮೈಸೂರು ವಿಶ್ವವಿದ್ಯಾನಿಲಯ, ದೂರವಾಣಿ ಸಂಖ್ಯೆ 0821-2516844, ಮೊಬೈಲ್ ಸಂಖ್ಯೆ: 9449686641 ಇವರನ್ನು ಸಂಪರ್ಕಿಸುವುದು.












Click it and Unblock the Notifications