ನಾಟಕದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ಗೆ ಅವಮಾನ ಆರೋಪ, ಮೈಸೂರಿನಲ್ಲಿ "ಕೈ" ಕಾರ್ಯಕರ್ತರ ಸಮರ
ಮೈಸೂರು, ಜನವರಿ, 10: 'ಸಾಂಬಶಿವ ಪ್ರಹಸನ' ನಾಟಕದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅವಹೇಳನ ಘಟನೆ ಸಂಭವಿಸಿದ್ದು, ಇದನ್ನು ಖಂಡಿಸಿ ಸ್ವಾಭಿಮಾನಿ ಹೋರಾಟ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರನ್ನು ವಜಾ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕಾಂಗ್ರೆಸ್ ಪಕ್ಷ ಸೇರಿದಂತೆ ನಾನಾ ಸಂಘಟನೆಗಳ ಸದಸ್ಯರು ರಂಗಾಯಣಕ್ಕೆ ಮುತ್ತಿಗೆ ಹಾಕುವ ಪ್ರಯತ್ನವನ್ನು ಮಾಡಿದರು. ಹಾಗೆಯೇ ಸರ್ಕಾರದ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ನಿಷೇಧಾಜ್ಞೆ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಪೊಲೀಸರು, ಮುತ್ತಿಗೆ ಹಾಕಲು ತೆರಳುತ್ತಿದ್ದ ಪ್ರತಿಭಟನಾಕಾರರನ್ನು ಜಿಲ್ಲಾಧಿಕಾರಿ ಕಚೇರಿ ಬಳಿಯೇ ತಡೆದು ವಾಪಾಸ್ ಕಳುಹಿಸಿದರು. ಯಾವುದೇ ಅನಾಹುತ ಆಗದಂತೆ ಪೊಲೀಸ್ ಬಂದೋ ಬಸ್ತ್ ಕೈಗೊಳ್ಳಲಾಗಿತ್ತು.
ಎನ್‌ಆರ್ ಕ್ಷೇತ್ರದಲ್ಲಿ ಹಿಡಿತ ಸಾಧಿಸಿದ ತನ್ವೀರ್ ಸೇಠ್: ಈ ಬಾರಿ ಪ್ರತಿ ಸ್ಫರ್ಧಿ ಯಾರು..?
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ವಕ್ತಾರ ಎಂ.ಲಕ್ಷ್ಮಣ್, ಪ್ರಗತಿಪರ ಚಿಂತಕ ಟಿ.ಗುರುರಾಜ್, ಹಿರಿಯ ರಂಗಕರ್ಮಿ ಕೃಷ್ಣಪ್ರಸಾದ್ ಸೇರಿದಂತೆ ಇತರರು ಸಮಾಜದಲ್ಲಿ ಅಶಾಂತಿ ವಾತಾವರಣ ನಿರ್ಮಾಣ ಮಾಡುತ್ತಿರುವ ಅಡ್ಡಂಡ ಕಾರ್ಯಪ್ಪ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರು ವಿಶ್ವವಿದ್ಯಾಲಯ ಕ್ರಾರ್ಡ್ ಹಾಲ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಯಿತು. ಅಲ್ಲಿಂದ ಹುಣಸೂರು ರಸ್ತೆಯಲ್ಲಿರುವ ಕಲಾಮಂದಿರದ ಆವರಣದಲ್ಲಿರುವ ರಂಗಾಯಣಕ್ಕ ಮುತ್ತಿಗೆ ಹಾಕಲು ಕಾರ್ಯಕರ್ತರು ಯತ್ನಿಸಿದರು. ಆದರೆ, ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ. ರಸ್ತೆಯುದ್ದಕ್ಕೂ ತಮಟೆ ಬಡಿಕೊಂಡು ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದರು.

6 ಗಂಟೆಯವರೆಗೂ 144 ಸೆಕ್ಷನ್ ಜಾರಿ
ಜಿಲ್ಲಾಧಿಕಾರಿ ಕಚೇರಿಯ ಕಮಾನು ಗೇಟ್ ಬಳಿಯೇ ಬ್ಯಾರಿಕೇಡ್ ಮುಂದೆ ಸಾಕಷ್ಟು ಕಾರ್ಯಕರ್ತರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ರಂಗಾಯಣದ 200 ಮೀಟರ್ ಸುತ್ತ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೂ ಪೊಲೀಸ್ ಆಯುಕ್ತ ರಮೇಶ್ ಬಾನೋಟ್ 144 ಸೆಕ್ಷನ್ ಜಾರಿಗೊಳಿಸಿದ್ದರು.

ಪ್ರತಿಭಟನೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದರು?
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಎಂ.ಕೆ. ಸೋಮಶೇಖರ್, ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷ ಡಾ.ಪುಷ್ಪಾ ಅಮರನಾಥ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ಹಿಂದುಳಿದ ಜಾಗೃತ ವೇದಿಕೆಗಳ ಅಧ್ಯಕ್ಷ ಕೆ.ಎಸ್. ಶಿವರಾಂ ಸೇರಿದಂತೆ ಮತ್ತಿರರು ಇದ್ದರು.

ಆಕ್ರೋಶಕ್ಕೆ ಕಾರಣವಾದ ಅಂಶಗಳ ವಿವರ
ರಂಗಾಯಣದ ಭೂಮಿಗೀತದಲ್ಲಿ ನಾಗರತ್ನಮ್ಮ ಕಾರ್ಯಾಗಾರ ವಿದ್ಯಾರ್ಥಿಗಳು, ಕಾರ್ತಿಕ್ ಉಪಮನ್ಯು ನಿರ್ದೇಶನದಲ್ಲಿ ಚಂದ್ರಶೇಖರ ಕಂಬಾರ್ ರಚನೆಯ ಸಾಂಬಶಿವ ಪ್ರಹಸನ' ನಾಟಕ ಪ್ರಸ್ತುತಪಡಿಸಿದ್ದರು. ಈ ನಾಟಕದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಅವಹೇಳನ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಆರೋಪಿಸಿತ್ತು. ಅನ್ನ ಭಾಗ್ಯ, ಕಂಕಣ ಭಾಗ್ಯ ಸೇರಿದಂತೆ ವಿವಿಧ ಭಾಗ್ಯಗಳನ್ನು ನೀಡಿ ಜನರನ್ನು ಸೋಮಾರಿ ಮಾಡಲಾಗಿದೆ ಎಂಬ ಅಂಶವನ್ನು ನಾಟಕದಲ್ಲಿ ತೋರಿಸಲಾಗಿತ್ತು.

ಡಿ.ಕೆ. ಶಿವಕುಮಾರ್‌ಗೆ ಅವಮಾನ, ಆರೋಪ
ಅಲ್ಲದೆ, ಕೆಡಿ ಅಂಕಲ್ ಎಂಬ ಪಾತ್ರ ಸೃಷ್ಟಿಸಿ ಡಿ.ಕೆ. ಶಿವಕುಮಾರ್ ಅವರನ್ನು ಅವಮಾನಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಬಿ.ಸುಬ್ರಮಣ್ಯ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಲ್ಲದೆ, ಸ್ವತಃ ಚಂದ್ರಶೇಖರ್ ಕಂಬಾರ ಅವರು, ನನ್ನ ನಾಟಕ ಯಾವುದೇ ವ್ಯಕ್ತಿಯನ್ನು ಕುರಿತು ಬರೆದಿಲ್ಲ. ಈ ನಾಟಕ ಮಾಡಲು ರಂಗಾಯಣವಾಗಲಿ, ಅದರ ನಿರ್ದೇಶಕರಾಗಲಿ ನನ್ನ ಅನುಮತಿ ಪಡೆದಿಲ್ಲ. ಹಾಗಾಗಿ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದರು.
-
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications