ಅಂತರಾಷ್ಟ್ರೀಯ ಅಥ್ಲಿಟ್ ಅರ್ಜುನ್ ದೇವಯ್ಯ ಕಾರು ಅಪಘಾತ
ಮೈಸೂರು, ನವೆಂಬರ್. 27 : ಪ್ರಖ್ಯಾತ ಅಂತರಾಷ್ಟ್ರೀಯ ಅಥ್ಲೀಟ್ ಟಿ. ಅರ್ಜುನ್ ದೇವಯ್ಯ ಕಾರು ಇಂದು ಮಂಗಳವಾರ ಬೆಳಗ್ಗೆ ಅಪಘಾತಕ್ಕೀಡಾಗಿದ್ದು, ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ಅಪಘಾತ ನಡೆದ ತೀವ್ರತೆಗೆ ಅರ್ಜುನ್ ಅವರ ಕಾರು ಸಂಪೂರ್ಣ ಜಖಂಗೊಂಡಿದೆ. ಮೈಸೂರು ಜಿಲ್ಲೆಯ ಬಿಳಿಕೆರೆ ಸಮೀಪ ಈ ಅಪಘಾತ ಸಂಭವಿಸಿದೆ.
ಘಟನೆ ನಡೆದ ಸಂದರ್ಭದಲ್ಲಿ ಕಾರಿನಲ್ಲಿ ಅಥ್ಲೀಟ್ ಅರ್ಜುನ್ ದೇವಯ್ಯ, ಪತ್ನಿ ದಿವ್ಯಾ ಇದ್ದರು ಎಂದು ತಿಳಿದು ಬಂದಿದೆ.

ಖಾಸಗಿ ಕಾರ್ಯಕ್ರಮವೊಂದನ್ನು ಮುಗಿಸಿ ಮಡಿಕೇರಿಯಿಂದ ಕುಟುಂಬ ಸಮೇತವಾಗಿ ಮೈಸೂರಿಗೆ ಆಗಮಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಈ ಕುರಿತು ಬಿಳಿಕೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮತ್ತಷ್ಟು ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.












Click it and Unblock the Notifications