• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು ಪ್ರಾದೇಶಿಕ ಆಯುಕ್ತರ ತನಿಖಾ ವರದಿ ಸಲ್ಲಿಕೆ; ರೋಹಿಣಿ ಸಿಂಧೂರಿಗೆ ಸಂಕಷ್ಟ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 22: ಭಾರೀ ಚರ್ಚೆಗೆ ಕಾರಣವಾಗಿದ್ದ ಮೈಸೂರು ಜಿಲ್ಲಾಧಿಕಾರಿ ಅಧಿಕೃತ ಸರಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಾಣ ಬಗ್ಗೆ ಮೈಸೂರು ಪ್ರಾದೇಶಿಕ ಆಯುಕ್ತರಿಂದ ತನಿಖಾ ವರದಿ ಸಲ್ಲಿಕೆಯಾಗಿದೆ.

"ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜಿಲ್ಲಾಧಿಕಾರಿಯಾಗಿದ್ದ ವೇಳೆ ಈಜುಕೊಳ ನಿರ್ಮಾಣದಲ್ಲಿ ಆಗಿರುವ ಪ್ರಮುಖ ನ್ಯೂನತೆಗಳನ್ನು ನಮೂದಿಸಿದ್ದು, ಈಜುಕೊಳ ನಿರ್ಮಾಣವು ಯಾವುದೇ ಸಾರ್ವಜನಿಕ ಹಿತಾಸಕ್ತಿ ಹೊಂದಿರುವುದಿಲ್ಲ,'' ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈಜುಕೊಳ ನಿರ್ಮಾಣ ವಿವಾದ; ಸ್ಪಷ್ಟನೆ ಕೊಟ್ಟ ರೋಹಿಣಿ ಸಿಂಧೂರಿಈಜುಕೊಳ ನಿರ್ಮಾಣ ವಿವಾದ; ಸ್ಪಷ್ಟನೆ ಕೊಟ್ಟ ರೋಹಿಣಿ ಸಿಂಧೂರಿ

ವರದಿಯಲ್ಲಿ ಇರುವ ಅಂಶಗಳು

1. ಮೈಸೂರು ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣಕ್ಕೆ ಸಂಬಂಧಪಟ್ಟಂತೆ 32 ಲಕ್ಷ ರೂ. ಗಳಿಗೆ ಅಂದಾಜು ಪಟ್ಟಿಯನ್ನು ತಯಾರಿಸಿದ್ದು, ಅಂದಾಜುಪಟ್ಟಿಗೆ ತಾಂತ್ರಿಕ ವರ್ಗದವರಿಂದ ಅಥವಾ ಲೋಕೋಪಯೋಗಿ ಇಲಾಖೆಯಿಂದ ಅನುಮೋದನೆ ಪಡೆದಿಲ್ಲ.

2. ಈಜುಕೊಳದ ನಿರ್ಮಾಣದ ಬಗ್ಗೆ ಯಾವುದೇ ಪೂರ್ವಭಾವಿ ಆಡಳಿತಾತ್ಮಕ ಮಂಜೂರಾತಿ ಪಡೆದಿಲ್ಲ.

3. ಈಜುಕೊಳದ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಯಾವುದೇ ಕಾರ್ಯಾದೇಶ ಇಲ್ಲ.

4. ಕಾಮಗಾರಿ ನಿರ್ವಹಿಸಿದವರ ಒಪ್ಪಂದ ಪತ್ರಗಳು ಇಲ್ಲ.

5. ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮೋದನೆ ಪಡೆದಿಲ್ಲ.

ಮೈಸೂರು ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣ ಮಾಡಿರುವುದು ಯಾವುದೇ ಸಾರ್ವಜನಿಕರಿಗೆ ಉಪಯೋಗಿಸಲು ಸಾಧ್ಯವಿರುವುದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದರಿಂದ ಅಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ.

English summary
Investigation against Rohini Sindhuri; Report Submitted to Govt for renovating heritage building without permission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X