ರೆಡ್ ಝೋನ್ ಮೈಸೂರಿನಲ್ಲಿ ಲಾಕ್ ಡೌನ್ ಸಡಿಲಿಕೆ ಇದೆಯಾ?

ಮೈಸೂರು, ಏಪ್ರಿಲ್ 23: ಮೈಸೂರು ರೆಡ್ ಝೋನ್ ಆಗಿದ್ದು, ಜಿಲ್ಲೆಯಲ್ಲಿ ಯಾವುದೇ ಸಡಿಲಿಕೆ ಇಲ್ಲ. ಮೆಡಿಕಲ್ ಎಮರ್ಜೆನ್ಸಿಯಂತಹ ತುರ್ತು ಪರಿಸ್ಥಿತಿಗಳಿಗೆ ಮಾತ್ರ ಓಡಾಟಕ್ಕೆ ಅನುಮತಿ ಕೊಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

Recommended Video

      ಈ ಪುಟ್ಟ ಹುಡುಗಿಗೆ ಕೊರೊನಾ ಬಗ್ಗೆ ಎಷ್ಟು ತಿಳುವಳಿಕೆ ಇದೆ ನೋಡಿ | Little Speaks About Corona

      ಕೃಷಿ ಚಟುವಟಿಕೆಗೆ ಈಗಾಗಲೇ ಅನುಮತಿ ಕೊಡಲಾಗಿದೆ. ಉಳಿದಂತೆ ಈ ಹಿಂದಿನ ಕ್ರಮವೇ ಮುಂದುವರಿಯುತ್ತದೆ. ಐಟಿ ಬಿಟಿಗೆ ಅಗತ್ಯವಿರುವಷ್ಟು ಮಾತ್ರ ಅನುಮತಿ ಕೊಡಲಾಗಿದ್ದು, ಪರಿಸ್ಥಿತಿ ನೋಡಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

      ಕಟ್ಟಡ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ಕಟ್ಟಡ ಕಾರ್ಮಿಕರು ಮೈಸೂರು ಜಿಲ್ಲೆಯವರಾಗಿದ್ದು, ಇಲ್ಲೇ ಇದ್ದರೆ ಮಾತ್ರ ಕೆಲಸ ಮಾಡಬಹುದು. ಹೊರ ಜಿಲ್ಲೆ ಇಲ್ಲವೇ ರಾಜ್ಯಗಳಿಂದ ಈ ಸಂದರ್ಭದಲ್ಲಿ ಇಲ್ಲಿಗೆ ಬಂದು ಕೆಲಸ ಮಾಡಲು ಅನುಮತಿ ಇಲ್ಲ. ತೀರಾ ತುರ್ತು ಇದ್ದವರು ಅನುಮತಿ ಪಡೆದು ಕೆಲಸ ಮಾಡಿಸಿಕೊಳ್ಳಬಹುದು. ಕಬ್ಬಿಣ ಹಾರ್ಡ್‌ವೇರ್ ಅಂಗಡಿಗಳು ತೆರೆಯುವಂತಿಲ್ಲ. ಪ್ಲಂಬರ್ ಎಲೆಕ್ಟ್ರಿಕ್ ಕೆಲಸಗಳಿಗೆ ಪೊಲೀಸ್ ಅನುಮತಿ ಅವಶ್ಯಕ. ಉಳಿದ ವಿಷಯಗಳಿಗೆ ಮೇ 3ನೇ ತಾರೀಖಿನವರೆಗೆ ಯಾವುದೇ ಕಾರಣಕ್ಕೂ ಅನುಮತಿ ಇಲ್ಲ. ಆಮೇಲೆ ಈ ಬಗ್ಗೆ ಪರಿಶೀಲನೆ ನಡೆಸಿ ಮುಂದೆ ಏನು ಮಾಡಬಹುದು ಎಂದು ತೀರ್ಮಾನ ಮಾಡಲಾಗುವುದು ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

      Is There Relax From Lockdown In Red Zone Mysuru

      ರೈತರು ತಮ್ಮ ಹಳೇ ಸಾಲವನ್ನು ತೀರಿಸುವ ಸಲುವಾಗಿ ಸುಸ್ತಿ ಮನ್ನಾ ಮಾಡಲಾಗುವುದು. ಇದಕ್ಕೆ ಮಾರ್ಚ್ 31ರವರೆಗೆ ಗಡುವು ನೀಡಲಾಗಿತ್ತು. ಈ ಗಡುವನ್ನು ಮತ್ತೆ ಮೂರು ತಿಂಗಳ ಅವಧಿಗೆ ವಿಸ್ತರಿಸಲಾಗುವುದು. ಅವಧಿ ವಿಸ್ತರಣೆಯಿಂದ 14 ಕೋಟಿ ರೂ. ಬಡ್ಡಿ ಹೊರೆ ಬರುತ್ತದೆ. ಅದನ್ನು ನಾವೇ ಭರಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

      ನಾಗರಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲಿ, ಯಾವುದೇ ಕಾರಣಕ್ಕೂ ಅನವಶ್ಯಕವಾಗಿ ಮನೆಯಿಂದ ಆಚೆ ಬರಕೂಡದು ಎಂದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+