ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೇಂದ್ರೀಕೃತ ಅಡುಗೆ ಕೇಂದ್ರ ಸ್ಥಾಪನೆಗೆ ಮೈಸೂರು ವಿವಿ ಚಿಂತನೆ

|
Google Oneindia Kannada News

ಮೈಸೂರು, ಮೇ 31 : ಮೈಸೂರು ವಿಶ್ವವಿದ್ಯಾನಿಲಯದ ವಸತಿ ನಿಲಯದಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರವನ್ನು ನೀಡುವ ಸಲುವಾಗಿ ಇಸ್ಕಾನ್ ಮಾದರಿಯಂತೆ ಒಂದೇ ಸ್ಥಳದಲ್ಲಿ ಅಡುಗೆ ಕೋಣೆ ನಿರ್ಮಿಸಿ ಅಲ್ಲಿ ವಿದ್ಯಾರ್ಥಿಗಳ ಅನುಗುಣವಾಗಿ ಆಹಾರ ತಯಾರಿಸುವ ಹೊಸ ಯೋಜನೆಗೆ ಮೈಸೂರು ವಿವಿ ಮುಂದಾಗಿದೆ. ಈ ಕುರಿತ ಪ್ರಸ್ತಾವಕ್ಕೆ ಸಿಂಡಿಕೇಟ್ ಸಭೆಯಲ್ಲಿ ಒಪ್ಪಿಗೆ ಸಹ ನೀಡಲಾಯಿತು.

ಮೈಸೂರು ವಿ.ವಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಪೂರೈಸುವ ದೃಷ್ಟಿಯಿಂದಾಗಿ ಕೇಂದ್ರೀಕೃತ ಅಡುಗೆ ಕೇಂದ್ರ ಸ್ಥಾಪಿಸುವ ಯೋಜನೆ ಇದಾಗಿದ್ದು, ಮೈಸೂರು ವಿ.ವಿ.ಯ 15 ಹಾಸ್ಟೆಲ್ ಗಳಿಗೆ ಆಹಾರ ತಯಾರಿ ನಡೆಯಬೇಕಿದೆ. ಸದ್ಯದ ವ್ಯವಸ್ಥೆಯಲ್ಲಿ ಹಾಸ್ಟೆಲ್ ಗಳ ವಿದ್ಯಾರ್ಥಿಗಳಿಗೆ ಆಹಾರ ಪೂರೈಸಲು ಪ್ರತ್ಯೇಕ ಟೆಂಡರ್ ಗಳನ್ನು ಕರೆಯಲಾಗುತ್ತಿತ್ತು. ಇದರಿಂದ ಒಂದೊಂದು ಹಾಸ್ಟೆಲ್ ಗೆ ಭಿನ್ನ ರುಚಿ ಹಾಗೂ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿತ್ತು. ಆದ್ದರಿಂದ ಕೇಂದ್ರೀಕೃತ ಅಡುಗೆ ಕೇಂದ್ರ ಸ್ಥಾಪಿಸಿ ಎಲ್ಲ ಹಾಸ್ಟೆಲ್ ಗಳಿಗೆ ಅಲ್ಲಿಂದಲೇ ಆಹಾರ ಪೂರೈಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ಹೇಳಿವೆ. ಮುಂದಿನ 3 ತಿಂಗಳಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ. ಕೇಂದ್ರೀಕೃತ ಅಡುಗೆ ಕೇಂದ್ರದ ಸ್ಥಾಪನೆಗೆ ಶೀಘ್ರದಲ್ಲೇ ಸ್ಥಳ ಗುರುತಿಸಲಾಗುವುದು ಎಂದು ತಿಳಿಸಿವೆ.

ಮೈಸೂರು ವಿವಿಯಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಶುಲ್ಕ ಕಡಿತಮೈಸೂರು ವಿವಿಯಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಶುಲ್ಕ ಕಡಿತ

ಇದಿಷ್ಟೆ ಅಲ್ಲದೇ ಶೀಘ್ರದಲ್ಲೇ ಕೆ.ಆರ್‌.ನಗರದಲ್ಲಿ ಸ್ನಾತಕೋತ್ತರ ಕೇಂದ್ರ ತಲೆ ಎತ್ತಲಿದ್ದು ಕನ್ನಡ, ಇಂಗ್ಲಿಷ್‌ ಮತ್ತು ಸಮಾಜಶಾಸ್ತ್ರ ಅಧ್ಯಯನ ವಿಭಾಗಗಳು ಕಾರ್ಯಾರಂಭ ಮಾಡಲಿವೆ ಎಂದು ಮೂಲಗಳು ತಿಳಿಸಿವೆ. ಜೊತೆಗೆ ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸುವಂತೆ ಸೂಚಿಸಿ ಹೈಕೋರ್ಟ್‌ ನೀಡಿದ್ದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ವಿ.ವಿ. ನಿರ್ಧರಿಸಿದೆ.

 Iskcon type food circulation for Mysuru university hostel students

ಮೈಸೂರು ವಿವಿ ಪ್ರವೇಶಾತಿ, ಪರೀಕ್ಷಾ ಶುಲ್ಕ ದರ ದಿಢೀರ್ ಏರಿಕೆ ಮೈಸೂರು ವಿವಿ ಪ್ರವೇಶಾತಿ, ಪರೀಕ್ಷಾ ಶುಲ್ಕ ದರ ದಿಢೀರ್ ಏರಿಕೆ

ಮೈಸೂರು ವಿವಿ. ವ್ಯಾಪ್ತಿಯಲ್ಲಿ 10 ವರ್ಷಕ್ಕೂ ಹೆಚ್ಚು ಕಾಲದಿಂದ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸಲು ತಕ್ಷಣವೇ ಮುಂದಾಗಬೇಕು ಎಂದು ಹೈಕೋರ್ಟ್, ರಾಜ್ಯ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಮೈಸೂರು ವಿ.ವಿ ರಿಜಿಸ್ಟ್ರಾರ್ ಅವರಿಗೆ ನಿರ್ದೇಶಿಸಿತ್ತು. ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿ ಹಾಗೂ ಹೈದರಾಬಾದ್‌ ಕರ್ನಾಟಕ ಮೀಸಲಾತಿ ಸೌಲಭ್ಯ ಜಾರಿಗೊಳಿಸಲು ಸಹ ವಿಶ್ವವಿದ್ಯಾಲಯ ನಿರ್ಧರಿಸಿದೆ.

English summary
Mysore University has set up a new kitchen plan for the students who have been admitted to the Mysore University's residence. The proposal for this was also agreed in the Syndicate Meeting. This system will be implemented in the next 3 months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X