ಮೈಸೂರಿನ ಡಿಕೆಶಿ ಸಂಬಂಧಿಕರ ಮನೆ ಮೇಲೂ ಐಟಿ ರೇಡ್

ಮೈಸೂರು, ಆಗಸ್ಟ್ 2: ಸಚಿವ ಡಿ.ಕೆ.ಶಿವಕುಮಾರ್ ಅವರ ಬೆಂಗಳೂರು ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಬೆನ್ನಲ್ಲೇ ಐಟಿ ಅಧಿಕಾರಿಗಳು ಇದೀಗ ಮೈಸೂರಿನಲ್ಲೂ ಸಚಿವರ ಸಂಬಂಧಿಕರ ಮನೆ ಮೇಲೆ ದಾಳಿ ಮಾಡಿದ್ದಾರೆ.

ನಗರದ ಇಟ್ಟಿಗೆ ಗೂಡಿನಲ್ಲಿರುವ ಡಿಕೆಶಿ ಅವರ ನಿವಾಸದ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಬೆಳಿಗ್ಗೆ 7 ಗಂಟೆಯಿಂದಲೂ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.

IT raid on D K Shivakumar's relatives' Mysuru residence

ಎರಡು ವಾಹನದಲ್ಲಿ ಅಧಿಕಾರಿಗಳ ತಂಡ ಆಗಮಿಸಿದ್ದು, ಒಂದು ತಂಡದಿಂದ ಮನೆಯ ಶೋಧ ಕಾರ್ಯ ನಡೆಯುತ್ತಿದೆ. ಅಲ್ಲದೆ, ಟಿ.ಕೆ ಬಡಾವಣೆ, ದಟ್ಟಗಳ್ಳಿಯಲ್ಲಿರುವ ಡಿಕೆಶಿ ಸಂಬಂಧಿಗಳ ಮನೆಗಳ ಮನೆ ಮೇಲೂ ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ.

ಸಚಿವ ಡಿ.ಕೆ.ಶಿವಕುಮಾರ್ ಅವರ ಮಾವ ತಿಮ್ಮಯ್ಯ ಅವರ ಮನೆ ಮೇಲೆ ದಾಳಿ ಮಾಡಿದ್ದ ಐಟಿ ಅಧಿಕಾರಿಗಳು ತಿಮ್ಮಯ್ಯ ಅವರನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.

ತಿಮ್ಮಯ್ಯ ಅವರಿಂದ ಮಹತ್ವದ ಮಾಹಿತಿ ಕಲೆ ಹಾಕಲು ಖಾಸಗಿ ವಾಹನದಲ್ಲಿ ಅವರನ್ನು ಐಟಿ ಅಧಿಕಾರಿಗಳು ಗೌಪ್ಯ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+