ಕಾಂಗ್ರೆಸ್ ಸೋಲು ಸುಲಭವಾಗಿರಲಿಲ್ಲ: ಶ್ರೀನಿವಾಸ್ ಪ್ರಸಾದ್
ಮೈಸೂರು, ಮೇ 24 : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಲನ್ನು ನೀಡುವ ಮೂಲಕ ಸಿದ್ದರಾಮಯ್ಯರವರಿಗೆ ಈ ಭಾಗದ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಚಾಮರಾಜನಗರದ ನೂತನ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವರ್ಚಸ್ಸು ರಾಜ್ಯದಲ್ಲಿ ಕಡಿಮೆಯಾಗಿದೆ. ಮೈಸೂರು ಭಾಗದಲ್ಲಿ ಜನರು ಸಿದ್ದರಾಮಯ್ಯ ಅವರಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದರು.
ನಮಗೆ ಕಾಂಗ್ರೆಸ್ ಭದ್ರಕೋಟೆ ಭೇದಿಸುವುದು ಅಷ್ಟು ಸುಲಭವಾಗಿರಲಿಲ್ಲ. ಕಳೆದ ಚುನಾವಣೆಗಳಲ್ಲಿ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ ಗಳಿಕೆಯನ್ನು ಕಡಿಮೆ ಮಾಡುವುದು ದೊಡ್ಡ ಸವಾಲಾಗಿತ್ತು. ವರುಣ, ಟಿ.ನರಸೀಪುರ, ಹೆಚ್.ಡಿ ಕೋಟೆ ಸೇರಿದಂತೆ ಹಲವು ಭಾಗಗಳಲ್ಲಿ ಕಾಂಗ್ರೆಸ್ ಬೇರೂರಿತ್ತು. ಅಂತಹ ಕ್ಷೇತ್ರಗಳಲ್ಲಿ ಈಗ ಬಿಜೆಪಿ ಅಸ್ತಿತ್ವ ಕಂಡುಕೊಂಡಿದೆ ಎಂದು ತಿಳಿಸಿದರು.

ಹಾಗೆಯೇ ಸಚಿವ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ ಶ್ರೀನಿವಾಸ್ ಪ್ರಸಾದ್, ಕ್ಷೇತ್ರದ ಜನತೆಗೆ ಈ ಮೂಲಕ ಅಭಿನಂದನೆ ಸಲ್ಲಿಸುತೇನೆ. ನಾನು ಸದ್ಯ ಸಚಿವ ಸ್ಥಾನ ಪಡೆಯುವ ಬಗ್ಗೆ ಯೋಚಿಸಿಲ್ಲ. ಅದು ಕೇಂದ್ರ ನಾಯಕರಿಗೆ ಬಿಟ್ಟ ವಿಚಾರ. ಈ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಐದು ವರ್ಷ ಕ್ಷೇತ್ರದ ಜನರ ಸೇವೆ ಮಾಡುವುದು ನನ್ನ ಕೆಲಸ ಎಂದರು.












Click it and Unblock the Notifications