ವರುಣಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸಿಂಧ್ಯ
Recommended Video

ಬೆಂಗಳೂರು, ಅಕ್ಟೋಬರ್ 30: ಜಾತ್ಯಾತೀತ ಜನತಾದಳಕ್ಕೆ ಮರಳಿರುವ ಮಾಜಿ ಸಚಿವ ಹಿರಿಯ ರಾಜಕಾರಣಿ ಪಿ.ಜಿ.ಆರ್. ಸಿಂಧ್ಯ ಅವರಿಗೆ ಪ್ರತಿಷ್ಠಿತ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಆಹ್ವಾನ ಸಿಕ್ಕಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುತ್ತಿರುವ ಮೈಸೂರಿನ ವರುಣಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಪಿ.ಜಿ.ಆರ್. ಸಿಂಧ್ಯ ಕಣಕ್ಕಿಳಿಯುವ ಸಾಧ್ಯತೆ ಇದೆ.
ದಶಕಕ್ಕೂ ಹೆಚ್ಚು ಕಾಲ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದ ಹಿರಿಯ ರಾಜಕಾರಣಿ ಸಿಂಧ್ಯ ಸೋಮವಾರ ಮರಳಿ ಜೆಡಿಎಸ್ ಸೇರಲಿದ್ದಾರೆ. ಸಿದ್ದರಾಮಯ್ಯ ಶಕ್ತಿ ಕುಗ್ಗಿಸಲು ಸಿದ್ಧತೆ ನಡೆಸಿರುವ ಜೆಡಿಎಸ್ ವರಿಷ್ಠರು ಸಿಂಧ್ಯ ಅವರನ್ನು ವರುಣಾದಲ್ಲಿ ಕಣಕ್ಕೆ ಇಳಿಸಲು ಚಿಂತನೆ ನಡೆಸಿದ್ದಾರೆ.

ಹಾಲಿ ಪ್ರತಿನಿಧಿಸುವ ವರುಣಾ ಕ್ಷೇತ್ರವನ್ನು ತಮ್ಮ ಪುತ್ರ ಡಾ. ಯತೀಂದ್ರ ಅವರಿಗೆ ಬಿಟ್ಟುಕೊಟ್ಟು, ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ. ವರುಣಾದಲ್ಲಿ ಒಕ್ಕಲಿಗರು, ಲಿಂಗಾಯಿತರು ಮತ್ತು ಹಿಂದುಳಿದ ವರ್ಗಗಳ ಮತದಾರರ ಸಂಖ್ಯೆ ಹೆಚ್ಚು. ಈ ಲೆಕ್ಕಾಚಾರದಲ್ಲಿ ಸಿಂಧ್ಯ ಅವರನ್ನು ಕಣಕ್ಕೆ ಇಳಿಸಿ, ಸಿದ್ದರಾಮಯ್ಯ ಅವರನ್ನು ಮೈಸೂರಿನಲ್ಲೇ ಕಟ್ಟಿ ಹಾಕುವ ಚಿಂತನೆ ಜೆಡಿಎಸ್ ವರಿಷ್ಠರದ್ದಾಗಿದೆ.

ಭಾನುವಾರ ಸಂಜೆ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಸಿಂಧ್ಯ ಪಕ್ಷಕ್ಕೆ ಮರು ಸೇರ್ಪಡೆಯಾಗುವ ಕುರಿತು ಮಾತುಕತೆ ನಡೆಸಿದರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತರಿದ್ದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications