ಮೈಸೂರು ಜಿ.ಪಂ.ನಲ್ಲಿ ಮೈತ್ರಿ ಕಗ್ಗಂಟು:ನಾಳೆ ಸಿಗಲಿದೆಯಾ ಉತ್ತರ?

ಮೈಸೂರು, ಫೆಬ್ರವರಿ 22: ಬಿಜೆಪಿ ಜತೆಗಿನ ಮೈತ್ರಿ ಮುಂದುವರೆಸಿ ಪೂರ್ಣ ಐದು ವರ್ಷಗಳ ಅವಧಿಗೆ ಮೈಸೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನವನ್ನು ತನ್ನಲ್ಲೇ ಉಳಿಸಿಕೊಳ್ಳಲು ಜೆಡಿಎಸ್ ನಿರ್ಧರಿಸಿದೆ.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಾಳೆ ಶನಿವಾರ (ಫೆ.23) ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನ ಜಿಲ್ಲಾ ಪಂಚಾಯಿತಿ ಸದಸ್ಯರು ಮತ್ತು ಸ್ಥಳೀಯ ಮುಖಂಡರು ಸಭೆ ನಡೆಸಿ ಚರ್ಚಿಸಿದರು.

ಸಚಿವರಾದ ಸಾ.ರಾ.ಮಹೇಶ್‌, ಜಿ.ಟಿ.ದೇವೇಗೌಡ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್‌.ವಿಶ್ವನಾಥ್, ಶಾಸಕ ಅಶ್ವಿನ್ ಕುಮಾರ್‌ ಅವರು ಸಭೆಯಲ್ಲಿ ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್‌ ಮೈತ್ರಿಯಿದ್ದರೂ, ಜಿಲ್ಲಾ ಪಂಚಾಯಿತಿಯಲ್ಲಿ ಮೈತ್ರಿ ಬೇಡ ಎಂಬ ತೀರ್ಮಾನಕ್ಕೆ ಸ್ಥಳೀಯ ಮುಖಂಡರು ಬಂದಿದ್ದಾರೆ.

JDS and BJP to continue alliance at Mysuru Zilla Panchayat

ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಚುನಾವಣೆ ಸಂಬಂಧ ಕಾಂಗ್ರೆಸ್‌ನ ಸದಸ್ಯರು ಬುಧವಾರ ಸಭೆ ನಡೆಸಿದ್ದರು. ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಆಡಳಿತ ನಡೆಸಲು ನಿರ್ಧರಿಸಿದ್ದರು. ಆದರೆ ಕಾಂಗ್ರೆಸ್‌ ಜತೆ ಕೈಜೋಡಿಸದಿರಲು ಜೆಡಿಎಸ್ ನ ಸ್ಥಳೀಯ ನಾಯಕರು ತೀರ್ಮಾನಿಸಿದ್ದಾರೆ.

ಜಿಲ್ಲಾ ಪಂಚಾಯಿತಿಯಲ್ಲಿ ಕಾಂಗ್ರೆಸ್‌ ಅತಿಹೆಚ್ಚು ಸ್ಥಾನಗಳನ್ನು ಹೊಂದಿದೆ. ಆ ಪಕ್ಷದ ಜತೆ ಮೈತ್ರಿ ಮಾಡಿಕೊಂಡರೆ ಆಡಳಿತದಲ್ಲಿ ಸಮನ್ವಯ ಸಾಧಿಸುವುದು ಕಷ್ಟ ಎಂಬ ಕಾರಣಕ್ಕೆ ಜೆಡಿಎಸ್ ಈ ನಿಲುವು ತಳೆದಿದೆ. ಅಧ್ಯಕ್ಷ ಸ್ಥಾನ ತನಗೇ ಬೇಕೆಂದು ಕಾಂಗ್ರೆಸ್‌ ಪಟ್ಟು ಹಿಡಿದರೆ ಗೊಂದಲ ಸೃಷ್ಟಿಯಾಗುವ ಸಾಧ್ಯತೆಯಿದೆ. ಅದಕ್ಕೆ ಅವಕಾಶ ನೀಡದಿರಲು ಜೆಡಿಎಸ್ ತೀರ್ಮಾನಿಸಿದೆ.

ಬಿಜೆಪಿ ಜತೆಗೆ ಮೈತ್ರಿ ಮುಂದುವರಿಸಿದರೆ ಅಧ್ಯಕ್ಷ ಸ್ಥಾನ ಜೆಡಿಎಸ್ ನಲ್ಲೇ ಇರಲಿದೆ. ಪರಿಮಳಾ ಶ್ಯಾಂ ಅವರು ಇನ್ನುಳಿದ ಅವಧಿಗೆ ಅಧ್ಯಕ್ಷರಾಗಲಿದ್ದಾರೆ. ಉಪಾಧ್ಯಕ್ಷ ಸ್ಥಾನ ಬಿಜೆಪಿಗೆ ಒಲಿಯಲಿದೆ. ಬಿಜೆಪಿ ಜತೆ ಮೈತ್ರಿ ಮುಂದುವರಿಸುವುದಕ್ಕೆ ಸಭೆಯಲ್ಲಿ ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು ಎನ್ನಲಾಗಿದೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಬೇಕಿದೆ. ಅದೇ ಪಕ್ಷದೊಂದಿಗೆ ಅಧಿಕಾರ ಹಂಚಿಕೊಂಡರೆ ಜನರಿಗೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ ಎಂಬ ವಾದವನ್ನು ಕೆಲವು ಸದಸ್ಯರು ಮುಖಂಡರ ಮುಂದಿಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+