ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಜಿ.ಪಂ.ನಲ್ಲಿ ಮೈತ್ರಿ ಕಗ್ಗಂಟು:ನಾಳೆ ಸಿಗಲಿದೆಯಾ ಉತ್ತರ?

|
Google Oneindia Kannada News

ಮೈಸೂರು, ಫೆಬ್ರವರಿ 22: ಬಿಜೆಪಿ ಜತೆಗಿನ ಮೈತ್ರಿ ಮುಂದುವರೆಸಿ ಪೂರ್ಣ ಐದು ವರ್ಷಗಳ ಅವಧಿಗೆ ಮೈಸೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನವನ್ನು ತನ್ನಲ್ಲೇ ಉಳಿಸಿಕೊಳ್ಳಲು ಜೆಡಿಎಸ್ ನಿರ್ಧರಿಸಿದೆ.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಾಳೆ ಶನಿವಾರ (ಫೆ.23) ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನ ಜಿಲ್ಲಾ ಪಂಚಾಯಿತಿ ಸದಸ್ಯರು ಮತ್ತು ಸ್ಥಳೀಯ ಮುಖಂಡರು ಸಭೆ ನಡೆಸಿ ಚರ್ಚಿಸಿದರು.

ಮೈಸೂರು ಜಿಪಂನಲ್ಲಿ ಅಧಿಕಾರಕ್ಕಾಗಿ ಜೆಡಿಎಸ್-ಕಾಂಗ್ರೆಸ್ ಕಸರತ್ತುಮೈಸೂರು ಜಿಪಂನಲ್ಲಿ ಅಧಿಕಾರಕ್ಕಾಗಿ ಜೆಡಿಎಸ್-ಕಾಂಗ್ರೆಸ್ ಕಸರತ್ತು

ಸಚಿವರಾದ ಸಾ.ರಾ.ಮಹೇಶ್‌, ಜಿ.ಟಿ.ದೇವೇಗೌಡ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್‌.ವಿಶ್ವನಾಥ್, ಶಾಸಕ ಅಶ್ವಿನ್ ಕುಮಾರ್‌ ಅವರು ಸಭೆಯಲ್ಲಿ ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್‌ ಮೈತ್ರಿಯಿದ್ದರೂ, ಜಿಲ್ಲಾ ಪಂಚಾಯಿತಿಯಲ್ಲಿ ಮೈತ್ರಿ ಬೇಡ ಎಂಬ ತೀರ್ಮಾನಕ್ಕೆ ಸ್ಥಳೀಯ ಮುಖಂಡರು ಬಂದಿದ್ದಾರೆ.

JDS and BJP to continue alliance at Mysuru Zilla Panchayat

ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಚುನಾವಣೆ ಸಂಬಂಧ ಕಾಂಗ್ರೆಸ್‌ನ ಸದಸ್ಯರು ಬುಧವಾರ ಸಭೆ ನಡೆಸಿದ್ದರು. ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಆಡಳಿತ ನಡೆಸಲು ನಿರ್ಧರಿಸಿದ್ದರು. ಆದರೆ ಕಾಂಗ್ರೆಸ್‌ ಜತೆ ಕೈಜೋಡಿಸದಿರಲು ಜೆಡಿಎಸ್ ನ ಸ್ಥಳೀಯ ನಾಯಕರು ತೀರ್ಮಾನಿಸಿದ್ದಾರೆ.

 ಮೈಸೂರು ಜಿ.ಪಂ.ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿ ಮೈಸೂರು ಜಿ.ಪಂ.ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿ

ಜಿಲ್ಲಾ ಪಂಚಾಯಿತಿಯಲ್ಲಿ ಕಾಂಗ್ರೆಸ್‌ ಅತಿಹೆಚ್ಚು ಸ್ಥಾನಗಳನ್ನು ಹೊಂದಿದೆ. ಆ ಪಕ್ಷದ ಜತೆ ಮೈತ್ರಿ ಮಾಡಿಕೊಂಡರೆ ಆಡಳಿತದಲ್ಲಿ ಸಮನ್ವಯ ಸಾಧಿಸುವುದು ಕಷ್ಟ ಎಂಬ ಕಾರಣಕ್ಕೆ ಜೆಡಿಎಸ್ ಈ ನಿಲುವು ತಳೆದಿದೆ. ಅಧ್ಯಕ್ಷ ಸ್ಥಾನ ತನಗೇ ಬೇಕೆಂದು ಕಾಂಗ್ರೆಸ್‌ ಪಟ್ಟು ಹಿಡಿದರೆ ಗೊಂದಲ ಸೃಷ್ಟಿಯಾಗುವ ಸಾಧ್ಯತೆಯಿದೆ. ಅದಕ್ಕೆ ಅವಕಾಶ ನೀಡದಿರಲು ಜೆಡಿಎಸ್ ತೀರ್ಮಾನಿಸಿದೆ.

 ಮೈಸೂರು ಜಿಲ್ಲಾ ಪಂಚಾಯತ್ ನಲ್ಲೂ ಮೈತ್ರಿಯಲ್ಲಿ ಬಿರುಕು ಸಾಧ್ಯತೆ! ಮೈಸೂರು ಜಿಲ್ಲಾ ಪಂಚಾಯತ್ ನಲ್ಲೂ ಮೈತ್ರಿಯಲ್ಲಿ ಬಿರುಕು ಸಾಧ್ಯತೆ!

ಬಿಜೆಪಿ ಜತೆಗೆ ಮೈತ್ರಿ ಮುಂದುವರಿಸಿದರೆ ಅಧ್ಯಕ್ಷ ಸ್ಥಾನ ಜೆಡಿಎಸ್ ನಲ್ಲೇ ಇರಲಿದೆ. ಪರಿಮಳಾ ಶ್ಯಾಂ ಅವರು ಇನ್ನುಳಿದ ಅವಧಿಗೆ ಅಧ್ಯಕ್ಷರಾಗಲಿದ್ದಾರೆ. ಉಪಾಧ್ಯಕ್ಷ ಸ್ಥಾನ ಬಿಜೆಪಿಗೆ ಒಲಿಯಲಿದೆ. ಬಿಜೆಪಿ ಜತೆ ಮೈತ್ರಿ ಮುಂದುವರಿಸುವುದಕ್ಕೆ ಸಭೆಯಲ್ಲಿ ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು ಎನ್ನಲಾಗಿದೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಬೇಕಿದೆ. ಅದೇ ಪಕ್ಷದೊಂದಿಗೆ ಅಧಿಕಾರ ಹಂಚಿಕೊಂಡರೆ ಜನರಿಗೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ ಎಂಬ ವಾದವನ್ನು ಕೆಲವು ಸದಸ್ಯರು ಮುಖಂಡರ ಮುಂದಿಟ್ಟಿದ್ದಾರೆ.

English summary
Mysuru Zilla Panchayat President and Vice President Election will be held tomorrow. The JDS has decided to retain with BJP its position as the Zilla Panchayat President for a full five-year term.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X