ಮೋದಿಯನ್ನು ಬಲಭೀಮನಿಗೆ ಹೋಲಿಸಿದ ವಿಶ್ವನಾಥ್

ಮೈಸೂರು, ಮೇ 30 : ಜೆಡಿಎಸ್ ರಾಷ್ಟ್ರಾಧ್ಯಕ್ಷ ಅಡಗೂರು ಎಚ್. ವಿಶ್ವನಾಥ್, ಪ್ರಧಾನಿಮಂತ್ರಿಯನ್ನು ಬಲಭೀಮನಿಗೆ ಹೋಲಿಸಿದ್ದಾರೆ. ದೇಶದ 15ನೇ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕಾರ ಹಿನ್ನೆಲೆ, ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಹಾಡಿ ಹೊಗಳಿ ಶುಭಾಶಯ ಕೋರಿದ್ದಾರೆ.

ಎರಡನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಮೋದಿಯವರಿಗೆ ತಮ್ಮ ಟ್ವಿಟರ್ ಖಾತೆ ಮೂಲಕ ಶುಭಹಾರೈಸಿದ್ದಾರೆ. ಭಾರತದ ಎಲ್ಲಾ ಜಾತಿ ಜನಾಂಗ ಧರ್ಮ ಭಾಷಿಣಿಕರ ಆಶಯಗಳಂತೆ ಎಲ್ಲರ ಭವಿಷ್ಯದ ಬಲ ಭೀಮನಾಗಿ ಪ್ರಧಾನಿ ಮೋದಿಯವರು ಹೆಜ್ಜೆ ಹಾಕಲಿ ಎಂದು ಆಶಿಸುತ್ತೇನೆ. ಎರಡನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡುತ್ತಿರುವ ನಿಮಗೆ ಶುಭಾಶಯಗಳು ಎಂದು ಹೊಗಳಿದ್ದಾರೆ.

ಜಾಗತಿಕ ಜಗತ್ತಿನ ಅತ್ಯಂತ ಎತ್ತರದ ಜನತಂತ್ರ ವ್ಯವಸ್ಥೆಯನ್ನು ಒಪ್ಪಿ ಅಪ್ಪಿ ಆಡಳಿತ ನಡೆಸುತ್ತಿರುವ, 71 ವರ್ಷಗಳ ಕಾಲದಿಂದಲೂ ಸ್ವತಂತ್ರವನ್ನು ಸಂರಕ್ಷಿಸಿ ಮುನ್ನುಗ್ಗುತ್ತಿರುವ ಭಾರತದ ಪ್ರಧಾನಮಂತ್ರಿ ಯಾಗಿ 2ನೇ ಬಾರಿ ಅಧಿಕಾರ ಸ್ವೀಕಾರ ಮಾಡುತ್ತಿರುವ ನಿಮಗೆ ಭಾರತದ ಸಮಸ್ತ ಜನಕೋಟಿಯ ಶುಭಕಾಮನೆಗಳು ಎಂದು ಟ್ವಿಟ್ ಮಾಡಿದ್ದಾರೆ.

JDS Leader H Vishwanath praised PM Narendra modi

ಇಂದು ರಾಷ್ಟ್ರಪತಿ ಭವನದಲ್ಲಿ ಮೋದಿ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವು ಸಂಜೆ 7 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 8 ಸಾವಿರ ಮಂದಿ ಭಾಗಿಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆ ವಿಶ್ವನಾಥ್ ಶುಭಕೋರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+