Get Updates
Get notified of breaking news, exclusive insights, and must-see stories!

ಕುತೂಹಲ ಮೂಡಿಸಿದ ವಿಶ್ವನಾಥ್- ಶ್ರೀನಿವಾಸ್ ಪ್ರಸಾದ್ ಭೇಟಿ

ಮೈಸೂರು, ಮೇ 08:ಚುನಾವಣೆ ನಂತರ ಸಿದ್ದರಾಮಯ್ಯ ಆಪ್ತರ ನಡೆಗೆ ಪ್ರತಿಕ್ರಿಯೆ ಕೊಡಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್, ವಿಶ್ವನಾಥ್ ಮುಂದಾಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷರು ಬಿಜೆಪಿ ಉಪಾಧ್ಯಕ್ಷರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ.

ಹೌದು, ಎಚ್ ವಿಶ್ವನಾಥ್ ಅವರು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ಎಂದು ಕೆಲ ಮೂಲಗಳಿಂದ ಮಾಹಿತಿ ಬಂದಿದೆ. ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಶ್ರೀನಿವಾಸ್ ಪ್ರಸಾದ್ ಮನೆಗೆ ವಿಶ್ವನಾಥ್ ಭೇಟಿ ನೀಡಿದ್ದಾರೆ.

ಈ ಲೋಕಸಭೆ ಚುನಾವಣೆಯಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವನಾಥ್ ಅವರನ್ನು ಕಡೆಗಣಿಸಿದ್ದರು. ಸಚಿವ ಜಿಟಿಡಿ ಜೊತೆ ಹೊಂದಾಣಿಕೆ ಆಗಿದ್ದರೂ, ವಿಶ್ವನಾಥ್ ಜೊತೆಗೆ ಪ್ರಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒಪ್ಪಿರಲಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಹೆಚ್ಚು ಗೊಂದಲ ಇರುವ ವೇಳೆ ವಿಶ್ವನಾಥ್ ನಡೆ ಅನುಮಾನ ಮೂಡಿಸಿದೆ.

JDS leader Vishwanath met Srinivas Prasad in Mysuru

ಇದರೊಟ್ಟಿಗೆ ಸಿಎಂ ಬದಲಾವಣೆ ಸುದ್ದಿ ಸಹ ಕೇಳಿ ಬರುತ್ತಿದ್ದು, ಕಾಂಗ್ರೆಸ್ ಅತೃಪ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜೆಡಿಎಸ್ ನಾಯಕ ಬಿಜೆಪಿ ಹಿರಿಯ ನಾಯಕನನ್ನು ಭೇಟಿ ಮಾಡಿರುವುದು ಸಾಕಷ್ಟು ಗೊಂದಲಗಳಿಗೆ ದಾರಿ ಮಾಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+