ಮೈಸೂರಿನಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಕಾರು ಚಾಲಕ ಕೊಲೆ
ಮೈಸೂರು, ಫೆಬ್ರವರಿ 09: ಮಾರಣಾಂತಿಕ ಹಲ್ಲೆಯಿಂದಾಗಿ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಇಲ್ಲಿನ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತ ಚಾಲಕ ಸುನಿಲ್ ಆಗಿದ್ದು, ಶುಕ್ರವಾರ ಇವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು.
ಹಣಕಾಸಿನ ವೈಷಮ್ಯದಿಂದ ಈ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮೈಸೂರಿನ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳ ಶ್ಯಾಂ ಅವರ ಕಾರು ಚಾಲಕ ಸುನಿಲ್ ಇಲ್ಲಿಗೆ ಸಮೀಪದ ಬೀಚನಳ್ಳಿ ನಿವಾಸಿ ಆಗಿದ್ದರು. ಸುನೀಲ್ ಬೇಕರಿಯಲ್ಲಿದ್ದ ವೇಳೆ ಈತನ ಹಳೆ ಸ್ನೇಹಿತ ರವಿ ಎಂಬಾತ ಮಚ್ಚಿನಿಂದ ಹಲ್ಲೆ ನಡೆಸಿದ್ದ. ಇದರಿಂದ ಸುನೀಲ್ ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಮೈಸೂರಿನ ಬೃಂದಾವನ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಸುನೀಲ್ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಹಣ ಕಾಸಿನ ವ್ಯವಹಾರದ ಕಲಹದ ಹಿನ್ನೆಲೆ ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಎಚ್.ಡಿ.ಕೋಟೆಯ ಬೀಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications