ಮೈಸೂರಿನಲ್ಲಿ ಜುಲೈ 25ರಂದು ಉದ್ಯೋಗ ಮೇಳ

ಮೈಸೂರು, ಜುಲೈ 20 : ಮೈಸೂರು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಜುಲೈ 25ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. ಯುವಕ-ಯುವತಿಯರು ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಜುಲೈ 25ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ವಿನಿಮಯ ಕಚೇರಿಯ ಆವರಣದಲ್ಲಿ ವಿಶ್ವ ಕೌಶಲ್ಯ ದಿನದ ಅಂಗವಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಂಗಳೂರು, ಮೈಸೂರಿನ ವಿವಿಧ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.

ಸುರಭಿ ಪ್ಲಾನ್‍ಟೆಕ್ ಮೈಸೂರು, ಬಿ.ಎಸ್.ಗೌಡ ಎಂಟರ್ ಪ್ರೈಸಸ್ ಮೈಸೂರು, ಯುರೇಕಾಫೋಬ್ರ್ಸ್ ಮೈಸೂರು, ತೇಜಸ್ವಿನಿ ಎಂಟರ್‌ ಪ್ರೈಸಸ್ ಮೈಸೂರು, ರೀಟೇಲ್ ವಕ್ರ್ಸ್‍ಇಂಡಿಯಾ ಪ್ರೈ. ಲಿ. ಬೆಂಗಳೂರು, ಹಿಂದುಜಾ ಗ್ಲೋಬಲ್ ಸಲ್ಯೂಷನ್ ಮೈಸೂರು, ರಾಜಾ ಬಯೋಟೆಕ್ ಮೈಸೂರು, ಗ್ರಾಸ್ ರೋಟ್ ಮೈಸೂರು, ಉಡ್ ಲ್ಯಾಂಡ್ ಮೈಸೂರು, ರಾಣೆ ಮದ್ರಾಸ್ ಪ್ರೈ. ಲಿ ಮೈಸೂರು ಇತರ ಕಂಪನಿಗಳು ಭಾಗವಹಿಸಲಿವೆ.

Job fair in Mysuru employment exchange office on July 25

ವಿದ್ಯಾರ್ಹತೆ : ಎಸ್‍ಎಸ್‍ಎಲ್‍ಸಿ ಉತ್ತೀರ್ಣ ಅಥವಾ ಅನುತ್ತೀರ್ಣ, ಪಿಯುಸಿ, ಜೆಓಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿಗಳಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು ಸ್ಥಳದಲ್ಲಿಯೇ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಸ್ವಂತ-ಪರಿಚಯ ಪತ್ರದೊಂದಿಗೆ ಹಾಜರಾಗಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಡಿ.ಎಂ.ರಾಣಿ ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಅವರನ್ನು ಸಂಪರ್ಕಿಸಬಹುದಾಗಿದೆ.

ವಿಳಾಸ : ಉದ್ಯೋಗ ವಿನಿಮಯ ಕಚೇರಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಚೇರಿಯ ಆವರಣ, ಎನ್.ಆರ್.ಮೊಹಲ್ಲಾ ಮೈಸೂರು-07.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+