ಮೈಸೂರಿನಲ್ಲಿ ಜೂ.17ಕ್ಕೆ ಉದ್ಯೋಗ ಮೇಳ
ಮೈಸೂರು, ಜೂ. 11 : ಮೈಸೂರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜೂನ್ 17 ರಂದು ಉದ್ಯೋಗ ಮೇಳವನ್ನು ಆಯೋಜಿಸಿದೆ. ಎಸ್ಎಸ್‌ಎಲ್‌ಸಿ, ಪಿಯುಸಿ, ಜೆಓಸಿ, ಪದವಿ ಪಡೆದ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಹುಣಸೂರು ರಸ್ತೆಯ ಬಿ.ಎಂ.ಆಸ್ಪತ್ರೆ ಮುಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಆವರಣದಲ್ಲಿ ಬೆಳಗ್ಗೆ 10 ಗಂಟೆಯಿಂದ ಉದ್ಯೋಗ ಮೇಳ ನಡೆಯಲಿದೆ. ಮೇಳದಲ್ಲಿ ಭಾಗವಹಿಸುವವರು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕ ಸಿ.ವಿಶ್ವನಾಥ ಭರಣಿ ಅವರನ್ನು 0821-2489972 ದೂರವಾಣಿ ಸಂಖ್ಯೆಯ ಮೂಲಕ ಸಂಪರ್ಕಿಸಬಹುದು.

ಎಸ್‍ಎಸ್‍ಎಲ್‍ಸಿ ಅನುತ್ತೀರ್ಣ ಅಥವಾ ಉತ್ತೀರ್ಣ, ಪಿಯುಸಿ, ಜೆಓಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿಗಳಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಸುಮಾರು 20 ಕಂಪನಿಗಳು ಮೇಳದಲ್ಲಿ ನೇಮಕಾತಿ ಮಾಡಿಕೊಳ್ಳಲಿವೆ. [ಇಂಧನ ಇಲಾಖೆಯಲ್ಲಿ 8 ಸಾವಿರ ಹುದ್ದೆ ಭರ್ತಿ, ವಿವರಗಳು]
ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ : ಕೆ.ಆರ್.ನಗರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಸಾಲಿಗ್ರಾಮ ಹಾಗೂ ಕೆ.ಆರ್.ನಗರ ಟೌನ್‍ನಲ್ಲಿ ನಡೆಸಲಾಗುತ್ತಿರುವ ಮೆಟ್ರಿಕ್ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. [ಜೂನ್ 14ರಂದು ಕೊಡಗಿನಲ್ಲಿ ಉದ್ಯೋಗ ಮೇಳ]
ಹಿಂದುಳಿದ ವರ್ಗ-1, 2ಎ, 2ಬಿ, 3ಎ, 3ಬಿ, ಎಸ್.ಸಿ. ಹಾಗೂ ಎಸ್.ಟಿ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಪ್ರವೇಶ ಪಡೆಯಲು ಮೆಟ್ರಿಕ್ ನಂತರ ಕೋರ್ಸುಗಳಾದ ಪಿ.ಯು.ಸಿ, ಪದವಿ, ಡಿಪ್ಲೋಮ ಮತ್ತು ವೃತ್ತಿಶಿಕ್ಷಣ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.
ಅರ್ಜಿಯನ್ನು ಸಂಬಂಧಿಸಿದ ವಿದ್ಯಾರ್ಥಿನಿಲಯ ಅಥವಾ ಕೆ.ಆರ್.ನಗರ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿಗಳಿಂದ ಪಡೆದು, ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿ ಜೂನ್ 30 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೆ.ಆರ್.ನಗರ ತಾಲೂಕು ಇವರನ್ನು ಸಂಪರ್ಕಿಸಬಹುದು.












Click it and Unblock the Notifications