ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ಸೇರುವುದು ಆತ್ಮಹತ್ಯೆ ಮಾಡಿಕೊಂಡಂತೆ: ಸಿಟಿ ರವಿ

|
Google Oneindia Kannada News

ಮೈಸೂರು, ಅಕ್ಟೋಬರ್ 16: ಕಾಂಗ್ರೆಸ್ ಸೇರುವುದು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಸಮ ಎಂದು ಸಚಿವ ಸಿಟಿ ರವಿ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, 'ಕಾಂಗ್ರೆಸ್ ಮುಳುಗುತ್ತಿರುವ ಹಡುಗು, ದೇಶದಲ್ಲಿ ಎರಡು ರಾಜ್ಯಗಳನ್ನು ಬಿಟ್ಟರೆ ಉಳಿದ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಅಸ್ಥಿತ್ವವೇ ಇಲ್ಲ' ಎಂದು ಹೇಳಿದರು.

"ವಿಶ್ವನಾಥ್ ಆರೋಪಕ್ಕೆ ಬೇಸತ್ತು ಸೆಪ್ಟೆಂಬರ್ 18ಕ್ಕೇ ರಾಜೀನಾಮೆ ನೀಡಿದ್ದೆ"

'ಕಾಂಗ್ರೆಸ್‌ ಪಕ್ಷಕ್ಕೆ ಸೇರುವುದೆಂದರೆ ಅದು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಂತೆ ಎಂದ ಸಿ.ಟಿ.ರವಿ, ಅನರ್ಹ ಕ್ಷೇತ್ರದ ಪರಾಜಿತ ಅಭ್ಯರ್ಥಿಗಳು ಯಾವ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ' ಎಂದು ಹೇಳಿದರು.

Joining Congress Party Is Like Commiting Suicide: CT Ravi

ಎಚ್.ವಿಶ್ವನಾಥ್‌ ಜೊತೆ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿಯ ಬಗ್ಗೆ ಮಾತನಾಡಿದ ಸಿ.ಟಿ.ರವಿ, 'ನಾವು ವಿಶ್ವನಾಥ್ ಅವರನ್ನು ಸಂಪರ್ಕ ಮಾಡಿರಲಿಲ್ಲ, ನಾನು ಅವರೊಂದಿಗೆ ಮಾತುಕತೆ ನಡೆಸಿದ್ದೇನೆ ಎಂಬುದು ಸುಳ್ಳು' ಎಂದರು.

'ಅನರ್ಹ ಶಾಸಕರಿಗೆ ಬಿಜೆಪಿಯಿಂದ ಉಪಚುನಾವಣೆ ಟಿಕೆಟ್ ನೀಡುವ ಬಗ್ಗೆ ನಿರ್ಧಾರ ಆಗಿಲ್ಲ, ಇದನ್ನು ಬಿಜೆಪಿಯ ಕೋರ್ ಕಮಿಟಿ ನಿರ್ಧಾರ ಮಾಡುತ್ತದೆ. ಸುಪ್ರೀಂಕೋರ್ಟ್ ತೀರ್ಪು ಬಂದ ನಂತರವಷ್ಟೆ ಇದು ತೀರ್ಮಾನವಾಗಲಿದೆ' ಎಂದರು.

ವಿಶ್ವನಾಥ್-ಸಾರಾ ಮಹೇಶ್ ಮಧ್ಯೆ ಮತ್ತೆ ಶುರುವಾಯ್ತ ಮಾತಿನ ಸಮರ?ವಿಶ್ವನಾಥ್-ಸಾರಾ ಮಹೇಶ್ ಮಧ್ಯೆ ಮತ್ತೆ ಶುರುವಾಯ್ತ ಮಾತಿನ ಸಮರ?

ಎಚ್.ವಿಶ್ವನಾಥ್ ಮತ್ತು ಸಾ.ರಾ.ಮಹೇಶ್ ನಡುವೆ ನಡೆಯುತ್ತಿರುವ ವಾಗ್ಯುದ್ಧದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, 'ಇಬ್ಬರು ಬಹು ವರ್ಷದಿಂದ ರಾಜಕಾರಣದಲ್ಲಿ ಇದ್ದಾರೆ, ಇಬ್ಬರೂ ಹೀಗೆ ಬಹಿರಂಗವಾಗಿ ವರ್ತಿಸುವುದು ಸರಿಯಲ್ಲ' ಎಂದರು.

English summary
Minister CT Ravi said joining congress party is like committing suicide. He also said party not yet decided to give by elections tickets to disqualified MLAs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X