• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ಕೊಟ್ಟ ಜುಬಿಲಿಯೆಂಟ್ ಸಂಸ್ಥೆ

|

ಮೈಸೂರು, ಏಪ್ರಿಲ್ 5: ಕೋವಿಡ್-19 ಬಿಕ್ಕಟ್ಟು ಪರಿಹಾರಕ್ಕೆ ಕರ್ನಾಟಕ ಸರ್ಕಾರ ಕೈಗೊಂಡಿರುವ ಆರೋಗ್ಯ ಮತ್ತು ಸುರಕ್ಷತಾ ಸೇವೆಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಜಾಗತಿಕ ಫಾರ್ಮಾಸಿಟಿಕಲ್ ಮತ್ತು ಜೀವ ವಿಜ್ಞಾನಗಳ ಕಂಪನಿಯಾಗಿರುವ ಜುಬಿಲಿಯೆಂಟ್ ಲೈಫ್ ಸೈನ್ಸ್ ಲಿಮಿಟೆಡ್ ಪ್ರಕಟಿಸಿದೆ. ನಂಜನಗೂಡಿನ ಈ ಸಂಸ್ಥೆಯ ಸಿಬ್ಬಂದಿಯೊಬ್ಬರಿಗೆ ವಿದೇಶಿ ವ್ಯಕ್ತಿ ಮೂಲಕ ಸೋಂಕು ಹರಡಿದ್ದು, ನಂತರ ಇಡೀ ಘಟಕವನ್ನು ಸ್ಥಗಿತಗೊಳಿಸಬೇಕಾಗಿ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.

''ನಮ್ಮ ಸಮುದಾಯ ಮತ್ತು ನೌಕರರ ಆರೋಗ್ಯ ಮತ್ತು ಸುರಕ್ಷತೆಗೆ ಜುಬಿಲಿಯೆಂಟ್ ಲೈಫ್ ಸೈನ್ಸ್ ಹೆಚ್ಚಿನ ಆದ್ಯತೆ ನೀಡುತ್ತಿದೆ. ಎಲ್ಲರೂ ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳುತ್ತಿದ್ದಾರೆಯೇ ಎಂಬುದನ್ನು ನಿರಂತರವಾಗಿ ಖಾತರಿಪಡಿಸಿಕೊಳ್ಳುತ್ತಿದೆ. ಇದಲ್ಲದೇ, ಸರ್ಕಾರ ನೀಡಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಗಮನಿಸುತ್ತಿದೆ.

ಕೊರೊನಾದಿಂದ ನಂಜನಗೂಡು ಕೈಗಾರಿಕಾ ಪ್ರದೇಶ ಈಗ ರೆಡ್ ಝೋನ್

ಈ ನಿಟ್ಟಿನಲ್ಲಿ ನಾವು ಜಿಲ್ಲಾ ಮತ್ತು ರಾಜ್ಯದ ಆಡಳಿತದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅವರೊಂದಿಗೆ ಸೇರಿ ಕಾರ್ಯಪ್ರವೃತ್ತರಾಗಿದ್ದೇವೆ. ಈ ಮೂಲಕ ಕೋವಿಡ್-19 ಬಿಕ್ಕಟ್ಟು ನಿವಾರಣೆಗೆ ಪ್ರಯತ್ನಿಸಲಾಗುತ್ತಿದೆ'' ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ.

ಆರೋಗ್ಯ ಇಲಾಖೆ ಸಿಬ್ಬಂದಿಗೆ ನೆರವು

ಆರೋಗ್ಯ ಇಲಾಖೆ ಸಿಬ್ಬಂದಿಗೆ ನೆರವು

ಕಂಪನಿಯು ಇದುವರೆಗೆ ಕರ್ನಾಟಕ ರಾಜ್ಯದಲ್ಲಿ ಆರೋಗ್ಯ ರಕ್ಷಣೆ ಮತ್ತು ಆಡಳಿತ ಸಿಬ್ಬಂದಿಗೆ ಹಾಗೂ ನೀತಿ ನಿರೂಪಕರಿಗೆ 7000 ಕ್ಕೂ ಅಧಿಕ ಮಾಸ್ಕ್ ಗಳೂ ಮತ್ತು ಸುಮಾರು 325 ಲೀಟರ್ ನಷ್ಟು ಸ್ಯಾನಿಟೈಸರ್ ಗಳನ್ನು ವಿತರಣೆ ಮಾಡಿದೆ. ಇದಲ್ಲದೇ, ದಿನಗೂಲಿ ನೌಕರರಿಗೆ ಆಹಾರ, ಮಾಸ್ಕ್ ಮತ್ತು ಸೋಪ್‍ಗಳನ್ನೂ ವಿತರಿಸುವ ಕಾರ್ಯದಲ್ಲಿ ತೊಡಗಿದೆ.

ಸಂಸ್ಥೆಯಿಂದ ಜಾಗೃತಿ ಅಭಿಯಾನ

ಸಂಸ್ಥೆಯಿಂದ ಜಾಗೃತಿ ಅಭಿಯಾನ

ಪ್ರಸ್ತುತ ತಲೆದೋರಿರುವ ಪರಿಸ್ಥಿತಿಯನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡುತ್ತಿರುವ ಕಂಪನಿಯು, ಈ ನಿಟ್ಟಿನಲ್ಲಿ ಹಲವಾರು ಸ್ಥಳಗಳಲ್ಲಿ ಜಾಗೃತಿ ಅಭಿಯಾನವನ್ನು ನಡೆಸಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಜನರಿಗೆ ತಿಳಿ ಹೇಳಲಾಗುತ್ತಿದೆ.

ನಂಜನಗೂಡಿನ ಘಟಕ ಸ್ಥಗಿತ

ನಂಜನಗೂಡಿನ ಘಟಕ ಸ್ಥಗಿತ

ಮುಂಜಾಗ್ರತಾ ಕ್ರಮವಾಗಿ ನಂಜನಗೂಡು ಘಟಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಮತ್ತು ಎಲ್ಲಾ ಸಿಬ್ಬಂದಿಗೆ ಸ್ವಯಂ ಕ್ವಾರಂಟೈನ್‍ನಲ್ಲಿಡಲಾಗಿದೆ. ಕಂಪನಿಯು ತನ್ನ ಎಲ್ಲಾ ಘಟಕಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತು ಕೆಲಸ ಮಾಡುವ ಸ್ಥಳದಲ್ಲಿ ಸುರಕ್ಷತೆ ಮತ್ತು ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಹೊರಗಿನ ಸಂಸ್ಥೆಯಿಂದ ಸೋಂಕು ನಿವಾರಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ.

ಕಂಪನಿಯ ಸಿಬ್ಬಂದಿಯ ಸುರಕ್ಷತೆಗೆ ಸೂಕ್ತ ಕ್ರಮ

ಕಂಪನಿಯ ಸಿಬ್ಬಂದಿಯ ಸುರಕ್ಷತೆಗೆ ಸೂಕ್ತ ಕ್ರಮ

ಇದರೊಂದಿಗೆ ಕಂಪನಿಯು ತನ್ನೆಲ್ಲಾ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರಿಗೆ 5000 ಕ್ಕೂ ಅಧಿಕ ಮಾಸ್ಕ್ ಗಳು ಮತ್ತು 200 ಲೀಟರ್ ನಷ್ಟು ಸ್ಯಾನಿಟೈಸರ್ ಗಳನ್ನು, ಅಗತ್ಯ ಆಹಾರ ಉತ್ಪನ್ನಗಳು ಮತ್ತು ವೈದ್ಯಕೀಯ ಸೌಲಭ್ಯವನ್ನು ಒದಗಿಸಿದೆ.ಜ್ಯುಬಿಲಿಯಂಟ್ ಕಾರ್ಖಾನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅಲ್ಲಿನ 9 ಮಂದಿ ಕಾರ್ಮಿಕರಿಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿತ್ತು. ಅಲ್ಲಿ ಒಂದು ಸಾವಿರಕ್ಕಿಂತಲೂ ಅಧಿಕ ಮಂದಿ ಕಾರ್ಮಿಕರಿದ್ದಾರೆ. ಹೀಗಾಗಿ ಅವರನ್ನು ಹೋಂ ಕ್ವಾರೆಂಟೈನ್ ಮಾಡಲಾಗಿತ್ತು.

English summary
Jubilant Life Sciences Limited hit by Covid19 has shutted down its Nanjangud plant. Now company has taken necessary measures and donated Rs 25 Lakh To Karnataka CM Relief Fund.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X