ಮರೀಗೌಡ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಜಡ್ಜ್
ಬೆಂಗಳೂರು, ಆಗಸ್ಟ್ 01 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕೆ.ಮರೀಗೌಡ ಅವರ ಜಾಮೀನು ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿಗಳು ಹಿಂದೆ ಸರಿದರು. ಮೈಸೂರು ಜಿಲ್ಲಾಧಿಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ ಎದುರಿಸುತ್ತಿರುವ ಮರೀಗೌಡ ಅವರು ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದಾರೆ.
ಸೋಮವಾರ ಬೆಳಗ್ಗೆ ಮರೀಗೌಡ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಿದ್ದ ನ್ಯಾಯಮೂರ್ತಿ ಶ್ರೀನಿವಾಸ ಗೌಡ ಅವರು ಅರ್ಜಿಯ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಿದ್ದರು. ಸಂಜೆ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.[ಮರೀಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ]
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಎದುರಿಸುತ್ತಿರುವ ಕೆ.ಮರೀಗೌಡ ಅವರು ಮೈಸೂರು ಜೆಎಂಎಫ್‌ಸಿ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಆದ್ದರಿಂದ, ಅವರು, ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.[ಮರಿಗೌಡನ ಬಂಧನಕ್ಕಾಗಿ ಮೈಸೂರಲ್ಲಿ ಹಾರಿತು ಗಾಳಿಪಟ!]
ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು ಎಂದು ಮರೀಗೌಡ ಅವರು ಇಂದು ಬೆಳಗ್ಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಲಾಗಿದೆ...

ಜಿಲ್ಲಾಧಿಕಾರಿಗಳು ದೂರು ನೀಡಿದ್ದಾರೆ
ಕಾಂಗ್ರೆಸ್ ಮುಖಂಡ ಮತ್ತು ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರೀಗೌಡ ಅವರು ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರು ನಜರಬಾದ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತಮ್ಮ ವಿರುದ್ಧ ದೂರು ದಾಖಲಾದ ದಿನದಿಂದ ಮರೀಗೌಡ ಅವರು ತಲೆಮರೆಸಿಕೊಂಡಿದ್ದಾರೆ. ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಶರಣಾದರೆ ಅವಕಾಶ ನೀಡಬಹುದು
ರಾಕೇಶ್ ಸಿದ್ದರಾಮಯ್ಯ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು ಎಂದು ಮರೀಗೌಡ ಅವರು ಇಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಶ್ರೀನಿವಾಸ ಗೌಡ ಅವರು ಪೊಲೀಸರ ಮುಂದೆ ಆರೋಪಿ ಶರಣಾದರೆ, ಪೊಲೀಸರ ಭದ್ರತೆಯಲ್ಲೇ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುತ್ತೇವೆ ಎಂದು ಹೇಳಿದ್ದರು. ಆದರೆ, ಮರೀಗೌಡ ಪರ ವಕೀಲರು ಶರಣಾಗುವುದಕ್ಕೆ ನಿರಾಕರಿಸಿದ್ದರು.

ಆಗಸ್ಟ್ 3ಕ್ಕೆ ವಿಚಾರಣೆ ಮುಂದೂಡಿಕೆ
ನ್ಯಾಯಮೂರ್ತಿ ಶ್ರೀನಿವಾಸ ಗೌಡ ಅವರು ಮರೀಗೌಡ ಅವರ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಿದ್ದರು. ಸಂಜೆ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಶ್ರೀನಿವಾಸ ಗೌಡ ಅವರು ಹಿಂದೆ ಸರಿದಿದ್ದಾರೆ.

ಕಾಂಗ್ರೆಸ್‌ನಿಂದ ಅಮಾನತು
ಕೆ.ಮರೀಗೌಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗುತ್ತದೆ. ಕೆಪಿಸಿಸಿ ಅಧ್ಯಕ್ಷ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಕೆ.ಮರೀಗೌಡ ಅವರನ್ನು ಪಕ್ಷದಿಂದ ಅಮಾನತು ಮಾಡಲು ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿದೆ' ಎಂದು ಅವರು ತಿಳಿಸಿದ್ದಾರೆ.

ಕುಮಾರಸ್ವಾಮಿ ಟೀಕೆ
'ಮುಖ್ಯಮಂತ್ರಿ ಸಿದ್ದರಾಮಯ್ಯ ಬಯಸಿದರೆ 24 ಗಂಟೆಯಲ್ಲಿ ತಮ್ಮ ಆಪ್ತ ಕೆ.ಮರೀಗೌಡನನ್ನು ಬಂಧಿಸಬಹುದು. ಆದರೆ, ಮೈಸೂರು ಪೊಲೀಸರ ಮೇಲೆ ಸಿದ್ದರಾಮಯ್ಯ ಪ್ರಭಾವವಿದೆ. ಆದ್ದರಿಂದ ಅದು ಸಾಧ್ಯವಾಗುತ್ತಿಲ್ಲ. ಮರಿಗೌಡ ವಿರುದ್ಧ ಪಿಸಿಆರ್ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿಲ್ಲ. ಡಿಸಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿದ ಪ್ರಕರಣದ ತನಿಖೆಗೆ ಖಡಕ್ ಅಧಿಕಾರಿಯ ಅಗತ್ಯವಿದೆ' ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications