Santro Ravi : ಸ್ಯಾಂಟ್ರೊ ರವಿಯನ್ನು ಪೊಲೀಸರ ವಶಕ್ಕೆ ನೀಡದ ಕೋರ್ಟ್

ಮೈಸೂರು, ಜನವರಿ 16; ಸ್ಯಾಂಟ್ರೊ ರವಿಯನ್ನು ಪೊಲೀಸ್ ವಶಕ್ಕೆ ನೀಡಲು ನಿರಾಕರಿಸಿರುವ ಕೋರ್ಟ್ ಜನವರಿ 25ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಸೋಮವಾರ ಮೈಸೂರಿನ ವಿಜಯನಗರ ಪೊಲೀಸರು ಮೈಸೂರು ಜೈಲಿನಿಂದ ಸ್ಯಾಂಟ್ರೊ ರವಿ, ಪ್ರೇಮ್‌ಜಿ ಮತ್ತು ಶ್ರುತೇಶ್‌ರನ್ನು ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

Judicial Custody For Santro Ravi Till January 25

ನ್ಯಾಯಾಲಯ ಸ್ಯಾಂಟ್ರೊ ರವಿ ಮತ್ತು ಇತರ ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಲು ನಿರಾಕರಿಸಿತು. ಜನವರಿ 25ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತು.

ಸಿಐಡಿಗೆ ವಹಿಸಲು ಮನವಿ; ಕೋರ್ಟ್‌ನಲ್ಲಿ ಸರ್ಕಾರಿ ವಕೀಲರು ಪ್ರಕರಣವನ್ನು ಸಿಐಡಿಗೆ ವಹಿಸಲು ಮನವಿ ಮಾಡಿದರು. ಆಗ ಕೋರ್ಟ್ ಈ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ. ಸಿಐಡಿಗೆ ವಹಿಸುವುದು ಸರ್ಕಾರದ ಕೆಲಸ, ಸೂಕ್ತ ದಾಖಲಾತಿಗಳ ಜೊತೆ ಅರ್ಜಿ ಸಲ್ಲಿಕೆ ಮಾಡಿ ಎಂದು ಸೂಚನೆ ನೀಡಿತು.

ಗುಜರಾತ್‌ನಲ್ಲಿ ಬಂಧಿಸಲಾದ ಸ್ಯಾಂಟ್ರೊ ರವಿ ಮತ್ತು ಇತರ ಆರೋಪಿಗಳನ್ನು ಶನಿವಾರ ರಾತ್ರಿ ವಾಲ್ಮೀಕಿ ರಸ್ತೆಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಪೊಲೀಸರು ಹಾಜರುಪಡಿಸಿದ್ದರು. ಆಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದರು.

ಸೋಮವಾರ ಕೋರ್ಟ್‌ಗೆ ಪುನಃ ಎಲ್ಲಾ ಆರೋಪಿಗಳನ್ನು ಹಾಜರುಪಡಿಸಲಾಯಿತು. ಆದರೆ ಪೊಲೀಸರ ವಶಕ್ಕೆ ನೀಡಿದ ಕೋರ್ಟ್ ಜನವರಿ 25ರ ತನಕ ನ್ಯಾಯಾಂಗ ಬಂಧನಕ್ಕೆ ನೀಡಿತು.

ಮೈಸೂರಿನ ವಿಜಯನಗರ ಠಾಣೆಯಲ್ಲಿ ತಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಸ್ಯಾಂಟ್ರೊ ರವಿ ಪರಾರಿಯಾಗಿದ್ದರು. 11 ದಿನಗಳ ಬಳಿಕ ಶುಕ್ರವಾರ ಗುಜರಾತ್‌ನಲ್ಲಿ ಸ್ಯಾಂಟ್ರೊ ರವಿ ಬಂಧಿಸಲಾಗಿತ್ತು. ಬಳಿಕ ಮೈಸೂರಿಗೆ ಕರೆತರಲಾಗಿತ್ತು.

ಸ್ಯಾಂಟ್ರೊ ರವಿ ಪ್ರಕರಣ ರಾಜ್ಯ ರಾಜಕೀಯಲ್ಲಿ ಸಂಚಲನ ಮೂಡಿಸಿದೆ. ಪೊಲೀಸ್ ಇಲಾಖೆಯ ವರ್ಗಾವಣೆಯಲ್ಲಿ ಆತ ತೊಡಗಿದ್ದ. ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದ. ಪ್ರತಿಪಕ್ಷಗಳು ಇದೇ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+