ಜೋರು ಮಳೆಗೆ ತುಂಬಿದ ಕಬಿನಿ ಜಲಾಶಯ: ಸಂತಸಗೊಂಡ ರೈತರು
Recommended Video

ಮೈಸೂರು, ಜೂನ್.14 : ಕೇರಳದ ವೈನಾಡಿನಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯ ಬಹುತೇಕ ಭರ್ತಿಯಾಗಿದೆ. ಜಲಾಶಯಕ್ಕೆ 22 ಸಾವಿರ ಕ್ಯೂಸೆಕ್ಸ್ ಒಳಹರಿವು ಹೆಚ್ಚಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ಸಂಜೆ ವೇಳೆಗೆ 10 ಸಾವಿರ ಕ್ಯೂಸೆಕ್ಸ್ ಗೂ ಹೆಚ್ಚು ನೀರು ಬಿಡಲು ನಿರ್ಧರಿಸಲಾಗಿದ್ದು, ಕಬಿನಿ ತುಂಬಿರುವುದರಿಂದ ರೈತರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ನಿನ್ನೆ ಸುರಿದ ಮಳೆಗೆ ಜಲಾಶಯದಲ್ಲಿ ನೀರಿನಮಟ್ಟ ಒಂದೇ ದಿನಕ್ಕೆ 5 ಅಡಿ ಏರಿಕೆಯಾಗಿದ್ದು, ಸದ್ಯ ನೀರಿನ ಮಟ್ಟ 77 ಅಡಿ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 84 ಅಡಿ ಇದೆ.

ಕರ್ನಾಟಕ ಕರಾವಳಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. ನಾಲ್ಕೈದು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಬರಡಾಗಿದ್ದ ರಾಜ್ಯಕ್ಕೆ ಈ ವರ್ಷ ಮುಂಗಾರು ಆರಂಭದಲ್ಲೇ ವರುಣನ ಕೃಪೆಯಾಗಿದ್ದು, ನಿರಂತರ ಮಳೆಯಿಂದ ರಾಜ್ಯದ ಜಲಾಶಯಗಳು ಕಳೆಗಟ್ಟತೊಡಗಿವೆ.
ಕಾವೇರಿ ಹಾಗೂ ಕಬಿನಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆ.ಆರ್.ಸಾಗರ ಸೇರಿ ಕಾವೇರಿ ಕಣಿವೆ ಜಲಾಶಯಗಳ ನೀರಿನ ಮಟ್ಟ ಗಣನೀಯವಾಗಿ ಏರುತ್ತಿದೆ.











Click it and Unblock the Notifications