ಮೈಸೂರಿನಲ್ಲಿ ನೇಣಿಗೆ ಶರಣಾದ ಕಲಬುರ್ಗಿಯ ಇನ್ಫೋಸಿಸ್ ಟ್ರೇನಿ

ಮೈಸೂರು, ಜುಲೈ 6: ಕಲಬುರ್ಗಿ ಮೂಲದ ಯುವತಿಯೋರ್ವಳು ನೇಣಿಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದ್ದು, ಘಟನೆ ಯಾವಾಗ ನಡೆದಿದ್ದು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇನ್ಫೋಸಿಸ್‌ನಲ್ಲಿ ತರಬೇತಿ ಪಡೆಯುತ್ತಿದ್ದ ಮೀನಾಕ್ಷಿ (21) ನೇಣಿಗೆ ಶರಣಾದ ಯುವತಿ.

ಈಕೆ ಮೈಸೂರು ಇನ್ಫೋಸಿಸ್‌ನಲ್ಲಿ ಟ್ರೈನಿಯಾಗಿ ಕೆಲಸ ನಿರ್ವಹಿಸುತ್ತಿದ್ದಳು. ಇನ್ಫೋಸಿಸ್ ಪಕ್ಕದ ಹೆಬ್ಬಾಳದ ಮನೆಯೊಂದರಲ್ಲಿ ಒಬ್ಬಳೇ ವಾಸವಿದ್ದ ಈಕೆ, ಕಳೆದ ಮೂರ್ನಾಲ್ಕು ದಿನಗಳಿಂದ ಕೆಲಸಕ್ಕೆ ಹೋಗಿರಲಿಲ್ಲ. ಆಕೆಯ ಸ್ನೇಹಿತರು ಕರೆ ಮಾಡಿದ್ದರೂ ಸ್ವೀಕರಿಸುತ್ತಿರಲಿಲ್ಲ.

Kalaburgi girl who was a trainee in Mysuru Infosys commits suicide

ಬಾಡಿಗೆ ಪಡೆದಿದ್ದ ಮನೆಯಲ್ಲಿ ಕೊಳೆತ ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ಅಕ್ಕಪಕ್ಕದವರು ಹೆಬ್ಬಾಳ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ಒಡೆದು ನೋಡಿದಾಗ ಯುವತಿ ನೇಣಿಗೆ ಶರಣಾಗಿರುವುದು ಕಂಡು ಬಂದಿದ್ದು, ಶವ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿತ್ತು ಎಂದು ತಿಳಿದುಬಂದಿದೆ.

ಯುವತಿಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಹೆಬ್ಬಾಳ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+