ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಿಪಿ ರಾಜರತ್ನಂ ಪ್ರಶಸ್ತಿಗೆ ಸಯ್ಯದ್ ಇಸಾಕ್ ಆಯ್ಕೆ

|
Google Oneindia Kannada News

ಮೈಸೂರು, ಜೂನ್ 30: ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷ ಡಾ. ನಂದೀಶ್ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಇತ್ತೀಚೆಗಷ್ಟೇ ಸಯ್ಯದ್ ಇಸಾಕ್ ಅವರ ಗ್ರಂಥಾಲಯ ಬೆಂಕಿಗೆ ಆಹುತಿಯಾಗಿತ್ತು. ರಾಜೀವ್‌ನಗರದ 2ನೇ ಹಂತದಲ್ಲಿರುವ ಸಯ್ಯದ್ ಇಸಾಕ್ ಅವರಿಗೆ ಸೇರಿದ ಪುಸ್ತಕಗಳಿಗೆ ಬೆಂಕಿ ಹಚ್ಚಿ ನಾಶಪಡಿಸಿರುವುದು.

ಮೈಸೂರು: ಕನ್ನಡದ ಮೇಲಿನ ಪ್ರೀತಿಯಿಂದ ಸಯ್ಯದ್ ಇಸಾಕ್ ಸ್ಥಾಪಿಸಿದ್ದ ಗ್ರಂಥಾಲಯಕ್ಕೆ ಬೆಂಕಿ ಇಟ್ಟ ಹೃದಯಹೀನರುಮೈಸೂರು: ಕನ್ನಡದ ಮೇಲಿನ ಪ್ರೀತಿಯಿಂದ ಸಯ್ಯದ್ ಇಸಾಕ್ ಸ್ಥಾಪಿಸಿದ್ದ ಗ್ರಂಥಾಲಯಕ್ಕೆ ಬೆಂಕಿ ಇಟ್ಟ ಹೃದಯಹೀನರು

ಸಯ್ಯದ್ ಅವರು ಕನ್ನಡದ ಮೇಲಿನ ಪ್ರೀತಿಯಿಂದಾಗಿ ಕಳೆದ ಹಲವು ವರ್ಷಗಳಿಂದ ಮೈಸೂರಿನ ರಾಜೀವ್‌ನಗರದಲ್ಲಿ ʻಕನ್ನಡ ಸಾರ್ವಜನಿಕ ಗ್ರಂಥಾಲಯʼ ನಡೆಸಿಕೊಂಡು ಬರುತ್ತಿದ್ದರು. ಅದನ್ನು ಸಹಿಸದ ಕೆಲವರು ಅದೆಷ್ಟೋ ಸಂದರ್ಭದಲ್ಲಿ ತಕರಾರು ತೆಗೆಯುತ್ತಿದ್ದರು. ಈಗ ಏಕಾಏಕಿ ಗ್ರಂಥಾಲಯಕ್ಕೆ ಬೆಂಕಿ ಇಟ್ಟು ಅಂದಾಜು 11 ಸಾವಿರ ಪುಸ್ತಕಗಳನ್ನು ನಾಶಪಡಿಸಿದ್ದರು. ಆ ಗ್ರಂಥಾಲಯವನ್ನು ಇಸಾಕ್ ಅವರು 2011ರಲ್ಲಿ ಸ್ಥಾಪಿಸಿದ್ದರು.

Kannada Lover Mysurus Syed Esakh Chosen for Dr. GP Rajarathnam Sahitya Paricharaka Award

ಅವರಿಗಿದ್ದ ಕನ್ನಡದ ಮೇಲಿನ ಪ್ರೋತಿಯಿಂದಾಗಿ 11 ಸಾವಿರ ಪುಸ್ತಕಗಳಿರುವ ಗ್ರಂಥಾಲಯ ಸ್ಥಾಪಿಸಿ ಹೆಸರುವಾಸಿಯಾಗಿದ್ದರು. ಇದೀಗ ಇವರ ಹೆಸರನ್ನು ಜಿಪಿ ರಾಜರತ್ನಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತದೆ. ಈ ಪ್ರಶಸ್ತಿಯು 1 ಲಕ್ಷ ನಗದು ಬಹುಮಾನವನ್ನು ಒಳಗೊಂಡಿರಲಿದೆ.

English summary
Kannada Lover Mysuru's Syed Esakh Chosen for Dr. Rajarathnam Sahitya Paricharaka Award.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X