ಜೂನ್ ನಲ್ಲಿ ಅರಮನೆ ನಗರಿ ಮೈಸೂರಿನಲ್ಲಿ ಸಾಹಿತ್ಯ ಜಾತ್ರೆ
83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜೂನ್ ತಿಂಗಳಲ್ಲಿ ಮೈಸೂರಿನಲ್ಲಿ ನಡೆಯಲಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಮಾಹಿತಿ ನೀಡಿದರು.
ಮೈಸೂರು, ಏಪ್ರಿಲ್ 21: 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜೂನ್ ತಿಂಗಳಲ್ಲಿ ಮೈಸೂರಿನಲ್ಲಿ ನಡೆಯಲಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಮಾಹಿತಿ ನೀಡಿದರು.
ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿ ರಂದೀಪ್, ಕಳೆದ ಬಾರಿ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರಾಯಚೂರಿನಲ್ಲಿ ನಡೆದಿತ್ತು. ಈ ಬಾರಿ 83ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ನೇತೃತ್ವವನ್ನ ಸಾಂಸ್ಕೃತಿಕ ನಗರಿ ಮೈಸೂರು ವಹಿಸಲಿದೆ.ಇದಕ್ಕಾಗಿ ಜಾಗವನ್ನ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.[ಜೂನ್ ಆರಂಭದಲ್ಲಿ ಮೈಸೂರಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ?!]

ಈ ಸಂಬಂಧ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ ಅವರ ಜೊತೆ ಚರ್ಚಿಸಿ ದಿನಾಂಕ ನಿಗದಿಪಡಿಸಲಾಗುತ್ತದೆ ಎಂದು ಡಿ.ರಂದೀಪ್ ಅವರು ತಿಳಿಸಿದರು.












Click it and Unblock the Notifications