• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜೂನ್ ಆರಂಭದಲ್ಲಿ ಮೈಸೂರಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ?!

By ಯಶಸ್ವಿನಿ ಎಂ.ಕೆ
|

ಮೈಸೂರು, ಮಾರ್ಚ್ 22 : ಉಪಚುನಾವಣೆಯ ಕಾವು ಒಂದೆಡೆಯಾದರೆ, ಕನ್ನಡ ಸಾಹಿತ್ಯ ಸಮ್ಮೇಳನದ ತಂಪು ಇನ್ನೊಂದೆಡೆ. ಹೌದು, ಸಾಂಸ್ಕೃತಿಕ ನಗರಿ ಮೈಸೂರು 83ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರದಿಂದ ಸಜ್ಜಾಗುತ್ತಿದೆ.

ಇದೇ ಜೂನ್ ಮೊದಲನೆಯ ವಾರದಲ್ಲಿ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕಸಾಪ ರಾಜ್ಯಾಧ್ಯಕ್ಷ ಡಾ.ಮನು ಬಳಿಗಾರ್ ಅವರು ಇತ್ತೀಚೆಗೆ ಮೈಸೂರಿಗೆ ಆಗಮಿಸಿದ್ದ ವೇಳೆ ಕನ್ನಡ ಸಾಹಿತ್ಯ ಸಮ್ಮೇಳನ ಸಂಬಂಧ ಜಿಲ್ಲಾ ಕಸಾಪ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಸಲಹೆ ಸೂಚನೆಗಳನ್ನು ಪಡೆದ ನಂತರ ಜೂನ್ ಮೊದಲನೆಯ ವಾರದಲ್ಲಿ ನಡೆಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.[ರಾಯಚೂರು ಕನ್ನಡ ಸಾಹಿತ್ಯ ಸಮ್ಮೇಳನ : ಬರಗೂರು ಭಾಷಣದ ಮುಖ್ಯಾಂಶಗಳು]

ಮುಖ್ಯಮಂತಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರೊಂದಿಗೆ ಜೂನ್ ಮೊದಲ ವಾರದಲ್ಲಿ ಸಮ್ಮೇಳನ ನಡೆಸುವ ಬಗ್ಗೆ ಚರ್ಚೆ ಮಾಡುವ ಕುರಿತಾಗಿ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಜೂನ್ ಎರಡನೆಯ ವಾರದಲ್ಲಿ ಮಳೆಗಾಲ ಆರಂಭವಾಗಲಿರುವುದರಿಂದ ಹಾಗೂ ಶಾಲಾ/ ಕಾಲೇಜುಗಳು ಸಹ ಮೊದಲನೆಯ ವಾರವೇ ಪ್ರಾರಂಭವಾಗಲಿರುವುದರಿಂದ ಸಮ್ಮೇಳನಕ್ಕೆ ಆ ಸಮಯವೇ ಸೂಕ್ತ ಎಂದು ತೀರ್ಮಾನಿಸಲಾಗಿದೆ. ಕಳೆದ ಬಾರಿಯ ಸಾಹಿತ್ಯ ಸಮ್ಮೇಳನ ಡಿಸೆಂಬರ್ ತಿಂಗಳಿನಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ರಾಯಚೂರಿನಲ್ಲಿ ನಡೆದಿತ್ತು.[ರಾಯಚೂರಿನಲ್ಲಿ ಕನ್ನಡ ಹಬ್ಬ ಸಹೃದಯರಿಗೇನೇನಿದೆ?]

ವಸ್ತು ಪ್ರದರ್ಶನ ಆವರಣದಲ್ಲಿ ಸಮ್ಮೇಳನ ?

83 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಸರಾ ವಸ್ತು ಪ್ರದರ್ಶನ, ಆವರಣ ಅಥವಾ ಮಹಾರಾಜ ಕಾಲೇಜಿನ ಗ್ರೌಂಡ್ ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಇನ್ನು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರಮನೆ ಮುಂಭಾಗ ಹಾಗೂ ಪರ್ಯಾಯ ಗೋಷ್ಠಿಗಳನ್ನು ಜಗನ್ಮೋಹನ ಅರಮನೆ ಹಾಗೂ ಪುರಭವನ ವೇದಿಕೆಗಳಲ್ಲಿ ಆಯೋಜಿಸಲು ಮೊದಲ ಸುತ್ತಿನ ಮಾತುಕತೆ ನಡೆಸಲಾಗಿದೆ ಎನ್ನಲಾಗಿದೆ.

ಸ್ಥಳೀಯರಿಗೆ ಹೆಚ್ಚಿನ ಆದ್ಯತೆ

ಇನ್ನು ಸಾಹಿತ್ಯಾಸಕ್ತಿಯುಳ್ಳ ಯುವಕರನ್ನು ನೇಮಿಸಿ ಅವರನ್ನು ಸ್ವಯಂ ಸೇವಕರನ್ನಾಗಿಸುವತ್ತ ಹೆಚ್ಚು ಒತ್ತು ನೀಡಲಾಗುತ್ತಿದೆ. ಅಲ್ಲದೇ ಮೈಸೂರಿನ ಸುತ್ತಮುತ್ತಲ ಜಿಲ್ಲೆಗಳಾದ ಮಂಡ್ಯ, ಚಾಮರಾಜಗನಗರ, ಹಾಸನದಲ್ಲಿ ಅಕ್ಷರ ರಥ ಸಂಚರಿಸುವಂತೆ ಮಾಡಬೇಕೆಂದು ಸಹ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.[82ನೇ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬರಗೂರು ಆಯ್ಕೆ]

ಜಿಲ್ಲಾಧಿಕಾರಿಗಳಿಗೆ ಆಹ್ವಾನ:

ಇದೇ ವೇಳೆ 83ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡಿ ಸಮ್ಮೇಳನದ ಯಶಸ್ಸಿಗೆ ಬೆಂಬಲವಾಗಿ ನಿಲ್ಲುವಂತೆ ಜಿಲ್ಲಾ ಕಸಪಾ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ನೇತೃತ್ವದಲ್ಲಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಿ. ರಂದೀಪ್ರಿಗೆ ಸಾಂಪ್ರದಾಯಿಕವಾಗಿ ಗೌರವ ಸಮರ್ಪಿಸಿ ಮನವಿ ಮಾಡಿದರು. ಒಟ್ಟಾರೆ ಈ ಬಾರಿ ಅಕ್ಷರ ಜಾತ್ರೆಯ ಸೊಗಡು ಮೈಸೂರಿನಲ್ಲಿ ಹೇಗೆ ಕಳೆಗಟ್ಟಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
83rd Kannada Sahitya Sammelan will be held in Mysuru in June first week Manu Baligar, president of Kannada Sahitya Parishath told in Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more