Get Updates
Get notified of breaking news, exclusive insights, and must-see stories!

ಗುಟ್ಟಾಗಿ ಉಳಿದ ಸಿದ್ದರಾಮಯ್ಯ ಕ್ಷೇತ್ರ ಆಯ್ಕೆ: ಮತ್ತೆ ವರುಣಾಗೆ ಮರಳುತ್ತಾರಾ ಮಾಜಿ ಸಿಎಂ?

ಮೈಸೂರು, ಡಿಸೆಂಬರ್‌ 20: ಮುಂದಿನ 2023ರಲ್ಲಿ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ರಂಗೇರುತ್ತಿದೆ. ಸದ್ಯ ಜೆಡಿಎಸ್ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅಂತಿಮ ಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ಎಚ್ಚೆತ್ತುಕೊಳ್ಳುವ ಸಾಧ್ಯತೆಯಿದ್ದು, ಮುಂದಿನ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದುಕೊಳ್ಳಲಿದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಕೆಲವು ಕ್ಷೇತ್ರಗಳು ಅಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ನಡೆಯುವ ಪೈಪೋಟಿಗಳಿಂದ ರಾಜ್ಯದ ಜನರ ಗಮನಸೆಳೆಯಲಿದೆ. ಬಹುತೇಕ ಕ್ಷೇತ್ರಗಳು ಕೆಲವು ಹಿರಿಯ ನಾಯಕರ ಪ್ರಾಬಲ್ಯದ ಕ್ಷೇತ್ರಗಳಾಗಿದ್ದು, ಅಲ್ಲಿ ಸುಲಭವಾಗಿ ಆ ನಾಯಕರು ಗೆಲ್ಲುತ್ತಾ ಬರುತ್ತಿದ್ದಾರೆ. ಅಂತಹ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಪ್ರತಿಸ್ಪರ್ಧಿಗಳಿಗೆ ಸುಲಭವಲ್ಲ. ಆದರೆ ಗೆದ್ದು ಬಂದಾಗ ಅದೇ ಹೆಚ್ಚು ಸುದ್ದಿ ಮಾಡುತ್ತದೆ.

ಈ ಬಾರಿ ಎಲ್ಲರ ಕುತೂಹಲ ಸಿದ್ದರಾಮಯ್ಯ ಅವರತ್ತ ನೆಟ್ಟಿದೆ. ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವುದೇ ಗೌಪ್ಯವಾಗಿರುವ ಕಾರಣದಿಂದ ಸದ್ಯಕ್ಕೆ ಅಂತೆ, ಕಂತೆಗಳಿಗೆ ಹೆಚ್ಚಿನ ಆದ್ಯತೆ ಸಿಕ್ಕಿದೆ. ಅವರನ್ನು ಹಣಿಯಲು ವಿರೋಧಪಕ್ಷಗಳು ಮಾತ್ರವಲ್ಲದೆ, ಹಿತಶತ್ರುಗಳು ಕೂಡ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ.

ಬಿಜೆಪಿ, ಜೆಡಿಎಸ್‌ನಲ್ಲಿಲ್ಲದ ಸಿಎಂ ಗೊಂದಲ

ಬಿಜೆಪಿ, ಜೆಡಿಎಸ್‌ನಲ್ಲಿಲ್ಲದ ಸಿಎಂ ಗೊಂದಲ

ಕಾಂಗ್ರೆಸ್ ಅಡಕತ್ತರಿಯಲ್ಲಿ ಸಿಕ್ಕಿದೆ. ಮೇಲ್ನೋಟಕ್ಕೆ ನಾವು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ನಾಯಕರು ಹೇಳುತ್ತಿದ್ದರೂ ಸಿಎಂ ಅಭ್ಯರ್ಥಿ ವಿಚಾರದಲ್ಲಿ ಒಮ್ಮತ ಕಾಣಿಸುತ್ತಿಲ್ಲ. ಹೀಗಾಗಿ ಪಕ್ಷದೊಳಗೆ ಕೆಲವು ನಾಯಕರು ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂದರೆ ಇನ್ನು ಕೆಲವರು ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎನ್ನುತ್ತಿದ್ದಾರೆ. ಸದ್ಯಕ್ಕೆ ಇಬ್ಬರ ನಡುವೆ ಯಾರು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿದೆ.

ಈಗಾಗಲೇ ಜೆಡಿಎಸ್ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಿದೆ. ಜೊತೆಗೆ ಮುಂದೆ ಬಹುಮತ ಪಡೆದರೆ ಕುಮಾರಸ್ವಾಮಿಯೇ ಸಿಎಂ ಎಂದು ‍‍ಘೋಷಣೆ ಮಾಡಲಾಗಿದೆ. ಬಿಜೆಪಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿಯೇ ಚುನಾವಣೆ ನಡೆಸಲಿದ್ದು, ಅವರೇ ಮುಂದಿನ ಸಿಎಂ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಕಾಂಗ್ರೆಸ್‌ಗೆ ಮಾತ್ರ ಈ ವಿಚಾರದಲ್ಲಿ ಧೈರ್ಯವಾಗಿ ಹೇಳುವುದು ಕಷ್ಟವಾಗಿದೆ. ಒಂದು ವೇಳೆ ಚುನಾವಣೆಗೆ ಮುನ್ನ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡಿದರೆ ಒಳಿತು ಕೆಡಕು ಎರಡನ್ನು ಎದುರಿಸಬೇಕಾಗುತ್ತದೆ ಎಂಬ ಭಯವೂ ಕಾಡುತ್ತಿದೆ. ಹೀಗಾಗಿ ಹೈಕಮಾಂಡ್ ತೇಪೆ ಹಚ್ಚುವ ಕೆಲಸಕ್ಕೆ ಮುಂದಾಗಿದೆ.

ವರುಣಾದತ್ತ ಮುಖ ಮಾಡಬಹುದುದಾ ಮಾಜಿ ಸಿಎಂ

ವರುಣಾದತ್ತ ಮುಖ ಮಾಡಬಹುದುದಾ ಮಾಜಿ ಸಿಎಂ

ಕಾಂಗ್ರೆಸ್ ಪಾಲಿಗೆ ದಕ್ಷಿಣ ಭಾರತದಲ್ಲಿ ಗೆಲ್ಲಬಹುದಾದ ರಾಜ್ಯವೊಂದಿದ್ದರೆ ಅದು ಕರ್ನಾಟಕ ಮಾತ್ರ. ಇದು ಬಿಜೆಪಿಗೂ ಅನ್ವಯಿಸುತ್ತದೆ. ಹೀಗಾಗಿ ಎರಡು ರಾಷ್ಟ್ರೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿ ಕರ್ನಾಟಕದ ವಿಧಾನಸಭೆ ಚುನಾವಣೆ ಮಾರ್ಪಟ್ಟಿದೆ. ಈ ನಡುವೆ ಜೆಡಿಎಸ್ ಎಷ್ಟು ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತಾ ಹೋಗುತ್ತದೆಯೋ ಅಷ್ಟೇ ಸಂಕಷ್ಟವನ್ನು ರಾಷ್ಟ್ರೀಯ ಪಕ್ಷಗಳು ಎದುರಿಸಬೇಕಾದ ಪರಿಸ್ಥಿತಿ ಬಂದರೂ ಅಚ್ಚರಿಯಿಲ್ಲ.


ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ರೇಸ್‌ನಲ್ಲಿರುವ ಡಿ.ಕೆ.ಶಿವಕುಮಾರ್ ಅವರು ಕನಕಪುರದಲ್ಲಿ ಸುಲಭವಾಗಿ ಗೆಲುವು ಸಾಧಿಸುತ್ತಾರೆ. ಅದು ಅವರ ಭದ್ರಕೋಟೆ ಎಂದರೆ ತಪ್ಪಾಗಲಾರದು. ಆದರೆ ಸಿಎಂ ರೇಸ್‌ನ ಮತ್ತೊಬ್ಬ ಅಭ್ಯರ್ಥಿ ಸಿದ್ದರಾಮಯ್ಯ ಅವರಿಗೆ ಸೂಕ್ತ ಕ್ಷೇತ್ರವೇ ಇಲ್ಲದಾಗಿದೆ. ರಾಜ್ಯದ ಹಲವು ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ಆಹ್ವಾನ ಬರುತ್ತಿದ್ದರೂ ಗೆಲ್ಲಲೇ ಬೇಕಾದ ಅನಿವಾರ್ಯತೆ ಅವರಿಗಿರುವುದರಿಂದ ಗೆಲುವಿನ ಕ್ಷೇತ್ರದ ಹುಡುಕಾಟದಲ್ಲಿದ್ದಾರೆ.

ವರುಣಾ ಕ್ಷೇತ್ರ ರಚನೆಯಾದ ಬಳಿಕ 2008ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಸಿದ್ದರಾಮಯ್ಯ ಆಯ್ಕೆಯಾಗಿದ್ದರು. ಬಳಿಕ ಪುತ್ರನ ರಾಜಕೀಯ ಭವಿಷ್ಯ ರೂಪಿಸುವ ಸಲುವಾಗಿ 2013ರಲ್ಲಿ ಗೆದ್ದು ಸಿಎಂ ಆದರು 2018ರಲ್ಲಿ ಕ್ಷೇತ್ರ ತ್ಯಾಗ ಮಾಡಿ ತಮ್ಮ ರಾಜಕೀಯ ಜೀವನ ರೂಪಿಸಿದ ಚಾಮುಂಡೇಶ್ವರಿ ಹಾಗೂ ದೂರದ ಬಾಗಲಕೋಟೆಯಲ್ಲಿ ಸ್ಪರ್ಧಿಸಿದರು. ಚಾಮುಂಡೇಶ್ವರಿಯಲ್ಲಿ ಭಾರಿ ಅಂತರದಿಂದ ಸೋತರೆ, ಬಾಗಲಕೋಟೆಯಲ್ಲಿ ಕಡಿಮೆ ಅಂತರದಲ್ಲಿ ಗೆದ್ದರು. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವ ಉತ್ಸಾಹದಲ್ಲಿದ್ದು, ಸಿದ್ದರಾಮಯ್ಯ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಅಂತಿಮವಾಗಿ ಅವರು ಗೆಲುವಿನ ಕ್ಷೇತ್ರವಾದ ವರುಣಾದತ್ತ ಮುಖ ಮಾಡಿದರೂ ಅಚ್ಚರಿಯಿಲ್ಲ.

ವರುಣಾ ಹೈವೊಲ್ಟೇಜ್ ಕ್ಷೇತ್ರವಾಗುವ ಸಾಧ್ಯತೆ

ವರುಣಾ ಹೈವೊಲ್ಟೇಜ್ ಕ್ಷೇತ್ರವಾಗುವ ಸಾಧ್ಯತೆ

ಈಗಾಗಲೇ ವರುಣಾ ಕ್ಷೇತ್ರಕ್ಕೆ ಜೆಡಿಎಸ್ ಅಭಿಷೇಕ್ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ಆದರೆ ಸಿದ್ದರಾಮಯ್ಯ ಅವರೇನಾದರೂ ಸ್ಪರ್ಧಿಸಿದ್ದೇ ಆದರೆ ಅವರಿಗೆ ಸ್ಪರ್ಧೆ ನೀಡುವ ಅಭ್ಯರ್ಥಿಯನ್ನೇ ಕಣಕ್ಕಿಳಿಸದೆ ಹೋದರೆ ಬಿಜೆಪಿಯ ಪ್ರತಿಷ್ಠೆ ಮಣ್ಣುಪಾಲಾಗಲಿದೆ. ಅಂತಹ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನೇ ಕಣಕ್ಕಿಳಿಸಿದರೂ ಅಚ್ಚರಿಯಿಲ್ಲ.

ಬಹುಶಃ ಇಂತಹದೊಂದು ಸಂದರ್ಭ ಸೃಷ್ಟಿಯಾದರೆ ವರುಣಾ ಕ್ಷೇತ್ರ ಹೈವೊಲ್ಟೇಜ್ ಕ್ಷೇತ್ರವಾಗಿ ಗಮನಸೆಳೆಯುವುದಂತು ನಿಜ. ಬಿಜೆಪಿ ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿದ್ದು, ಹೆಚ್ಚು ಶಾಸಕರನ್ನು ಗೆಲ್ಲಿಸಿಕೊಳ್ಳುವ ತಂತ್ರ ರೂಪಿಸುತ್ತಿದೆ. ಹೀಗಾಗಿ ವಿಜಯೇಂದ್ರರನ್ನು ವರುಣಾದಿಂದ ಕಣಕ್ಕಿಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. 2018ರ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡಲು ಚಿಂತಿಸಿದ್ದರು.

ವರಣು ಕ್ಷೇತ್ರದ ಮುಖಂಡರೊಂದಿಗೆ ವಿಜಯೇಂದ್ರ ನಿರಂತರ ಸಂಪರ್ಕ

ವರಣು ಕ್ಷೇತ್ರದ ಮುಖಂಡರೊಂದಿಗೆ ವಿಜಯೇಂದ್ರ ನಿರಂತರ ಸಂಪರ್ಕ

ನಾಯಕತ್ವದ ಕೊರತೆಯಿಂದಾಗಿ ಕ್ಷೇತ್ರದಲ್ಲಿ ಮೂರು ಭಾಗವಾಗಿದ್ದ ಬಿಜೆಪಿ ಪಕ್ಷವನ್ನು ವಿಜಯೇಂದ್ರ ಒಗ್ಗೂಡಿಸಿದ್ದರು. ಕ್ಷೇತ್ರದಾದ್ಯಂತ ತಿರುಗಾಡಿ ಪಕ್ಷದ ಮುಖಂಡರು, ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದ ಅವರು, ಎಲ್ಲರಲ್ಲೂ ಇದ್ದ ಅಸಮಾಧಾನ ಮತ್ತು ಗೊಂದಲಗಳನ್ನು ದೂರ ಮಾಡಿ ಪಕ್ಷವನ್ನು ಒಗ್ಗೂಡಿಸಿದ್ದರು. ಆದರೆ, ಬಿಜೆಪಿ ವರಿಷ್ಠರು ಅಂತಿಮ ಗಳಿಗೆಯಲ್ಲಿ ತೋಟದಪ್ಪ ಬಸವರಾಜು ಅವರಿಗೆ ಟಿಕೆಟ್ ನೀಡಿದ್ದರು.

ಈಗಲೂ ಕೇತ್ರದ ಮುಖಂಡರ ಸಂಪರ್ಕದಲ್ಲಿರುವ ವಿಜಯೇಂದ್ರ ಕ್ಷೇತ್ರದ ಪ್ರತಿ ಮತದಾರರು, ಗ್ರಾಮಗಳ ಬಗ್ಗೆ ಅರಿತಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯ ವರುಣಾದಲ್ಲೇ ಸ್ಪರ್ಧಿಸಿದರೆ ವಿಜಯೇಂದ್ರ ಅವರು ಎಂಟ್ರಿ ಕೊಟ್ಟರೆ ವರುಣಾ ಕ್ಷೇತ್ರ ರಾಜ್ಯದ ಗಮನಸೆಳೆಯುವುದಂತು ಸತ್ಯ. ಆದರೆ ಸದ್ಯಕ್ಕೆ ಎಲ್ಲವೂ ಗೌಪ್ಯವಾಗಿದ್ದು, ಕೇವಲ ಅಂತೆ, ಕಂತೆಗಳ ವಿಚಾರವೇ ಚರ್ಚೆಯಾಗುತ್ತಿದೆ. ಆದರೆ ಮುಂದೇನು ಎನ್ನುವುದನ್ನು ಕಾದುನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+