ನಂಜನಗೂಡಿನಿಂದ ಕಾಂಗ್ರೆಸ್‌ ಅಭ್ಯರ್ಥಿ ಇವರು, ನಿರೀಕ್ಷೆ ಸುಳ್ಳಾಗಿಲ್ಲ!

ನಂಜನಗೂಡು, ಮಾರ್ಚ್‌ 25: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಇಲ್ಲಿ ನಿರೀಕ್ಷೆಯಂತೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿವಂಗತ ಧ್ರುವನಾರಯಣ್‌ ಅವರ ಮಗ ದರ್ಶನ್‌ ಅವರಿಗೆ ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ.

ಅಕಾಲ ಮರಣ ಹೊಂದಿದ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಕಾರ್ಯಾಧ್ಯಕ್ಷ ಆರ್‌ ಧ್ರುವನಾರಾಯಣ ಅವರ ಸಾವು ಮೈಸೂರು, ಚಾಮರಾಜನಗರದ ಕಾಂಗ್ರೆಸ್‌ ಕಾರ್ಯಕರ್ತರಿಗೆ ಬಹುದೊಡ್ಡ ಆಘಾತ ನೀಡಿತ್ತು. ನಂಜನಗೂಡು ವಿಧಾನಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಆರ್ ಧ್ರುವನಾರಾಯಣ ಅವರ ನಿಧನದಿಂದ ಈಗ ಕ್ಷೇತ್ರದಲ್ಲಿ ಅವರ ಪುತ್ರ ದರ್ಶನಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ ಮಾಡಬೇಕು ಎಂಬ ಆಗ್ರಹಗಳು ಹೆಚ್ಚಾಗಿದ್ದವು.

Karnataka assembly elections 2023 congress list nanjangud ticket

ನಂಜನಗೂಡು ಟಿಕೆಟ್‌ ಆಕಾಂಕ್ಷಿಯಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿದ್ದ ಆರ್‌ ಧ್ರುವನಾರಾಯಣ ಅವರು ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದರು. ನಿರ್ಣಯ ತೆಗೆದುಕೊಳ್ಳುವ ಸ್ಥಾನದಲ್ಲಿದ್ದ ಅವರಿಗೆ ಹೈಕಮಾಂಡ್‌ ಟಿಕೆಟ್‌ ಇಲ್ಲ ಎಂದು ಹೇಳುವ ಸಾಧ್ಯತೆಯೂ ಇರಲಿಲ್ಲ. ಆದರೆ ಅವರ ಅಕಾಲಿಕ ಮರಣದಿಂದ ನಂಜನಗೂಡು ಟಿಕೆಟ್‌ ಮಾಜಿ ಲೋಕೋಪಯೋಗಿ ಸಚಿವ ಎಚ್‌ಸಿ ಮಹದೇವಪ್ಪ ಅವರಿಗೆ ಸಿಗುತ್ತದೆ ಎಂದು ಹೇಳಲಾಗಿತ್ತು.']

ಆದರೆ ಆರ್‌ ಧ್ರುವನಾರಾಯಣ್‌ ನಿಧನದಿಂದ ಕಾರ್ಯಕರ್ತರು ಅವರ ಮಗ ದರ್ಶನ್‌ಗೆ ಟಿಕೆಟ್‌ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುಣ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌, ಸಿದ್ದರಾಮಯ್ಯ ಅವರ ಮುಂದೆ ದುಂಬಾಲು ಬಿದ್ದಿದ್ದರು. ಧ್ರುವನಾರಾಯಣ್‌ ಮಗ ದರ್ಶನ್‌ಗೆ ಟಿಕೆಟ್‌ ಕೊಡಲೇಬೇಕು. ಇಲ್ಲದಿದ್ದರೆ ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆ ಎರಡಲ್ಲೂ ಕಾಂಗ್ರೆಸ್‌ ಸೋಲಿಸುವುದಾಗಿ ಸ್ವತಃ ಕಾಂಗ್ರೆಸ್‌ ಕಾರ್ಯಕರ್ತರೇ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

Karnataka assembly elections 2023 congress list nanjangud ticket

ಹೀಗಾಗಿ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಧ್ರುವನಾರಾಯಣ್‌ ಅವರ ಮಗ ದರ್ಶನ್‌ಗೆ ಟಿಕೆಟ್‌ ನೀಡಲಾಗಿದೆ. ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಎಚ್‌ಸಿ ಮಹಾದೇವಪ್ಪ ಕೂಡ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಕೊನೆಗೆ ಅವರನ್ನು ಹೈಕಮಾಂಡ್‌ ಸಂಭಾಳಿಸಿ ಕಾರ್ಯಕರ್ತರ ಒತ್ತಾಸೆಯಂತೆ ಈಗ ದರ್ಶನ್‌ ಧ್ರುವನಾರಾಯಣ್‌ಗೆ ಟಿಕೆಟ್‌ ನೀಡಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಾಲಿ ಶಾಸಕರಾಗಿರುವ ಹರ್ಷವರ್ಧನ್‌ ಅವರು ಬಿಜೆಪಿಯಿಂದ ಇಲ್ಲಿ ಜಯಗಳಿಸಿದ್ದರು. ಅವರು ಮಾಜಿ ಕಂದಾಯ ಸಚಿವ ವಿ ಶ್ರೀನಿವಾಸ್‌ಪ್ರಸಾದ್‌ ಅವರ ಅಳಿಯ ಕೂಡ.

ಈಗ ದರ್ಶನ್‌ ಕಣಕ್ಕಿಳಿಯುತ್ತಿರುವುದರಿಂದ ಹರ್ಷವರ್ಧನ್‌ ಗೆಲ್ಲುವುದು ಅಷ್ಟು ಸುಲಭವಾಗೇನೂ ಇಲ್ಲ. ಕಾರಣ ಇಲ್ಲಿ ದರ್ಶನ್‌ ಅನುಕಂಪದ ಆಧಾರದ ಮೇಲೆ ಗೆಲ್ಲಲುಬಹುದು. ಸದ್ಯ ಎಚ್‌ಸಿ ಮಹಾದೇವಪ್ಪ ಅವರಿಗೆ ಟಿ ನರಸೀಪುರದಿಂದ ಟಿಕೆಟ್‌ ನೀಡಲಾಗಿದೆ. ಅವರು ತಮ್ಮ ಸ್ವಂತ ಕ್ಷೇತ್ರವಾದ ಟಿ ನರಸೀಪುರ ವಿಧಾನಸಭಾ ಕ್ಷೇತ್ರವನ್ನು ತಮ್ಮ ಪುತ್ರ ಸುನೀಲ್‌ ಬೋಸ್‌ಗೆ ಬಿಟ್ಟುಕೊಟ್ಟು ತಾವು ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಟಿಕೆಟ್‌ ಬಯಸಿದ್ದರು. ಈಗ ಧ್ರುವನಾರಾಯಣ ಅವರ ನಿಧನದಿಂದ ಅವರ ಮಗ ದರ್ಶನ್‌ಗೆ ಟಿಕೆಟ್‌ ನೀಡಲಾಗಿದೆ.

ಆರ್‌. ಧ್ರುವನಾರಾಯಣ ಅವರ ನಿಧನದಿಂದ ಮುಂದಿನ ಅಭ್ಯರ್ಥಿಯಾಗಿ ಅವರ ಪುತ್ರನೇ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ನಿಲ್ಲಬೇಕು ಎಂದು ಕಾರ್ಯಕರ್ತರು ಆಪಾರ ಒತ್ತಡ ತಂದಿದ್ದಾರೆ. ಹೀಗಾಗಿ ದರ್ಶನ್‌ಗೆ ಟಿಕೆಟ್ ನಿಖರವಾಗಿ ಸಿಗುತ್ತದೆ ಎಂದು ಹೇಳಲಾಗಿದೆ. ಆರ್‌. ಧ್ರುವನಾರಾಯಣ್ ಅವರ ನಿಧನ ಸಂದರ್ಭದಲ್ಲಿ ಸ್ಥಳಕ್ಕೆ ಹೋಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್‌, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಧ್ರುವನಾರಾಯಣ ಅವರ ಮೈಸೂರಿನ ವಿಜಯನಗರದ ನಿವಾಸ ಹಾಗೂ ಅವರ ಸ್ವಗ್ರಾಮ ಹೆಗ್ಗವಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬಹಿರಂಗವಾಗಿ ಧ್ರುವನಾರಾಯಣ ಅವರ ಪುತ್ರ ದರ್ಶನ್‌ಗೆ ಟಿಕೆಟ್‌ ನೀಡಬೇಕು ಎಂದು ಕೂಗಿ ಹಾಕಿ ಆಗ್ರಹಪಡಿಸುತ್ತಲೇ ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+