• search
 • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

"ವರುಣಾ ಕ್ಷೇತ್ರಕ್ಕೆ ಐದು ಬಾರಿ ಭೇಟಿ ನೀಡಿದ್ದೇನೆ ಅಂದಮೇಲೆ ನೀವೇ ಅರ್ಥ ಮಾಡಿಕೊಳ್ಳಿ''

By ಮೈಸೂರು ಪ್ರತಿನಿಧಿ
|

ಮೈಸೂರು, ಸೆಪ್ಟೆಂಬರ್ 9: ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರು ಇಂದು ಬೆಳಿಗ್ಗೆ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದರು.

   ShivSena ಕಾಟದಿಂದ ಹೊರ ಬರ್ತಾಳಾ Kangana? | Oneindia Kannada

   ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನಿನ್ನೆ ಮಂಡ್ಯದಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿ, ಪಕ್ಷದ ಕಾರ್ಯಕರ್ತರ ಜೊತೆ ಮಾತನಾಡಿದೆ. ಪಕ್ಷದ ಸಂಘಟನೆ ಬಗ್ಗೆ ಮುಂದೆ ಬರುವಂತೆ ಹಾಗೂ ಗ್ರಾಮ ಪಂಚಾಯತಿ ಚುನಾವಣೆಗಳ ಬಗ್ಗೆ ಚರ್ಚಿಸಿದ್ದೇನೆ. ನನಗೆ ಪಕ್ಷ ಸಂಘಟನೆ ಬಹಳ ಮುಖ್ಯ'' ಎಂದರು.

   ಈ ಬಾರಿಯ ಸರಳ ದಸರಾ ಆಚರಣೆ ಅರಮನೆಗೆ ಮಾತ್ರ ಸೀಮಿತ: ಏನಿರುತ್ತೆ? ಏನಿರಲ್ಲ?ಈ ಬಾರಿಯ ಸರಳ ದಸರಾ ಆಚರಣೆ ಅರಮನೆಗೆ ಮಾತ್ರ ಸೀಮಿತ: ಏನಿರುತ್ತೆ? ಏನಿರಲ್ಲ?

   ಮುಂದೆ ಬರುವಂತಹ ಗ್ರಾಮ ಪಂಚಾಯತಿ ಚುನಾವಣೆಗಳು ನಾಯಕತ್ವ ಸೃಷ್ಟಿ ಮಾಡುವಂತಹ ಚುನಾವಣೆಗಳಾದ್ದರಿಂದ ಪ್ರವಾಸ ಕೈಗೊಂಡಿದ್ದೇನೆ. ಪಕ್ಷದ ಕಾರ್ಯಕರ್ತರ ಮೇಲೆ ನಂಬಿಕೆ ಇದೆ. ಮುಂಬರುವ ಚುನಾವಣೆಗಳು ನಿಮ್ಮ ಚುನಾವಣೆ ಎಂದು ಎದುರಿಸಬೇಕು, ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ ಎಂಬ ನಂಬಿಕೆ ಇದೆ ಎಂದರು.

   "ಹಳೆ ಮೈಸೂರು ಭಾಗದಲ್ಲಿ ಪಕ್ಷದ ಸಂಘಟನೆ ಕೊರತೆ ಇದೆ. ಆದ್ದರಿಂದ ಮಂಡ್ಯ, ಮೈಸೂರು, ಚಾಮರಾಜನಗರ ಕ್ಷೇತ್ರಗಳನ್ನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಜೊತೆ ಕೈಜೋಡಿಸಿ ಈ ಭಾಗದಲ್ಲಿ ಹೆಚ್ಚು ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ'' ಎಂದು ಹೇಳಿದರು.

   ಕಳೆದ ಬಾರಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸೂಚನೆ ನೀಡಿ, ಕಡೆಯ ಗಳಿಗೆಯಲ್ಲಿ ಕ್ಷೇತ್ರ ಕೈ ಬಿಟ್ಟಿದ್ದರ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ನಾನು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಐದು ಬಾರಿ ಭೇಟಿ ನೀಡಿದ್ದೇನೆ. ಶಿಕಾರಿಪುರ ಕ್ಷೇತ್ರಕ್ಕೆ ಎರಡು ಬಾರಿ ಭೇಟಿ ನೀಡಿದ್ದೇನೆ. ಅಂದಮೇಲೆ ನೀವೇ ಅರ್ಥ ಮಾಡಿಕೊಳ್ಳಿ'' ಎಂದರು.

   "ನನಗೆ ರಾಜಕೀಯ ಜನ್ಮ ನೀಡಿದ ವರುಣಾ ವಿಧಾನಸಭಾ ಕ್ಷೇತ್ರವನ್ನು ಮರೆಯಲಾಗುವುದಿಲ್ಲ. ಆದ್ದರಿಂದ ಮುಂದಿನ ವಿಧಾನ ಸಭಾ ಚುನಾವಣೆಯನ್ನು ಇಲ್ಲೇ ಸ್ಪರ್ಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ಪಕ್ಷದ ಹೈಕಮಾಂಡ್ ಏನು ಸೂಚನೆ ನೀಡುತ್ತದೆ ಅದೇ ರೀತಿ ನಡೆದುಕೊಳ್ಳುತ್ತೇನೆ'' ಎನ್ನುವುದರ ಮೂಲಕ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಸುಳಿವು ನೀಡಿದರು.

   English summary
   BY Vijayendra, son of Chief Minister BS Yeddyurappa, visited the Sri Nanjangudu Srikantheshwara temple this morning, received a darshana.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X