ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ಬಜೆಟ್ 2021: ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯ ನಿರೀಕ್ಷೆಗಳೇನು?

By C.dinesh
|
Google Oneindia Kannada News

ಮೈಸೂರು, ಮಾರ್ಚ್ 3: ರಾಜ್ಯದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಸಹ ಒಂದು. ರಾಜ್ಯದ ರಾಜಧಾನಿ ಬೆಂಗಳೂರು ಹೊರತುಪಡಿಸಿ ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರಕ್ಕೆ ಸಂಬಂಧಿಸಿದ ಹೆಚ್ಚಿನ ಚಟುವಟಿಕೆಗಳಿಗೂ ಮೈಸೂರೇ ವೇದಿಕೆ ಎಂದರೆ ತಪ್ಪಾಗಲಾರದು. ದಿನದಿಂದ ದಿನಕ್ಕೆ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳುತ್ತಿರುವ ಅರಮನೆಗಳ ನಗರಿಗೆ ಪ್ರವಾಸೋದ್ಯಮವೇ ಜೀವಾಳ.

ಹೀಗೆ, ಅಭಿವೃದ್ಧಿಯತ್ತ ದಾಪುಗಾಲಿಟ್ಟಿರುವ ಮೈಸೂರಿನಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಇಂದಿಗೂ ಬಾಕಿ ಉಳಿದಿದ್ದು, ಮೈಸೂರಿಗರ ವರ್ಷಗಳ ಬೇಡಿಕೆಗಳು ಈವರೆಗಿನ ಹಲವು ಬಜೆಟ್‌ಗಳಲ್ಲಿ ಈಡೇರಿಲ್ಲ. ಇವೆಲ್ಲರ ನಡುವೆ ಮತ್ತೊಂದು ಬಜೆಟ್ ಎದುರಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸದ್ಯದಲ್ಲೇ ಮಂಡಿಸಲಿರುವ ಈ ಬಾರಿಯ ಬಜೆಟ್ ಮೇಲೆ ನಿರೀಕ್ಷೆಗಳ ಮಹಾಪೂರವೇ ಇದೆ.

ಕರ್ನಾಟಕ ಬಜೆಟ್ 2021: ಉಡುಪಿ ಜಿಲ್ಲೆಯ ಜನರ ನಿರೀಕ್ಷೆಗಳುಕರ್ನಾಟಕ ಬಜೆಟ್ 2021: ಉಡುಪಿ ಜಿಲ್ಲೆಯ ಜನರ ನಿರೀಕ್ಷೆಗಳು

ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಿ

ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಿ

ಹಲವು ಕ್ಷೇತ್ರಗಳಲ್ಲಿ ತನ್ನ ಕಾರ್ಯವ್ಯಾಪ್ತಿ ಹೊಂದಿರುವ ಮೈಸೂರು ಪ್ರವಾಸೋದ್ಯಮವನ್ನೇ ಹೆಚ್ಚಾಗಿ ಅವಲಂಬಿಸಿದೆ. ಇದೇ ಕಾರಣಕ್ಕಾಗಿ ಪ್ರತಿ ಬಜೆಟ್ ಸಂದರ್ಭದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೆಂಬ ಬೇಡಿಕೆ ಕೇಳಿಬರಲಿದೆ. ಅದರಂತೆ ಈ ವರ್ಷವೂ ಸಹ ಪ್ರವಾಸೋದ್ಯಮದ ಅಭಿವೃದ್ಧಿ ನಿಟ್ಟಿನಲ್ಲಿ ಸಾಕಷ್ಟು ಬೇಡಿಕೆಗಳು ಕೇಳಿಬಂದಿವೆ.

ಹೋಟೆಲ್ ಉದ್ಯಮ ಸಂಪೂರ್ಣ ನೆಲಕಚ್ಚಿದೆ

ಹೋಟೆಲ್ ಉದ್ಯಮ ಸಂಪೂರ್ಣ ನೆಲಕಚ್ಚಿದೆ

ಈ ವರ್ಷದ ಬಜೆಟ್ ನಿರೀಕ್ಷೆಗಳ ಕುರಿತು "ಒನ್ಇಂಡಿಯಾ"ದೊಂದಿಗೆ ಮಾತನಾಡಿದ ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ""ವಿಶ್ವವನ್ನೇ ತಲ್ಲಣಗೊಳಿಸಿದ ಮಹಾಮಾರಿ ಕೊರೊನಾದಿಂದ ಹೋಟೆಲ್ ಉದ್ಯಮ ಸಂಪೂರ್ಣ ನೆಲಕಚ್ಚಿದೆ. ಕೋವಿಡ್-19 ಸೋಂಕಿನ ಆತಂಕ ಎದುರಾಗಿ ವರ್ಷ ಕಳೆದಿದ್ದು, ಈ ಅವಧಿಯಲ್ಲಿ ಹೋಟೆಲ್ ಉದ್ಯಮಕ್ಕೆ ಯಾವುದೇ ಪ್ರೋತ್ಸಾಹ ಸಹ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ 2021-22ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಹೋಟೆಲ್ ಉದ್ಯಮದ ಅಭಿವೃದ್ಧಿಗೆ ಅನುಗುಣವಾಗಿ ಕೆಲವೊಂದು ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು'' ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯ ಬಜೆಟ್ 2021: ದಾವಣಗೆರೆ ಜಿಲ್ಲೆಯ ನಿರೀಕ್ಷೆಗಳೇನು?ಕರ್ನಾಟಕ ರಾಜ್ಯ ಬಜೆಟ್ 2021: ದಾವಣಗೆರೆ ಜಿಲ್ಲೆಯ ನಿರೀಕ್ಷೆಗಳೇನು?

ಹೋಟೆಲ್ ಉದ್ಯಮಕ್ಕೆ ಸಂಬಂಧಿಸಿದ ನೌಕರರ ತರಬೇತಿ

ಹೋಟೆಲ್ ಉದ್ಯಮಕ್ಕೆ ಸಂಬಂಧಿಸಿದ ನೌಕರರ ತರಬೇತಿ

""ಪ್ರಮುಖವಾಗಿ, ಕೊರೊನಾದಿಂದ ಹೋಟೆಲ್ ಉದ್ಯಮ ನೆಲಕಚ್ಚಿದ್ದು, ಹೀಗಾಗಿ ಹೋಟೆಲ್ ಉದ್ಯಮಕ್ಕೆ ಸಂಬಂಧಿಸಿದ ಕಟ್ಟಡಗಳಿಗೆ 2 ವರ್ಷ ಕಂದಾಯ ರದ್ದುಪಡಿಸಬೇಕು, ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಇರುವಂತೆ ನಮ್ಮ ರಾಜ್ಯದಲ್ಲೂ ಸಹ ಪ್ರವಾಸಿ ಬಸ್ಸುಗಳಿಗೆ ಏಕರೂಪ ತೆರೆಗೆ ವ್ಯವಸ್ಥೆ ಜಾರಿಗೊಳಿಸಬೇಕು, ಹೋಟೆಲ್ ಉದ್ಯಮಕ್ಕೆ ಸಂಬಂಧಿಸಿದ ನೌಕರರ ತರಬೇತಿ ಕೇಂದ್ರ ಆರಂಭಿಸುವುದು ಹಾಗೂ ಐಷಾರಾಮಿ ಹೋಟೆಲ್‌ಗಳ ಕೈಗಾರಿಕಾ ಸ್ಥಾನಮಾನ ನೀಡಬೇಕಿದೆ. ಜತೆಗೆ ಐದು ಜಿಲ್ಲೆಗಳನ್ನು ಒಳಗೊಂಡ ಪ್ರವಾಸೋದ್ಯಮ ಪ್ರಾಧಿಕಾರ ರಚನೆ, ಪ್ರವಾಸೋದ್ಯಮ ಅಭಿವೃದ್ಧಿಗೆ ರಾಯಭಾರಿ ನೇಮಿಸುವಂತೆ'' ಸಹ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ದಸರಾ ಅಭಿವೃದ್ಧಿ ಪ್ರಾಧಿಕಾರ ಆಗುತ್ತಾ?

ದಸರಾ ಅಭಿವೃದ್ಧಿ ಪ್ರಾಧಿಕಾರ ಆಗುತ್ತಾ?

ಮೈಸೂರಿನ ಪ್ರವಾಸೋದ್ಯಮಕ್ಕೆ ನಾಡಹಬ್ಬ ದಸರಾ ಮಹೋತ್ಸವ ಬೆನ್ನೆಲುಬಾಗಿದೆ ಎಂದರೆ ತಪ್ಪಾಗಲಾರದು. ಆದರೆ ಶತಮಾನಗಳ ಇತಿಹಾಸವಿರುವ ವಿಶ್ವವಿಖ್ಯಾತ ದಸರಾ ಮಹೋತ್ಸವದ ಆಚರಣೆಗೆ ಸಂಬಂಧಿಸಿದಂತೆ ಪ್ರತ್ಯೇಕ ದಸರಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಬಗ್ಗೆ ಹಲವು ವರ್ಷಗಳಿಂದಲೂ ಬೇಡಿಕೆ ಇದ್ದೇ ಇದೆ. ಆದರೂ ದಸರಾ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಈವರೆಗೂ ಯಾವ ಸರ್ಕಾರಗಳು ಆಸಕ್ತಿ ತೋರಿಸಿಲ್ಲ. ಸ್ವತಃ ಮೈಸೂರಿನವರೇ ಆಗಿರುವ ಸಿದ್ದರಾಮಯ್ಯ ಅವರ ಅವಧಿಯಲ್ಲಾದರೂ ದಸರಾ ಪ್ರಾಧಿಕಾರ ರಚನೆ ಆಗಲಿದೆ ಎಂಬ ನಿರೀಕ್ಷೆ ಸಹ ಹುಸಿಯಾಯಿತು. ಹೀಗಾಗಿ ಈ ವರ್ಷದ ಬಜೆಟ್ ನಲ್ಲಾದರೂ ದಸರಾ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸರ್ಕಾರ ಮನಸ್ಸು ಮಾಡುತ್ತಾ? ಎಂಬ ಪ್ರಶ್ನೆ ಕಾಡುತ್ತಿದೆ.

ಚಾಮುಂಡಿ ಬೆಟ್ಟದಲ್ಲಿ ರೋಪ್-ವೇ ನಿರ್ಮಿಸಿ

ಚಾಮುಂಡಿ ಬೆಟ್ಟದಲ್ಲಿ ರೋಪ್-ವೇ ನಿರ್ಮಿಸಿ

ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಚಾಮುಂಡಿಬೆಟ್ಟ ಸಹ ಒಂದು, ನಿತ್ಯವೂ ಸಾವಿರಾರು ಭಕ್ತರು ಭೇಟಿ ನೀಡುವ ಬೆಟ್ಟದಲ್ಲಿ ರೋಪ್-ವೇ ನಿರ್ಮಿಸಬೇಕೆಂಬ ಬೇಡಿಕೆ ಸಹ ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಆದರೆ ಇದಕ್ಕೆ ಪರಿಸರ ಪ್ರೇಮಿಗಳ ವಿರೋಧವಿರುವ ಕಾರಣ ಈ ಬಗ್ಗೆ ಸರ್ಕಾರ ಸಹ ಹೆಚ್ಚಿನ ಒಲವು ತೋರುತ್ತಿಲ್ಲ. ಆದರೂ ರೋಪ್-ವೇ ನಿರ್ಮಿಸುವ ಬಗ್ಗೆ ಈ ಬಾರಿ ಬಜೆಟ್ ನಲ್ಲಿ ಸರ್ಕಾರ ಆದ್ಯತೆ ನೀಡಬೇಕೆಂಬ ಬೇಡಿಕೆ ಇದ್ದೇ ಇದೆ.

ಕೈಗಾರಿಕಾ ವಲಯದಲ್ಲೂ ನಿರೀಕ್ಷೆ ಹೆಚ್ಚಿದೆ

ಕೈಗಾರಿಕಾ ವಲಯದಲ್ಲೂ ನಿರೀಕ್ಷೆ ಹೆಚ್ಚಿದೆ

ಪ್ರವಾಸೋದ್ಯಮವನ್ನೇ ಹೆಚ್ಚಾಗಿ ಅವಲಂಬಿಸಿರುವ ಮೈಸೂರು ಕೈಗಾರಿಕಾ ವಲಯದಲ್ಲೂ ತನ್ನ ಕಾರ್ಯವ್ಯಾಪ್ತಿ ಹೊಂದಿದೆ. ದೊಡ್ಡ ಕೈಗಾರಿಕೆಗಳ ಜತೆಗೆ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಜಿಲ್ಲೆಯ ಕೈಗಾರಿಕಾ ವಲಯದ ಅಭಿವೃದ್ಧಿಗೆ ಸಂಬಂಧಿಸಿದಂತೆಯೂ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೈಗಾರಿಕಾ ಕ್ಲಸ್ಟರ್ ನಿರ್ಮಾಣ ಮಾಡುವುದು ಸೇರಿದಂತೆ ಈ ಹಿಂದಿನ ವರ್ಷಗಳಲ್ಲಿ ಸಲ್ಲಿಸಲಾಗಿರುವ ಹಲವು ಬೇಡಿಕೆಗಳು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಈಡೇರುವ ನಿರೀಕ್ಷೆಗಳನ್ನು ಕೈಗಾರಿಕಾ ವಲಯದ ಉದ್ದಿಮೆದಾರರು ಎದುರು ನೋಡುತ್ತಿದ್ದಾರೆ.

English summary
Here are the list of expectations of Cultural District Mysuru in Karnataka Budget 2021. Read on,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X