'ಹಳ್ಳಿಹಕ್ಕಿ'ಯ ಗೂಡಿಗೆ ಡಿಚ್ಚಿ ಕೊಟ್ಟ 'ಟಗರು'!
ಮೈಸೂರು, ನವೆಂಬರ್.20: ರಾಜ್ಯದಲ್ಲಿ ಉಪ ಚುನಾವಣೆ ಬಿಸಿ ದಿನೇ ದಿನೆ ಏರುತ್ತಿದೆ. ಅನರ್ಹ ಶಾಸಕರಿಗೆ ಪಾಠ ಕಲಿಸಲು ಕಾಂಗ್ರೆಸ್ ಪಣ ತೊಟ್ಟು ನಿಂತಿದೆ. ಈಗಾಗಲೇ ಅಖಾಡಕ್ಕೆ ಧುಮುಕಿರುವ ಮಾಜಿ ಸಿಎಂ ಸಿದ್ದರಾಮಯ್ಯ ಎದುರಾಳಿಗಳಿಗೆ ಮಾತಿನ ಪೆಟ್ಟು ಕೊಟ್ಟಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರಿನ ಕಣಗಲ್ ಬಳಿ ಮಾಜಿ ಮುಖ್ಮಯಂತ್ರಿ ಸಿದ್ದರಾಮಯ್ಯ ಬಹಿರಂಗ ಪ್ರಚಾರ ನಡೆಸಿದರು. ಈ ವೇಳೆ ಹುಣಸೂರಿನ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಗೆ ಸಿದ್ದರಾಮಯ್ಯ ಮಾತಿನ ಡಿಚ್ಚಿ ಕೊಟ್ಟರು. ಹೆಚ್.ವಿಶ್ವನಾಥ್ ಗೆ ಪಕ್ಷದಿಂದ ಪಕ್ಷಕ್ಕೆ ಜಿಗಿಯುವುದೇ ಕೆಲಸವಾಗಿ ಬಿಟ್ಟಿದೆ ಎಂದರು.
ಕಾಂಗ್ರೆಸ್ ನಲ್ಲಿ ಇದ್ದಾಗ ನನ್ನ ವಿರುದ್ಧವೇ ಮಾತನಾಡುತ್ತಿದ್ದ ಹೆಚ್.ವಿಶ್ವನಾಥ್, ನಂತರ ಜೆಡಿಎಸ್ ಗೆ ಹಾರಿದರು. ಆಗಲೂ ಮತ ಹಾಕಿದ ಜನರ ಅಭಿಪ್ರಾಯ ಕೇಳಲಿಲಲ್ಲ. ಜೆಡಿಎಸ್ ನಲ್ಲಾದರೂ ಪ್ರಾಮಾಣಿಕರಾಗಿ ಇದ್ದರಾ, ಅಲ್ಲೂ ಇಲ್ಲ. ಈಗ ಬಿಜೆಪಿಗೆ ಹೋಗಿದ್ದು, ಈಗಲಾದರೂ ನಿಮ್ಮ ಅಭಿಪ್ರಾಯ ಕೇಳಿದ್ದಾರಾ ಅದೂ ಇಲ್ಲ. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹೆಚ್.ವಿಶ್ವನಾಥ್ ಗೆ ಬೆಂಬಲ ನೀಡದಂತೆ ಸಿದ್ದರಾಮಯ್ಯ ಗುಡುಗಿದರು.

ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ನಾನೇ ಗೆದ್ದಂತೆ
ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಪರ ಮತಯಾಚನೆ ಮಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದರೆ ತಮ್ಮನ್ನೇ ಗೆಲ್ಲಿಸಿದಂತೆ ಎಂದು ಹೇಳಿದರು. ಮಂಜುನಾಥ್ ಹುಟ್ಟು ಕಾಂಗ್ರೆಸ್ಸಿಗರು. ಅವರು ಗೆದ್ದಾಗಲೂ ಸೋತಾಗಲೂ ನಿಮ್ಮ ಜೊತೆಗೆ ಇದ್ದವರು. ಇಂಥ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications