ಸಿಎಂ ಬದಲಾವಣೆ ಬಗ್ಗೆ ಬಿಜೆಪಿಯಿಂದ ಗೊಂದಲ ಸೃಷ್ಟಿ: ಸಿದ್ದರಾಮಯ್ಯ ವಾಗ್ದಾಳಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಕುರಿತು ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಕುರಿತು ಯಾವುದೇ ಹೇಳಿಕೆ ನೀಡದಂತೆ ಸಂಪುಟ ಸಹೋದ್ಯೋಗಿಗಳಿಗೆ ಸೂಚನೆ ನೀಡಿದ್ದು, ತಮ್ಮ ಇಲಾಖೆಗಳು ಮತ್ತು 2024 ರ ಲೋಕಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸುವಂತೆ ಸೂಚನೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿದ ಅವರು, ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಬಿಜೆಪಿ ಮತ್ತು ಜೆಡಿಎಸ್‌ಗಳು ಸರ್ಕಾರ ರಚಿಸುವ ಕನಸು ನನಸಾಗದ ಕಾರಣ ಹತಾಶೆಗೊಂಡಿದ್ದು, ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ ಎಂದು ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್‌ನವರು ವಿವಾದ ಸೃಷ್ಟಿಸಲು ಪ್ರಯತ್ನ ಮಾಡುತ್ತಿದ್ದಾರೆ, ನಮ್ಮ ಜನರಿಗೆ ಅದರ ಬಗ್ಗೆ ಮಾತನಾಡಬೇಡಿ, ಕಾಮೆಂಟ್ ಮಾಡಬೇಡಿ ಎಂದು ನಾನು ಹೇಳಿದ್ದೇನೆ. ನಿನ್ನೆ ನಾನು ಸಂಸತ್ತಿನ ಚುನಾವಣೆಯ ಚರ್ಚೆಯ ಜೊತೆಗೆ ಉಪಹಾರ ಸಭೆಯನ್ನು ಕರೆದಿದ್ದೇನೆ. ಅಂತಹ ಹೇಳಿಕೆಗಳನ್ನು ನೀಡಬೇಡಿ ಮತ್ತು ಆಯಾ ಇಲಾಖೆಗಳ ಮೇಲೆ ಕೇಂದ್ರೀಕರಿಸಿ ಎಂದು ಸೂಚನೆ ನೀಡಿರುವುದಾಗಿ ತಿಳಿಸಿದರು.
ಸಿಎಂ ಬದಲಾವಣೆ ಚರ್ಚೆ
ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿ ಬದಲಾವಣೆ ಕುರಿತು ಕಾಂಗ್ರೆಸ್ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ, ಎರಡೂವರೆ ವರ್ಷಗಳ ನಂತರ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಸ್ಥಾನ ಬಿಟ್ಟುಕೊಡಬೇಕಾಗುತ್ತದೆ ಎನ್ನುವ ವದಂತಿಗಳು ಕೂಡ ಬಂದಿದ್ದವು.
ಈ ಊಹಾಪೋಹಗಳ ನಡುವೆ, ಸಿದ್ದರಾಮಯ್ಯ ಅವರು ಪೂರ್ಣ ಐದು ವರ್ಷಗಳ ಕಾಲ ಅಧಿಕಾರದಲ್ಲಿ ಇರುವುದಾಗಿ ಗುರುವಾರ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಪಾಳಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ, ಪಕ್ಷದ ಹಲವಾರು ಶಾಸಕರು ಮತ್ತು ಸಚಿವರು ವಿವಿಧ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಮಾಧ್ಯಮಗಳು ತಪ್ಪಾಗಿ ಹೇಳಿಕೆ ನೀಡಿವೆ ಎಂದು ಶುಕ್ರವಾರ ದೂಷಿಸಿದ ಸಿದ್ದರಾಮಯ್ಯ, ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಂಡರೂ ಅದಕ್ಕೆ ತಕ್ಕಂತೆ ನಡೆದುಕೊಳ್ಳುತ್ತೇನೆ ಎಂದು ಸ್ಪಷ್ಟನೆ ನೀಡಿದ್ದರು.
ಸರ್ಕಾರದ ಹೆಸರು ಕೆಡಿಸುವ ತಂತ್ರ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರು ಶನಿವಾರ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಉಪಹಾರ ಸೇವಿಸಿದರು, ಅವರು ತಮ್ಮ ಇಲಾಖೆಗಳು ಮತ್ತು ಲೋಕಸಭೆ ಚುನಾವಣೆಗಳ ಮೇಲೆ ಕೇಂದ್ರೀಕರಿಸಲು ಮತ್ತು ನಾಯಕತ್ವದ ವಿಷಯದ ಬಗ್ಗೆ ಮಾತನಾಡುವುದನ್ನು ನಿಲ್ಲಿಸಲು ಸಲಹೆ ನೀಡಿದರು.
ನವೆಂಬರ್ 15 ರೊಳಗೆ ತಮ್ಮ ಜಿಲ್ಲೆಗಳ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಅಲ್ಲಿನ ಜನರು ಮತ್ತು ಶಾಸಕರನ್ನು ಭೇಟಿ ಮಾಡಿ ಬರ ಪರಿಸ್ಥಿತಿಯನ್ನು ಅವಲೋಕಿಸಿ ವರದಿ ಸಲ್ಲಿಸುವಂತೆ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಪತ್ರ ಬರೆದಿರುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಕೇಂದ್ರದ ನೆರವಿಗೆ ಕಾಯದೆ ಈಗಾಗಲೇ ಪರಿಹಾರ ಕಾರ್ಯಗಳು ನಡೆಯುತ್ತಿವೆ ಎಂದು ಹೇಳಿದರು.












Click it and Unblock the Notifications