ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಿ; ಎಂ. ಲಕ್ಷ್ಮಣ್ ಒತ್ತಾಯ

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳನ್ನು ಟೀಕಿಸಿ ರದ್ದು ಮಾಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿ ಪರವಾಗಿ ಜನರು ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ್ದು, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದೇ ಒಳ್ಳೆಯದು ಎಂದು ಎಂ. ಲಕ್ಷ್ಮಣ್ ಒತ್ತಾಯಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎದುರು ಸೋತ ಬಳಿಕ ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮರು ಪರಿಶೀಲನೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತವರು ಜಿಲ್ಲೆಯಲ್ಲೇ ಎಷ್ಟು ಬಾರಿ ಅವಮಾನ ಮಾಡುತ್ತೀರಿ? ಇಷ್ಟರ ಮಟ್ಟಿಗೆ ಸ್ಯಾಡಿಸ್ಟಿಕ್ ನೇಚರ್ ಇದ್ದರೆ ಹೇಗೆ? ನನ್ನನ್ನು ಸೋಲಿಸಿ, ಪರವಾಗಿಲ್ಲ. ಮೈಸೂರಿನ ಜನ ಸಿದ್ದರಾಮಯ್ಯ ಅವರಿಗೆ ಎಷ್ಟು ಬಾರಿ ನೋವು ಕೊಡುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ.

karnataka congress leader lakshman urges end to guarantee scheme

ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದರು. ಮೈಸೂರಿಗೆ ಏನು ಕೊಟ್ಟರು? ಆದರೆ, ಸಿದ್ದರಾಮಯ್ಯ ಜಯದೇವ ಆಸ್ಪತ್ರೆ ಸೇರಿದಂತೆ ಮೈಸೂರಿಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಸಿದ್ದರಾಮಯ್ಯ ಅವರಂಥ ಕ್ಲೀನ್ ಇಮೇಜ್ ಇರುವ ಸಿಎಂ ದೇಶದಲ್ಲಿ ಬೇರೆ ಎಲ್ಲಾದರೂ ಇದ್ದಾರಾ? ಎಂದರು.

ಗ್ಯಾರಂಟಿ ಯೋಜನೆ ಜನಕ್ಕೆ ಇಷ್ಟವಾಗಿಲ್ಲ

ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ ಎಂಬುದನ್ನು ಫಲಿತಾಂಶದ ಮೂಲಕ ತೋರಿಸಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರು ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು.

ಹುಣಸೂರಿನ ಹಲವು ಹಳ್ಳಿಗಳಲ್ಲಿ ಕೇವಲ ಒಂದೇ ಸಮುದಾಯದವರು ಇದ್ದಾರೆ. ಅಲ್ಲಿ ಬಿಜೆಪಿಗೆ 600 ಕ್ಕೂ ಹೆಚ್ಚು ಮತ ನೀಡಿದ್ದಾರೆ. ನನಗೆ ಕೇವಲ ಮೂರು, ಏಳು ಮತಗಳನ್ನು ನೀಡಿದ್ದಾರೆ. ಒಕ್ಕಲಿಗರು ನನಗೆ ಮತ ಹಾಕಿಲ್ಲ. ಹಳೆ ಮೈಸೂರು ಭಾಗದ ಎಂಟು ಜನ ಒಕ್ಕಲಿಗರನ್ನು ಸೋಲಿಸಿದ್ದೀರಿ. ನಾವು ಏನು ಅನ್ಯಾಯ ಮಾಡಿದ್ದೇವೆ ಹೇಳಿ. ಜೆಡಿಎಸ್- ಬಿಜೆಪಿಯಲ್ಲಿ ಇರುವವರು ಮಾತ್ರ ಒಕ್ಕಲಿಗರಾ? ನಾವು ಒಕ್ಕಲಿಗರು ಅಂತ ಸಾಬೀತು ಪಡಿಸಲು ಏನು ಮಾಡಬೇಕು ಎಂದು ಕೇಳಿದರು.

ಬಿಜೆಪಿ ಅಭ್ಯರ್ಥಿ ಯದುವೀರ್ ಜನರನ್ನು ಎಷ್ಟರ ಮಟ್ಟಿಗೆ ಅರಮನೆಗೆ ಬಿಟ್ಟುಕೊಳ್ಳುತ್ತಾರೋ ಇಲ್ಲವೋ ಗೊತ್ತಿಲ್ಲ. ನಾಳೆಯಿಂದಲೇ ನಾನು ಜನರ ಸಮಸ್ಯೆ ಪರಿಹರಿಸಲು ಮುಂದಾಗುತ್ತೇನೆ. ನನಗೆ ಮತ ಕೊಟ್ಟವರು, ಕೊಡದೆ ಇರುವವರು ಎಲ್ಲರೂ ನನ್ನ ಸಂಪರ್ಕ ಮಾಡಬಹುದು. ನಾಳೆಯೇ ನನ್ನ ಕಚೇರಿ ತೆರೆಯುತ್ತೇನೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+