Karnataka election 2023: ವರುಣದಲ್ಲಿ ಸಿದ್ದರಾಮಯ್ಯವರೇ ಗೆಲ್ತಾರೆಂದು 2 ಲಕ್ಷ ರೂ. ಬೆಟ್ಟಿಂಗ್ ಕಟ್ಟಿದ ಭೂಪ
ಮೈಸೂರು, ಮೇ, 12: ಈಗಾಗಲೇ ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ಮುಗಿದಿದ್ದು, ಶನಿವಾರ (ಮೇ 13) ರಂದು ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ನಿರ್ಧಾರ ಆಗಲಿದೆ. ಮತ್ತೊಂದೆಡೆ ಫಲಿತಾಂಶದ ವಿಚಾರವಾಗಿ ಐಪಿಎಲ್ ರೀತಿಯಲ್ಲೇ ಬೆಟ್ಟಿಂಗ್ ಕಾಳಗವೂ ಕೂಡ ಹೆಚ್ಚಾಗಿದೆ. ಅದೇ ರೀತಿ ಮೈಸೂರು ಜಿಲ್ಲೆಯಲ್ಲಿಯೂ ಕೂಡ ಬೆಟ್ಟಿಂಗ್ ದಂಧೆ ಸದ್ದು ಮಾಡುತ್ತಿದೆ. ಇಲ್ಲೊಬ್ಬ ಭೂಪ ವರುಣದಲ್ಲಿ ಸಿದ್ದರಾಮಯ್ಯವರೇ ಗೆಲ್ಲುತ್ತಾರೆಂದು 2 ಲಕ್ಷ ರೂ. ಬೆಟ್ಟಿಂಗ್ ಕಟ್ಟಿ ಪೇಚಿಗೆ ಸಿಲುಕಿದ್ದಾನೆ.
ರಾಜ್ಯ ವಿಧಾನಸಭೆ ಚುನಾವಣೆ ಅಂತೂ ಮುಗಿದಿದೆ. ಈಗ ಏನಿದ್ದರೂ ಫಲಿತಾಂಶದ್ದೆ ಜಪವಾಗಿದೆ. ಮೈಸೂರು ಜಿಲ್ಲೆಯಲ್ಲಿ ಎಲ್ಲಿ ನೋಡಿದರೂ ಚುನಾವಣಾ ಫಲಿತಾಂಶದ್ದೆ ಲೆಕ್ಕಾಚಾರ. ಈ ನಡುವೆ ಬೆಟ್ಟಿಂಗ್ ದಂಧೆ ಕೂಡ ಜೋರಾಗಿಯೇ ನಡೆಯುತ್ತಿದೆ.

ಜಿಲ್ಲೆಯ 11 ಕ್ಷೇತ್ರಗಳ ನಾನಾ ಪಕ್ಷಗಳ ನಾಯಕರು ಸೇರಿದಂತೆ ಒಟ್ಟು 143 ಮಂದಿ ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಹಾಗಯೆ ನಾಳೆ ಮಧ್ಯಾಹ್ನದೊಳಗೆ ಫಲಿತಾಂಶ ಪ್ರಕಟವಾಗಲಿದ್ದು, ಇದು ಕಾರ್ಯಕರ್ತರು ಹಾಗೂ ಸಾರ್ವಜನಿಕರ ಕುತೂಹಲಕ್ಕೆ ತೆರೆ ಬೀಳಲಿದೆ.
ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ವರುಣ ಕೂಡ ಒಂದು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ವಿ.ಸೋಮಣ್ಣ ಅವರ ಮುಖಾಮುಖಿಯಿಂದ ರಾಜ್ಯದಲ್ಲೇ ಹೆಚ್ಚು ಸದ್ದು ಮಾಡಿರುವ ವರುಣ ಕ್ಷೇತ್ರದ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ. ಇದರ ಬೆನ್ನಲ್ಲೇ ಅಭ್ಯರ್ಥಿಗಳ ಸೋಲು-ಗೆಲುವಿನ ಕುರಿತು ಲೆಕ್ಕಾಚಾರ ಜೋರಾಗಿದ್ದು, ಬೆಟ್ಟಿಂಗ್ ಭರಾಟೆ ನಡೆಯುತ್ತಿದೆ. ಸಿದ್ದರಾಮಯ್ಯ 100ಕ್ಕೆ ನೂರರಷ್ಟು ಗೆಲ್ಲುತ್ತಾರೆ ಎಂದು ಅಭಿಯಾನಿಯೊಬ್ಬ 2 ಲಕ್ಷ ರೂ. ಬೆಟ್ಟಿಂಗ್ ಕಟ್ಟಿದ್ದಾನೆ.
ಬೆಟ್ಟಿಂಗ್ ಭರಾಟೆ ಲಕ್ಷಾಂತರ ರೂಪಾಯಿ ಹಣದೊಂದಿಗೆ ಹೊಲ, ಜಮೀನು, ಜಾನುವಾರುಗಳನ್ನು ಪಣಕ್ಕಿಟ್ಟು ಅಭ್ಯರ್ಥಿಗಳ ಪರವಾಗಿ ಅವರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇಡೀ ರಾಜ್ಯ ನೋಡುತ್ತಿರುವ ವರುಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಗೆಲ್ಲುತ್ತಾರೋ ಅಥವಾ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ಗೆಲ್ಲುತ್ತಾರೋ ಎಂಬ ಕುತೂಹಲ ಹೆಚ್ಚಾಗಿದೆ.
ಇತರೇ ಕ್ಷೇತ್ರಗಳಿಗಿಂತ ವರುಣ ಕ್ಷೇತ್ರದಲ್ಲಿ ಬೆಟ್ಟಿಂಗ್ ಭರಾಟೆ ಹೆಚ್ಚಿದೆ. ವರುಣ ಕ್ಷೇತ್ರವಲ್ಲದೆ ಇಡೀ ಜಿಲ್ಲೆಯಲ್ಲಿ ಟೀ ಅಂಗಡಿ, ಅರಳಿಕಟ್ಟೆ ಮಾರುಕಟ್ಟೆ ಸೇರಿದಂತೆ ಎಲ್ಲಿ ನೋಡಿದರೂ ರಾಜಕೀಯ ಆಸಕ್ತರು ಮರುಣ ಕ್ಷೇತ್ರದ ಫಲಿತಾಂಶದ ಬಗ್ಗೆಯೇ ಚರ್ಚೆ ನಡೆಸುತ್ತಿದ್ದಾರೆ.
ಕೆ.ಆರ್.ನಗರದಲ್ಲೂ ಬೆಟ್ಟಿಂಗ್ ದಂಧೆ ಜೋರು
ಸಾಕಷ್ಟು ಕುತೂಹಲ ಮೂಡಿಸಿರುವ ಕ್ಷೇತ್ರಗಳಲ್ಲಿ ಕೆ.ಆರ್.ನಗರ ಕೂಡ ಒಂದು. ಇಲ್ಲಿ ಜೆಡಿಎಸ್‌ನಿಂದ ಸಾರಾ ಮಹೇಶ್ ಹಾಗೂ ಕಾಂಗ್ರೆಸ್‌ನಿಂದ ರವಿಶಂಕರ್ ಸ್ಪರ್ಧಿಸಿದ್ದಾರೆ. ಮತ್ತೊಂದೆಡೆ ಜಿದ್ದಾಜಿದ್ದಿನ ರಾಜಕಾರಣಕ್ಕೆ ಹೆಸರುವಾಸಿಯಾಗಿರುವ ಕೃಷ್ಣರಾಜನಗರದಲ್ಲೂ ಬೆಟ್ಟಿಂಗ್ ಭರಾಟೆ ಜೋರಾಗಿಯೇ ಇದೆ. ರವಿಶಂಕರ್ ಹಾಗೂ ಸಾರಾ ಮಹೇಶ್ ಗೆಲ್ಲುತ್ತಾರೆ ಎಂದು ಅಭಿಮಾನಿಗಳು ಜಮೀನು, ಹೊಲ ಪಣಕ್ಕೆ ಇಡುತ್ತಿದ್ದಾರೆ.
ಇತ್ತ ಪಿರಿಯಾಪಟ್ಟಣದಲ್ಲೂ ಬೆಟ್ಟಿಂಗ್ ಹಾಗೂ ಸೋಲು ಗೆಲುವಿನ ಲೆಕ್ಕಾಚಾರ ಜೋರಾಗಿಯೇ ಇದೆ. ಕಾಂಗ್ರೆಸ್‌ನಿಂದ ವೆಂಕಟೇಶ್ ಹಾಗೂ ಜೆಡಿಎಸ್‌ನಿಂದ ಮಹದೇವು ಸ್ಪರ್ಧಿಸಿದ್ದಾರೆ. ಇಲ್ಲೂ ಜನ ಕುರಿ, ಮೇಕೆ, ನಾಟಿಕೋಳಿ ಹಾಗೂ ನಗದು ಹಲಣವನ್ನು ಬೆಟ್ಟಿಂಗ್‌ಗೆ ಕಟ್ಟುತ್ತಿದ್ದಾರೆ.
ಅದೇ ರೀತಿ ಜಿ.ಟಿ.ದೇವೇ ಗೌಡ ಸ್ಪರ್ಧಿಸಿರುವ ಚಾಮುಂಡೇಶ್ವರಿ, ಜಿ.ಟಿ.ದೇವೇಗೌಡರ ಪುತ್ರ ಜಿ.ಡಿ.ಹರೀಶ್ ಗೌಡ ಸ್ಪರ್ಧಿಸಿರುವ ಹುಣಸೂರು, ದರ್ಶನ್ ಧ್ರುವ ನಾರಾಯಣ್ ಸ್ಪರ್ಧಿಸಿರುವ ನಂಜನಗೂಡು, ಮತ್ತೆ ಅದೃಷ್ಟ ಪರೀಕ್ಷೆಗೆ ಮುಂದಾಗಿರುವ ಡಾ. ಎಚ್.ಸಿ.ಮಹದೇವಪ್ಪ ಸ್ಪರ್ಧಿಸಿರುವ ನರಸೀಪುರ ಕ್ಷೇತ್ರಗಳಲ್ಲಿ ಬೆಟ್ಟಿಂಗ್ ಭರಾಟೆ ಜೋರಾಗಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎಂಬುದು ಸುಳ್ಳು: ವಿರೋಧ ಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications