ಕೆ.ಆರ್.ಕ್ಷೇತ್ರದಲ್ಲಿ ಬಿಜೆಪಿಯ ಹೊಸ ಪ್ರಯೋಗ: ಯಾರ ನಡುವೆ ತೀವ್ರ ಪೈಪೋಟಿ?, ಇಲ್ಲಿದೆ ವಿವರ
ಮೈಸೂರು, ಮೇ, 01: ಮೈಸೂರು ಜಿಲ್ಲೆಯ ಕೆ.ಆರ್.ಕ್ಷೇತ್ರದಲ್ಲಿ ಬಿಜೆಪಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಡಿರುವ ಬದಲಾವಣೆಯಿಂದ ಪಕ್ಷದ ಮೇಲೆ ಏನಾದರೂ ಪರಿಣಾಮ ಬೀರುತ್ತಾ? ಹೊಸ ಪ್ರಯೋಗದಿಂದ ಯಾರಿಗೆ ಲಾಭ? ಯಾರಿಗೆ ನಷ್ಟ? ಎಂಬ ಚರ್ಚೆಗಳು ಈಗಾಗಲೇ ಕ್ಷೇತ್ರದಲ್ಲಿ ನಡೆಯುತ್ತಿದೆ. ಆದರೆ ಒಳಗೆ ಅಸಮಾಧಾನವಿದ್ದರೂ ಮೇಲ್ನೋಟಕ್ಕೆ ಏನೂ ಆಗಿಲ್ಲ ಎಂಬಂತೆ ಬಿಜೆಪಿ ಮುಖಂಡರು ಮತಯಾಚನೆಯಲ್ಲಿ ತೊಡಗಿರುವುದು ಎದ್ದು ಕಾಣಿಸುತ್ತಿದೆ.
ಬಿಜೆಪಿ ನಗರಾಧ್ಯಕ್ಷರಾಗಿದ್ದ ಶ್ರೀವತ್ಸ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡ ಹಾಲಿ ಶಾಸಕ ಎಸ್.ಎ.ರಾಮದಾಸ್ ಅವರು ಬಂಡಾಯ ಏಳುತ್ತಾರೆ, ಇದರಿಂದ ಬಿಜೆಪಿ ಬಲ ಕುಗ್ಗಲಿದೆ ಎಂದೇ ವಿಶ್ಲೇಷಣೆ ಮಾಡಲಾಗಿತ್ತು. ಆದರೆ ಕೊನೇ ಗಳಿಗೆಯಲ್ಲಿ ತನಗೇನು ಅಸಮಾಧಾನವಿಲ್ಲ. ನನಗೆ ಪಕ್ಷ ತಾಯಿಯಿದ್ದಂತೆ. ಸೇವೆಗೆ ಸಿದ್ಧ ಎಂಬ ಘೋಷಣೆಯನ್ನು ರಾಮದಾಸ್ ಮಾಡಿದರು. ಅಲ್ಲದೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರವೇ ಮತಯಾಚನೆಗಿಳಿದರು. ಈಗ ಬಿಜೆಪಿಯಲ್ಲಿ ಎಲ್ಲವೂ ಸರಿಹೋಗಿರುವಂತೆ ಭಾಸವಾಗುತ್ತಿದೆ.

ಇದೆಲ್ಲದರ ನಡುವೆ ರೋಡ್ ಶೋಗೆ ಬಂದಿದ್ದ ನರೇಂದ್ರ ಮೋದಿ ಅವರು ತನ್ನ ಬಳಿಯೇ ರಾಮದಾಸ್ ಅವರನ್ನು ಇಟ್ಟುಕೊಂಡಿದ್ದು ವಿಶೇಷವಾಗಿತ್ತು. ಇದೀಗ ರಾಮದಾಸ್ ಪಕ್ಷದಲ್ಲಿ ತನಗೇನು ಆಗಿಲ್ಲ ಎಂಬಂತೆ ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಮತ್ತೊಂದು ಕಡೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಎಂ.ಕೆ.ಸೋಮಶೇಖರ್‌ಗೆ ಈ ಹಿಂದಿನಿಂದಲೂ ರಾಮದಾಸ್ ಅವರು ಪ್ರಬಲ ಸ್ಪರ್ಧಿಯಾಗಿಯೇ ಮುಂದುವರೆದುಕೊಂಡು ಬಂದಿದ್ದಾರೆ. 2013ರ ವಿಧಾನಸಭಾ ಚುನಾವಣೆಯಲ್ಲಿ ರಾಮದಾಸ್ ವಿರುದ್ಧ ಎಂ.ಕೆ.ಸೋಮಶೇಖರ್ ಗೆಲುವು ಸಾಧಿಸಿದ್ದರು.
ರಾಮದಾಸ್ ರಾಜಕೀಯದ ಹಾದಿ
ಅವತ್ತು ರಾಮದಾಸ್ ಅವರ ಸೋಲಿಗೆ ಕಾರಣವೂ ಇತ್ತು. ಅದು ಏನೆಂದರೆ ಅಷ್ಟರಲ್ಲೇ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು ಕೆಜೆಪಿ ಕಟ್ಟಿದ್ದರು. ಅವರ ಬೆಂಬಲಿಗರಾಗಿದ್ದ ಎಚ್.ವಿ.ರಾಜೀವ್ ಅವರು ಬಿಜೆಪಿ ಬಿಟ್ಟು ಕೆಜೆಪಿಯಿಂದ ಸ್ಪರ್ಧಿಸಿದ್ದರು. ಹೀಗಾಗಿ ಕ್ಷೇತ್ರದಲ್ಲಿ ಮತ ವಿಭಜನೆಯಾಗಿ ಕಾಂಗ್ರೆಸ್‌ನ ಅಭ್ಯರ್ಥಿಯಾಗಿದ್ದ ಎಂ.ಕೆ.ಸೋಮಶೇಖರ್ ಗೆಲುವು ಕಂಡಿದ್ದರು.
ಅದಾದ ನಂತರದ ಬೆಳವಣಿಗೆಯಲ್ಲಿ ಬಿ.ಎಸ್.ಯಡಿಯೂರಪ್ಪ ಮರಳಿ ಬಿಜೆಪಿಗೆ ಬರುವುದರೊಂದಿಗೆ 2018ರಲ್ಲಿ ಮತ್ತೆ ಚುನಾವಣೆ ನಡೆದಾಗ ಬಿಜೆಪಿ ಅಭ್ಯರ್ಥಿಯಾಗಿದ್ದ ರಾಮದಾಸ್ ಅವರು ಅವತ್ತು ಶಾಸಕರಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಎಂ.ಕೆ.ಸೋಮಶೇಖರ್ ಅವರನ್ನು ಸೋಲಿಸಿ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಿದ್ದರು.
ಇನ್ನು ರಾಮದಾಸ್ ಅವರು ಕೆ.ಆರ್.ಕ್ಷೇತ್ರದ ಜನರ ನಾಡಿಮಿಡಿತವನ್ನು ಚೆನ್ನಾಗಿ ಅರಿತಿದ್ದಾರೆ. ಇದುವರೆಗೂ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಅವರ ವಿರುದ್ಧ ಪಕ್ಷದೊಳಗೆ ಅಸಮಾಧಾನಗಳು ಎದ್ದಿದ್ದವು. ಸ್ವತಃ ಸಂಸದ ಪ್ರತಾಪ್ ಸಿಂಹ ಅವರೊಂದಿಗಿನ ಮನಸ್ತಾಪಗಳು ಬಹಿರಂಗಗೊಂಡಿದ್ದವು. ನಂತರ ಅವರದ್ದೇ ವಿಪ್ರ ಸಮುದಾಯದವರು ತಿರುಗಿಬಿದ್ದಿದ್ದರು. ಈ ಮೂಲಕ ರಾಮದಾಸ್ ಅವರಿಗೆ ಈ ಬಾರಿ ಟಿಕೆಟ್ ನೀಡದಂತೆ ಒತ್ತಡ ತಂದಿದ್ದವು.
ಬಿಜೆಪಿ, ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ
ಈ ಬಾರಿಯೂ ಸುಲಭವಾಗಿ ಗೆಲ್ಲಲ್ಲಿದ್ದ ಎಸ್.ಎ.ರಾಮದಾಸ್ ಅವರಿಗೆ ಕೊನೆಗಳಿಗೆಯಲ್ಲಿ ಟಿಕೆಟ್ ನೀಡದೆ ಶ್ರೀವತ್ಸ ಅವರಿಗೆ ಟಿಕೆಟ್ ನೀಡಲಾಗಿತ್ತು. ಇದೀಗ ಕೆ.ಆರ್.ಕ್ಷೇತ್ರದಲ್ಲಿ ಶ್ರೀವತ್ಸ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಕ್ಷೇತ್ರವು ಬಿಜೆಪಿಯ ಭದ್ರಕೋಟೆಯಾಗಿದ್ದು, ಇಲ್ಲಿ ಬಿಜೆಪಿಯಿಂದ ಸ್ಪರ್ಧಿಸುವವರು ಸುಲಭವಾಗಿ ಗೆಲ್ಲುತ್ತಾರೆ ಎಂಬ ಲೆಕ್ಕಚಾರವನ್ನು ಮಾಡಲಾಗುತ್ತದೆ. ಅದು ನಿಜನಾ? ಜನ ಪಕ್ಷ ನೋಡಿ ಮತ ಹಾಕುತ್ತಾರಾ? ಪಕ್ಷದೊಂದಿಗೆ ವ್ಯಕ್ತಿಯನ್ನು ಪರಿಗಣಿಸುತ್ತಾರಾ? ಎಂಬುದು ಈ ಬಾರಿ ಗೊತ್ತಾಗಲಿದೆ.
ಇದುವರೆಗೂ ರಾಮದಾಸ್ ಅವರು 1994, 1999, 2008 ಮತ್ತು 2018 ರಲ್ಲಿ ಗೆಲುವು ಸಾಧಿಸಿದ್ದಾರೆ. ಈ ಬಾರಿಯ ಚುನಾವಣೆ ಬಿಜೆಪಿಗೆ ಅಗ್ನಿ ಪರೀಕ್ಷೆಯಾಗುವ ಲಕ್ಷಣ ಕಂಡುಬರುತ್ತಿದೆ. ಇನ್ನು ಕಾಂಗ್ರೆಸ್‌ನಿಂದ ಎಂ.ಕೆ.ಸೋಮಶೇಖರ್ ಅವರಿಗೂ ಈ ಬಾರಿ ಸುಲಭವಾಗಿ ಟಿಕೆಟ್ ದಕ್ಕಿಲ್ಲ. ಕಾಂಗ್ರೆಸ್ ನಾಯಕರು ಕೂಡ ಅಳೆದು ತೂಗಿ ಸೋಮಶೇಖರ್ ಅವರಿಗೆ ಟಿಕೆಟ್ ನೀಡಿದೆ. ಇನ್ನು ಜೆಡಿಎಸ್‌ನಿಂದ ಕೆ.ವಿ.ಮಲ್ಲೇಶ್ ಕಣಕ್ಕಿಳಿದಿದ್ದಾರೆ. ಇದೆಲ್ಲವನ್ನು ಗಮನಿಸಿದರೆ ಮೇಲ್ನೋಟಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಸ್ಪರ್ಧೆ ಕಂಡುಬರುತ್ತಿದೆ.
ಮತದಾರರ ಲೆಕ್ಕಚಾರ ಏನಿರಬಹುದು?
ಇನ್ನು ಕ್ಷೇತ್ರದ ಬಗ್ಗೆ ಹೇಳಬೇಕೆಂದರೆ ಈ ಕ್ಷೇತ್ರದಲ್ಲಿ ಸುಶಿಕ್ಷಿತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇದುವರೆಗೆ ನಡೆದ ಹನ್ನೆರಡು ಚುನಾವಣೆಗಳಲ್ಲಿ ನಾಲ್ಕು ಬಾರಿ ಕಾಂಗ್ರೆಸ್, ಐದು ಬಾರಿ ಬಿಜೆಪಿ, ಎರಡು ಬಾರಿ ಜನತಾ ಪಕ್ಷ, ಒಮ್ಮೆ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಬ್ರಾಹ್ಮಣ, ವೀರಶೈವ ಲಿಂಗಾಯತರು, ಕುರುಬರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು, ಒಕ್ಕಲಿಗರ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಾರಿ ಕ್ಷೇತ್ರದಲ್ಲಿ ರಾಮದಾಸ್ ಅವರನ್ನು ಕಡೆಗಣಿಸಿರುವುದರಿಂದ ಕಾಂಗ್ರೆಸ್‌ಗೆ ಲಾಭವಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೂ ಕ್ಷೇತ್ರದ ಜನ ವ್ಯಕ್ತಿಯನ್ನು ನೋಡಿ ಅಥವಾ ಪಕ್ಷವನ್ನು ನೋಡಿ ಮತ ಹಾಕುತ್ತಾರೆಯೋ ಎಂಬುದನ್ನು ಕಾದುನೋಡಬೇಕಾಗಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications