Karnataka election 2023: ಚಾಮರಾಜಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಣೆ, ಭವಾನಿ ರೇವಣ್ಣ ಅಲ್ಲ ಮತ್ಯಾರು?, ಇಲ್ಲಿದೆ ಮಾಹಿತಿ
ಮೈಸೂರು, ಏಪ್ರಿಲ್, 17: ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಲ್ಲಿದ್ದು, ಎಲ್ಲಾ ಪಕ್ಷಗಳಲ್ಲೂ ಹಲವು ಬದಲಾವಣೆಗಳು ಆಗುತ್ತಿವೆ.
ಹಾಗೆಯೇ ಬಹಳ ಕುತೂಹಲ ಮೂಡಿಸಿದ್ದ ಚಾಮರಾಜ ಕ್ಷೇತ್ರಕ್ಕೆ ಜೆಡಿಎಸ್ ಕೊನೆಗೂ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿದೆ. ಮತ್ತೊಂದೆಡೆ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಚಾಮರಾಜ ಕ್ಷೇತ್ರಕ್ಕೆ ಬರುತ್ತಾರೆಂಬ ನಿರೀಕ್ಷೆ ಹುಸಿಗೊಂಡಿದ್ದು, ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಎಚ್. ಕೆ.ರಮೇಶ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಈ ಮೂಲಕ ಕುತೂಹಲಕ್ಕೆ ತೆರೆ ಎಳೆಯಲಾಗಿದೆ.

ಇನ್ನು ಎಚ್.ಡಿ.ಕೋಟೆಯ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಜನತಾ ಪಕ್ಷದಲ್ಲಿ ಶಾಸಕರಾಗಿದ್ದ ಕೆಂಪೇಗೌಡರ ಪುತ್ರ ಎಚ್.ಕೆ.ರಮೇಶ್‌ಗೆ ಪಟ್ಟಣದ ತಾತ್ಕಾಲಿಕ ಹೆಲಿಪ್ಯಾಡ್‌ನಲ್ಲಿ ಬಿ ಫಾರಂ ನೀಡಿ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.
ಹಾಸನ ಕ್ಷೇತ್ರದಲ್ಲಿ ಟಿಕೆಟ್ ವಂಚಿತರಾಗಿದ್ದ ಭವಾನಿ ರೇವಣ್ಣ ಅವರು ಚಾಮರಾಜ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಊಹಾಪೋಹಕ್ಕೆ ಇದೀಗ ಎಚ್.ಡಿ.ಕುಮಾರಸ್ವಾಮಿ ಅವರು ತೆರೆ ಎಳೆದಿದ್ದಾರೆ. ಟಿಕೆಟ್ ಆಕಾಂಕ್ಷಿಗಳಾಗಿದ್ದ ಮಹಾನಗರ ಪಾಲಿಕೆ ಸದಸ್ಯರಾದ ಎಸ್.ಬಿ.ಎಂ. ಮಂಜು, ಕೆ.ವಿ.ಶ್ರೀಧರ್, ಅವ್ವ ಮಾದೇಶ್, ಪ್ರೇಮಾ ಶಂಕರೇಗೌಡ, ಶೋಭಾ ಮಹದೇವ್ ಸೇರಿದಂತೆ ಇನ್ನುಳಿದವರು ತೆರೆಮರೆಗೆ ತೆರೆಮರೆಗೆ ಸರಿದುಕೊಂಡಿದ್ದಾರೆ.
ವಾಸುಗೆ ಕಾಂಗ್ರೆಸ್ ಟಿಕೆಟ್ ಮಿಸ್
ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ವಾಸು ಅವರು ಜೆಡಿಎಸ್ ಕೈ ಹಿಡಿಯಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಆದರೆ, ವಾಸು ಅವರು ಸದ್ಯ ಯಾವುದೇ ನಿರ್ಧಾರವನ್ನು ಕೈಗೊಳ್ಳದಿದ್ಧರಿಂದ ಪಕ್ಷ ರಮೇಶ್‌ಗೆ ಬಿ ಫಾರಂ ನೀಡಿದೆ ಎನ್ನುವ ಕೂಗು ಎದ್ದಿದೆ.

ವರುಣಗೆ ಡಾ.ಭಾರತೀಶಂಕರ್
ಕಾಂಗ್ರೆಸ್‌ನಿಂದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಬಿಜೆಪಿಯಿಂದ ಸಚಿವ ವಿ.ಸೋಮಣ್ಣ ಸ್ಪರ್ಧಿಸುತ್ತಿರುವ ವರುಣ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯನ್ನು ಬದಲಾವಣೆ ಮಾಡಿದೆ. ಈ ಹಿಂದೆಯೂ ಸಹ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅಭಿಷೇಕ್ ಅವರಿಗೆ ಈ ಬಾರಿಯೂ ಟಿಕೆಟ್ ಘೋಷಣೆ ಮಾಡಲಾಗಿತ್ತು. ಆದರೆ ಅಭಿಷೇಕ್ ಮಾತ್ರ ಯಾವುದೇ ಪ್ರಚಾರ ಕಾರ್ಯದಲ್ಲಿ ತೊಡಗದೆ ತಟಸ್ಥರಾಗಿ ಇದ್ದರು.
ಈ ಬೆಳವಣಿಗೆಗಳನ್ನು ಗಮನಿಸಿದ ಜೆಡಿಎಸ್ ಇವರ ಬದಲಿಗೆ ಮತ್ತೊಬ್ಬ ಅಭ್ಯರ್ಥಿಯನ್ನು ಘೋಷಿಸಬೇಕು ಎಂಬ ಒತ್ತಡ ಕಾರ್ಯಕರ್ತರಿಂದ ಬಂದಿತ್ತು. ಅದರಂತೆಯೇ ತಿ.ನರಸೀಪುರ ಬಿಜೆಪಿ ಟಿಕೆಟ್ ವಂಚಿತ, ಮಾಜಿ ಶಾಸಕ ಡಾ.ಭಾರತೀ ಶಂಕರ್ ಅವರನ್ನು ಜೆಡಿಎಸ್‌ಗೆ ಸೇರ್ಪಡೆ ಮಾಡಿಕೊಂಡು ಅವರಿಗೆ ವರುಣ ಕ್ಷೇತ್ರದ ಜೆಡಿಎಸ್ ಟಿಕೆಟ್ ನೀಡಲಾಗಿದೆ. ನರಸಿಂಹರಾಜ ಹೊರತುಪಡಿಸಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೂ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ಎನ್.ಆರ್.ನಲ್ಲಿ ಕುತೂಹಲ ಹುಟ್ಟುಹಾಕಿದೆ.
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications